ಕನ್ನಡ ಸಂಘ ಪುಣೆ : ವಾರ್ಷಿಕ ಪ್ರತಿಭಾ ಪ್ರದರ್ಶನ

Team Udayavani, Mar 5, 2019, 5:13 PM IST

0303mum01.jpg

ಪುಣೆ: ಕನ್ನಡ ಸಂಘ ಪುಣೆ ವತಿಯಿಂದ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡ ವಾರ್ಷಿಕ ಪ್ರತಿಭಾ ಪ್ರದರ್ಶನವನ್ನು ಮಾ. 1ರಂದು ಸಂಘದ ಡಾ| ಕಲ್ಮಾಡಿ ಶಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಯಿತು.

ಪ್ರತಿ ವರ್ಷ ಮಾರ್ಚ್‌ ಒಂದರಂದು ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ|  ಕಲ್ಮಾಡಿ ಶಾಮರಾವ್‌ ಅವರ ಜನ್ಮದಿನದ ನಿಮಿತ್ತ  ಕನ್ನಡ ಸಂಘದ ಸದಸ್ಯರು  ಮತ್ತು ಪರಿವಾರದ ಸದಸ್ಯರಿಗಾಗಿ ಈ ಕಾರ್ಯಕ್ರಮವನ್ನು ಆಚರಿಸುತ್ತಾ ಬಂದಿದೆ. ಈ ವರ್ಷ ದಿವಂಗತ ಡಾ|   ಕಲ್ಮಾಡಿ ಶಾಮರಾಯರ ಜನ್ಮಶತಾಬ್ದಿ ವರ್ಷದಲ್ಲಿ ಅವರ ಮೆಚ್ಚಿನ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಹಲವಾರು ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ವೈಶಿಷ್ಟéಪೂರ್ಣವಾಗಿ  ಶ್ರದ್ಧಾಪೂರ್ವಕವಾಗಿ ಆಚರಿಸಿ ಅವರಿಗೆ ಆದರಾಂಜಲಿ ಅರ್ಪಿಸಲಾಯಿತು.

ಸಂಘದ  ಉಪಾಧ್ಯಕ್ಷೆ ಇಂದಿರಾ ಸಾಲಿಯಾನ್‌, ಕಾರ್ಯದರ್ಶಿ ಮಾಲತಿ ಕಲ್ಮಾಡಿ  ಮತ್ತಿತರ ಗಣ್ಯರು ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನಸಂಪರ್ಕಾಧಿಕಾರಿ ರಾಮದಾಸ್‌ ಆಚಾರ್ಯರು ಸ್ವಾಗತಿಸಿ, 
ಇಂದಿನ ಸಮಾರಂಭ ಮುಖ್ಯವಾಗಿ ಸಂಘದ ಸದಸ್ಯರಿಗಾಗಿ  ತಮ್ಮಲ್ಲಿ ಹುದುಗಿರುವ ಕಲಾ  ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಒದಗಿ ಬರಲೆಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿ ಪ್ರತಿಭಾ ಪ್ರದರ್ಶನ ನೀಡುತ್ತಿರು
ವುದು ಸಂತಸದ ಸಂಗತಿಯಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ನಿಧನರಾದ ವಿಶ್ವಸ್ತ ಗೋವರ್ಧನ ಶೆಟ್ಟಿ ಮತ್ತು ಸದಸ್ಯ  ಮಾಧವ ಹರಿಹರ ಅವರಿಗೆ ಎರಡು ನಿಮಿಷ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.  ಕಾರ್ಯಕ್ರಮದಂಗವಾಗಿ ಭಜನೆ, ವಿವಿಧ ನೃತ್ಯ, ಕವಿತೆ ಮತ್ತು ಹಾಸ್ಯ ಚುಟುಕುಗಳು ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ   ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ನೆರೆದ ಕಲಾರಸಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.

ಭಾಗವಹಿಸಿದ ಎಲ್ಲ ಪ್ರತಿಭಾನ್ವಿತರಿಗೆ ಪ್ರಶಸ್ತಿ ಹಾಗೂ ಸ್ಮರಣಿಕೆಗಳನ್ನು  ನೆರೆದ ಗಣ್ಯರಿಂದ ಹಸ್ತದಿಂದ ನೀಡಲಾಯಿತು. ವಿಲ್ಮಾ ಮಾರ್ಟಿಸ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಮುಖ್ಯ ಶಿಕ್ಷಕರಾದ ಚಂದ್ರಕಾಂತ ಹಾರಕೂಡೆ, ಮಾಜಿ ಪ್ರಾಧ್ಯಾಪಕಿ  ಸುನೀತಾ ಶಿರಗುಪ್ಪಿ ಮತ್ತು ಸದಸ್ಯರು ಪರಿವಾರದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.