ಕನ್ನಡಿಗ ಕಲಾವಿದರ ಪರಿಷತ್ತು ದಶಮಾನೋತ್ಸವ ಸಮಾರೋಪ

Team Udayavani, Mar 1, 2017, 4:58 PM IST

28-Mum07.jpg

ಮುಂಬಯಿ: ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ದಶಮಾನೋತ್ಸವ ಸಮಾರಂಭವು ಫೆ. 25ರಂದು ಪೂರ್ವಾಹ್ನ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ದಿನವಿಡೀ ಜರಗಿತು.

ಬಂಟ್ಸ್‌ ಸಂಘ ಮುಂಬಯಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ ಅವರು ವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ನಗರದ ಹಿರಿಯ ಸಾಹಿತಿ, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಹಿರಿಯ ಸಲಹೆಗಾರ್ತಿ ಡಾ| ಸುನೀತಾ ಎಂ. ಶೆಟ್ಟಿ ಅವರಿಗೆ “ಸಾಹಿತ್ಯದ ಸಿರಿ ಕಲಾವಿದರ ಐಸಿರಿ’ ವಿಶೇಷವಾಗಿ ಬಿರುದು ಪ್ರದಾನಿಸಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಸಮಾರಂಭದಲ್ಲಿ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಶ್ರೀ  ಕೃಷ್ಣ ವಿಠಲ ಪ್ರತಿಷ್ಠಾನ ಮುಂಬಯಿ  ಸಂಸ್ಥಾಪಕ ವಿದ್ವಾನ್‌ ಕೈರಬೆಟ್ಟು  ವಿಶ್ವನಾಥ ಭಟ್‌, ಉದ್ಯಮಿ ಹಾಗೂ ಸಮಾಜ ಸೇವಕರಾದ ಬಿ. ವಿವೇಕ ಶೆಟ್ಟಿ, ಕರುಣಾಕರ್‌ ಎಂ. ಶೆಟ್ಟಿ, ಶಂಕರ ಶೆಟ್ಟಿ ವಿರಾರ್‌, ಭಾಸ್ಕರ ಶೆಟ್ಟಿ ಖಾಂದೇಶ್‌,  ಶ್ರೀನಿವಾಸ ಸಾಫಲ್ಯ,  ಎನ್‌. ಎನ್‌. ಪಾಲ್‌, ಐಕಳ ಗುಣಪಾಲ ಶೆಟ್ಟಿ, ಡಾ| ಆರ್‌. ಕೆ. ಶೆಟ್ಟಿ, ಸಂತೋಷ್‌ ಶೆಟ್ಟಿ ಪುಣೆ, ಲತಾ ಪ್ರಭಾಕರ್‌ ಶೆಟ್ಟಿ, ಅಮರನಾಥ ಶೆಟ್ಟಿ, ಬಂಟ್ಸ್‌ ಸಂಘ ಮುಂಬಯಿ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಶೆಟ್ಟಿ ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಲತಾ ಜಯರಾಮ ಶೆಟ್ಟಿ, ಬಂಟ್ಸ್‌ ಸಂಘ ಮುಂಬಯಿ ಇದರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ.ಭಂಡಾರಿ, ದಶಮಾನೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿ ದೇವದಾಸ ಪಿ. ಸಾಲ್ಯಾನ್‌, ಪರಿಷತ್ತಿನ ಸಂಸ್ಥಾಪಕಾಧ್ಯಕ್ಷ ಎಸ್‌. ಟಿ. ವಿಜಯಕುಮಾರ್‌ ತಿಂಗಳಾಯ, ಉಪಾಧ್ಯಕ್ಷರಾದ ಕಮಲಾಕ್ಷ ಜಿ. ಸರಾಫ್‌ ಮತ್ತು ನ್ಯಾಯವಾದಿ ಸುಭಾಷ್‌ ಬಿ. ಶೆಟ್ಟಿ, ಗೌ| ಕೋಶಾಧಿಕಾರಿ ಪಿ. ಬಿ. ಚಂದ್ರಹಾಸ್‌, ಜೊತೆ ಕಾರ್ಯದರ್ಶಿ ಚಂದ್ರಾವತಿ ದೇವಾಡಿಗ, ಜೊತೆ ಕೋಶಾಧಿಕಾರಿ ನವೀನ್‌ ಶೆಟ್ಟಿ ಇನ್ನಬಾಳಿಕೆ ಅವರು ಉಪಸ್ಥಿತರಿದ್ದರು.

ವಿಶೇಷ ಆಮಂತ್ರಿತರಾಗಿ ಉಮಾಕೃಷ್ಣ ಶೆಟ್ಟಿ,  ಶಿವರಾಮ ಜಿ. ಶೆಟ್ಟಿ ಅಜೆಕಾರು, ಶ್ಯಾಮ ಎನ್‌. ಶೆಟ್ಟಿ, ಭಾಸ್ಕರ ಶೆಟ್ಟಿ ಕಾಶಿಮೀರಾ, ರತ್ನಾಕರ ಶೆಟ್ಟಿ ಮುಂಡ್ಕೂರು, ಹರೀಶ್‌ ಎನ್‌. ಶೆಟ್ಟಿ ಮಲಾಡ್‌, ಸಿಎ ಸದಾಶಿವ ಶೆಟ್ಟಿ, ಕುಶಲ ಭಂಡಾರಿ ಥಾಣೆ, ಸುಧಾಕರ ಜಿ. ಪೂಜಾರಿ, ಮಂಜುನಾಥ ಬನ್ನೂರು, ಸುಬ್ಬಯ್ಯ ಶೆಟ್ಟಿ ಕಲ್ಯಾಣ್‌, ಸಂಯೋಜಕರಾದ ಕರ್ನೂರು ಮೋಹನ್‌ ರೈ ಮತ್ತು ಪದ್ಮನಾಭ ಸಸಿಹಿತ್ಲು, ದಶಮಾನೋತ್ಸವ ಸಮಿತಿಯ ಉಪಾಧ್ಯಕ್ಷ ಅನಿಲ್‌ ಶೆಟ್ಟಿ ಏಳಿಂಜೆ, ಕೈಪಿಡಿ ಸಮಿತಿಯ ಕಾರ್ಯಾಧ್ಯಕ್ಷ ಜಿ. ಟಿ. ಆಚಾರ್ಯ, ಸಂಚಾಲಕ ಸಾ. ದಯಾ ಮೊದಲಾದವರು ಉಪಸ್ಥಿತರಿದ್ದು ಡಾ| ಸುನೀತಾ ಎಂ. ಶೆಟ್ಟಿ ಅವರನ್ನು ಅಭಿನಂದಿಸಿದರು.
           
ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.