ಕಾಲಘೋಡಾ ಸಾಯಿಬಾಬಾ ಪೂಜಾ ಸಮಿತಿ:48ನೇ ಮಹಾಸಭೆ


Team Udayavani, Nov 10, 2018, 5:06 PM IST

0911mum08.jpg

ಮುಂಬಯಿ: ಕಾಲಘೋಡಾ ಸಾಯಿಬಾಬಾ ಪೂಜಾ ಸಮಿತಿಯ 48 ನೇ ವಾರ್ಷಿಕ ಮಹಾಸಭೆಯು ನ. 7 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಾಲಘೋಡಾ ಹೋಪ್‌ ರಸ್ತೆಯಲ್ಲಿನ ಮಂದಿರದ ವಠಾರದಲ್ಲಿ ಅದ್ದೂರಿಯಾಗಿ ನಡೆಯಿತು.

ಸಮಿತಿಯ ಸದಸ್ಯ ವಿದ್ಯಾಧರ ಶೆಟ್ಟಿ ದಂಪತಿಯ ಉಪಸ್ಥಿತಿಯಲ್ಲಿ ಬೊರಿವಲಿ ಸಾವರ್‌ಪಾಡಾದ ಶ್ರೀ ಶನೀಶ್ವರ ಮಂದಿರದ ಬಿ. ವಿಷ್ಣು ಭಟ್‌ ಅವರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಿತು. ವಿದ್ಯಾದಾಯಿನಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆದು, ಮಧ್ಯಾಹ್ನ 12ರಿಂದ ಸಾಯಿಬಾಬಾ ಮಹಾಪೂಜೆ ಮತ್ತು ಸಾಯಿ ಮಹಾಮಂಗಳಾರತಿಯು ರಮೇಶ್‌ ಪೂಜಾರಿ ಮತ್ತು ಪ್ರದೀಪ್‌ ಸುವರ್ಣ ಅವರಿಂದ ನಡೆಯಿತು. ಪೂಜಾ ಮಂಟಪವನ್ನು ಡೊಂಬಿವಲಿಯ ಎಂ. ಡಿ. ಮೋಹನ್‌ದಾಸ್‌ ಅವರು ಅಲಂಕರಿಸಿದ್ದರು.

ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಮಾಧವ ಎಸ್‌. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರವನ್ನಿತ್ತು ಮಾತನಾಡಿ, ಸಮಿತಿಯು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉತ್ತಮ ಸಮಾಜ ಸೇವೆಯನ್ನು ಮಾಡುತ್ತಾ ಬರುತ್ತಿದೆ. ದಾನಿಗಳ ಸಹಾಯದಿಂದ ಸಮಾಜಪರ  ಕಾರ್ಯಕ್ರಮಗಳು ನಡೆಯುತ್ತಿದ್ದು, ಸಮಿತಿಯ ಈ ಎಲ್ಲಾ ಸೇವೆಗಳಿಗೆ ದಾನಿಗಳ ಸಂಪೂರ್ಣ ಸಹಕಾರವಿರಲಿ ಎಂದರು.

ಗೌರವ ಕಾರ್ಯದರ್ಶಿ ಪ್ರೊ| ಕೇಶವ ಎಚ್‌. ಕರ್ಕೇರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಮಿತಿಯು ಪ್ರತೀ ವರ್ಷ ವಿದ್ಯಾರ್ಥಿ ವೇತನ, ವೈದ್ಯಕೀಯ ನೆರವು ನೀಡುವುದರೊಂದಿಗೆ ನಿರ್ಗತಿಕ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿಯನ್ನು ಬೊರಿವಲಿಯ ಕಚೇರಿಯಲ್ಲಿ ನೀಡುತ್ತಿದೆ ಎಂದು ನುಡಿದು ಸಂಸ್ಥೆಯ  ಧಾರ್ಮಿಕ ಹಾಗೂ ಸಮಾಜ ಸೇವೆಗೆ ಸಹಕರಿಸಿದ ದಾನಿಗಳನ್ನು ಅಭಿನಂದಿಸಿದರು.

ಜತೆ ಕಾರ್ಯದರ್ಶಿ ರಮೇಶ್‌ ಬಿ. ಶೆಟ್ಟಿ ಮಿಜಾರು ಕಾರ್ಯಕ್ರಮ ನಿರ್ವಹಿಸಿದರು. ಪೂಜಾ ಕಾರ್ಯದಲ್ಲಿ ಉಪಾಧ್ಯಕ್ಷ ಜಯ ಎಸ್‌. ಶೆಟ್ಟಿ, ಕೋಶಾಧಿಕಾರಿ ಆರ್‌. ಡಿ. ಶೇಣವ, ಜತೆ ಕೋಶಾಧಿಕಾರಿ ಭಾಸ್ಕರ ಎಂ. ಶೆಟ್ಟಿ, ಟ್ರಸ್ಟಿಗಳಾದ ಸೀತಾರಾಮ ಎಸ್‌. ಶೆಟ್ಟಿ, ಜಯ ಎಂ. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಸುಧಾಕರ ಶೆಟ್ಟಿ, ಸತೀಶ್‌ ಭಂಡಾರಿ, ರವಿ ಎಸ್‌. ಶೆಟ್ಟಿ, ಮುರಳಿ ಅಗ್ನಿàಶ್ವರ್‌, ಪರೀಕ್ಷತ್‌ ಎನ್‌. ರೈ ಹಾಗೂ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಪ್ರಸಾದ ವಿತರಣೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಾಯಿಭಕ್ತರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಮಾಜ ಸೇವಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.