ಕನ್ನಡ ಸಾಂಸ್ಕೃತಿಕ  ಕೇಂದ್ರ ಕಲ್ಯಾಣ್‌ : ಸಾಧಕರಿಗೆ‌ ಸಮ್ಮಾನ

Team Udayavani, Mar 23, 2019, 1:19 PM IST

2103mum03.jpg

ಕಲ್ಯಾಣ್‌: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ಇದರ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮವು ಮಾ. 17ರಂದು ಅಪರಾಹ್ನ 3ರಿಂದ ಕಲ್ಯಾಣ್‌ ಪಶ್ಚಿಮದ ಸಂತೋಷಿ ಮಾತಾ ರೋಡ್‌, ಮ್ಯಾಕ್ಸಿಗ್ರೌಂಡ್‌ ಎದುರುಗಡೆಯಿರುವ ಆರ್‌ಮಾರ್ಚ್‌ ಸ್ಟೋರ್‌ಸಮೀಪದ ಮಾತೋಶ್ರೀ ಹಾಲ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ಅಧ್ಯಕ್ಷೆ ಜ್ಯೋತಿ ಪ್ರಕಾಶ್‌ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆದ  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮುಂಬಯಿ ಕನ್ನಡ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಡಾ| ರಜನಿ ವಿ. ಪೈ, ಗೌರವ ಅತಿಥಿಗಳಾಗಿ ಗಾಯತ್ರಿ ಪರಿವಾರ ದಹಿಸರ್‌ ವಿಶ್ವಸ್ಥೆ ಜಯಲಕ್ಷ್ಮೀ ಹರೀಶ್‌ ಶೆಟ್ಟಿ, ನ್ಯಾಯವಾದಿ ಸರೋಜಾ ಬಿ. ಪೂಜಾರಿ ಇವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ  ಸದಸ್ಯೆ ಲಲಿತಾ ಸದಾಶಿವ ಹೆಗ್ಡೆ, ಶಕುಂತಳಾ ವೀರಭದ್ರಪ್ಪ ಮುದಗಲ್‌, ಲೇಖಕಿ ಸೌಮ್ಯಾ ಪ್ರಕಾಶ್‌ ತದಡಿಕರ ನವಿಮುಂಬಯಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು  ಸಮ್ಮಾನಿಸಿ ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪುತ್ತೂರು ಚಂದ್ರಹಾಸ ರೈ ಬಳಗದವರಿಂದ ಸಂಗೀತ ರಸಮಂಜರಿ, ಸಂಸ್ಥೆಯ ಸದಸ್ಯೆಯರಿಂದ ನೃತ್ಯ, ಹಾಸ್ಯ ಪ್ರಹಸನ, ಫ್ಯಾಶನ್‌ ಶೋ, ಸಂಗೀತ, ಇನ್ನಿತರ ವಿನೋದಾವಳಿಗಳು ನಡೆದವು.

ಸಂಸ್ಥೆಯ ಗೌರವಾಧ್ಯಕ್ಷ ಮಂಜುನಾಥ ರೈ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಭಾರತಿ ಬಿ. ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಗಿರಿಜಾ ವಿ. ಸೊಗಲದ, ಮಹಿಳಾ ವಿಭಾಗದ ಕಾರ್ಯದರ್ಶಿ ವಿಜಯಲಕ್ಷ್ಮೀ ಎಸ್‌. ಹುಣಸಿಕಟ್ಟೆ, ಕೋಶಾಧಿಕಾರಿ ಸುಜಾತಾ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿ ಉಮಾ ಎಸ್‌. ಹುನ್ಸಿಮರ, ಜತೆ ಕೋಶಾಧಿಕಾರಿ ಕುಮುದಾ ಡಿ. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯೆಯರು, ಕೇಂದ್ರದ ಪದಾಧಿಕಾರಿಗಳು, ಆಡಳಿತ ಸಮಿತಿಯ ಸದಸ್ಯರ ನೇತೃತ್ವದಲ್ಲಿ ಕಾರ್ಯಕ್ರಮವು ಜರಗಿತು.

ಸಂಸ್ಥೆಯ ಜತೆ ಕಾರ್ಯದರ್ಶಿ, ಛಾಯಾಕಿರಣ ಮಾಸಿಕದ ಸಂಪಾದಕ ಪ್ರಕಾಶ್‌ ಕುಂಠಿನಿ ಅವರು ಕಾರ್ಯಕ್ರಮ ನಿರ್ವಹಿಸಿ ಅತಿಥಿಗಳನ್ನು ಪರಿಚಯಿಸಿದರು. ವಿಜಯಲಕ್ಷ್ಮೀ ಹುಣಸಿಕಬ್ಬ ವಂದಿಸಿದರು. ಪ್ರಕಾಶ್‌ ನಾಯಕ್‌, ಚೆನ್ನವೀರ ಅಡಿಗಣ್ಣನವರ ಸಹಕರಿಸಿದರು. ಗಣ್ಯರಾದ ಹರೀಶ್‌ ಶೆಟ್ಟಿ, ಗುರುರಾಜ ನಾಯಕ್‌, ಪ್ರಕಾಶ್‌ ಭಟ್‌ ಕಾನಂಗಿ, ಸೋಮನಾಥ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.