ಜೋಗೇಶ್ವರಿ  ಶ್ರೀ ರಾಘವೇಂದ್ರ ಮಠ: ಆರಾಧನಾ ಮಹೋತ್ಸವ


Team Udayavani, Aug 15, 2017, 2:31 PM IST

12-Mum07c.jpg

ಮುಂಬಯಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಸಂಸ್ಥಾನದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 346ನೇ ಆರಾಧನ ಮಹೋತ್ಸವವು ಮೂಲ ಮಠದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥ ಶ್ರೀಗಳ ಶುಭಾಶೀರ್ವಾದಗಳೊಂದಿಗೆ ಜೋಗೇಶ್ವರಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ. 10ರಂದು ಸಮಾಪ್ತಿಗೊಂಡಿತು.

ಆ. 6ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆಯೊಂದಿಗೆ ಪ್ರಾರಂಭಗೊಂಡ ಆರಾಧನಾ ಮಹೋತ್ಸವದಲ್ಲಿ ಧ್ವಜಾರೋಹಣ, ಗೋಪೂಜೆ, ಲಕ್ಷ್ಮೀ ಪೂಜೆ, ಧಾನ್ಯೋತ್ಸವ, ಸ್ವಸ್ತಿ:ವಾಚನ ಮತ್ತು ಮಂಗಳಾರತಿ ಜರಗಿತು. ರಾಯರ ಆರಾಧನೆಯ ಆ. 8ರಂದು ಪೂರ್ವಾರಾಧನೆಯೊಂದಿಗೆ ಪ್ರಾರಂಭಗೊಂಡು ಆ. 9ರಂದು ಮಧ್ಯಾರಾಧನೆ ಮತ್ತು ಆ. 10ರಂದು ಉತ್ತರಾಧನೆಯಲ್ಲಿ ಸಂಪನ್ನಗೊಂಡಿತು.

ಮೂರು ದಿನಗಳಲ್ಲಿ ನಡೆದ ರಾಯರ ಆರಾಧನೆಯಲ್ಲಿ ರಾಯರಿಗೆ ನಿರ್ಮಲ ವಿಸರ್ಜನೆ, ಉತ್ಸವ ರಾಯರ ಪಾದಪೂಜೆ, ಪಾಲ ಪಂಚಾಮೃತ, ರಥೋತ್ಸವ, ತುಳಸಿ ಅರ್ಚನೆ, ಅಲಂಕಾರ ಪೂಜೆ, ಅಷ್ಟೋದ‌ಕ ಮಹಾಮಂಗಳಾರತಿ, ಸಮರ್ಪಣೆ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.  ಭಕ್ತರಿಂದ ವಿವಿಧ ಪೂಜೆಗಳು ರಾಯರಿಗೆ ಅರ್ಪಿತವಾದತು.

ಶ್ರೀ ರಾಯರ 346ನೇ ಆರಾಧನಾ ಮಹೋತ್ಸವವು ನೂತನ ಅಭಿನವ ಮಂತ್ರಾಲಯದಲ್ಲಿ ಜರಗಿತು. ನೂತನ ಮಂದಿರದಲ್ಲಿ ವೆಂಕಟೇಶ್ವರ, ಶ್ರೀದೇವಿ, ಭೂದೇವಿ, ಮುಖ್ಯಪ್ರಾಣ, ನವಗ್ರಹ, ಗಣಪತಿ, ಮಂಚಾಲಮ್ಮ ಜೊತೆಗೆ ರಾಘವೇಂದ್ರ ಸ್ವಾಮಿಗಳ ಮೃತಿಕಾ ಬೃಂದಾವನವು ಇಲ್ಲಿ ಪ್ರತೀ ದಿನ ಆರಾಧಿಸಲ್ಪಡುತ್ತದೆ. ಶುಕ್ರವಾರದಂದು ಶ್ರೀನಿವಾಸ ಕಲ್ಯಾಣ ಪೂಜೆಯು ಜರಗುತ್ತಿದೆ. ಮಠದಲ್ಲಿ ಹಲವು ಯೋಜನಾತ್ಮಕ ಕೆಲಸಗಳನ್ನು ಕೈಗೊಳ್ಳಲಾಗಿದ್ದು, ಅದು ಶೀಘ್ರದಲ್ಲೇ ನೆರವೇರಲಿದೆ.

ಕಳೆದ 3 ದಿನಗಳ ರಾಯರ ಆರಾಧನ ಉತ್ಸವದಲ್ಲಿ ಭಕ್ತಾದಿಗಳು  ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು. ಮಠದ ಆಡಾಳಿತಾಧಿಕಾರಿ ವಿ. ಪೂರ್ಣಪ್ರಜ್ಞ, ಮುಖ್ಯ ಪ್ರಬಂಧಕ ರಮಾಕಾಂತ್‌ ಮಾನ್ವಿ, ಪ್ರಧಾನ ಅರ್ಚಕ ಗುರುರಾಜ ಆಚಾರ್ಯ, ಅರ್ಚಕ ವೃಂದದವರು ಆರಾಧನೆಯ ಯಶಸ್ಸಿಗೆ ಸಹಕರಿಸಿದರು. ಭಕ್ತರಿಂದ ಹಾಗೂ ಮಹಾಲಕ್ಷ್ಮೀಭಜನ ಮಂಡಳಿ ಅಂಧೇರಿ ಇವರಿಂದ ಭಜನ ಕಾರ್ಯಕ್ರಮ ಜರಗಿತು. 

 ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.