ನವೋದಯ ಕನ್ನಡ ಸೇವಾ ಸಂಘ ಸುವರ್ಣ ಮಹೋತ್ಸವದ ಅಂಗವಾಗಿ ಸಮ್ಮಾನ

Team Udayavani, Dec 19, 2018, 12:52 PM IST

1812mum02.jpg

ಥಾಣೆ: ನವೋದಯ ಕನ್ನಡ ಸೇವಾ ಸಂಘದ ಸುವರ್ಣ ಮಹೋತ್ಸವ ಸರಣಿ ಕಾರ್ಯಕ್ರಮ-6  ಸಂಭ್ರಮವು ನ. 9ರಂದು ಥಾಣೆಯ ಕಾಶಿನಾಥ್‌ ಘಾಣೇಕರ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ನವೋದಯ ಕನ್ನಡ ಸೇವಾ ಸಂಘ ಥಾಣೆ ಅಧ್ಯಕ್ಷ ಜಯ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸ್ಥಾಪಕ ಹಿರಿಯ ಪದಾಧಿಕಾರಿಗಳನ್ನು, ಪೂರ್ವಕಾರ್ಯಕಾರಿ ಸಮಿತಿಯ ಸದಸ್ಯರನ್ನು, ಸಂಘದ ಏಳ್ಗೆಗಾಗಿ ಶ್ರಮಿಸಿ ಅಗಲಿದ ಚೇತನರ ಸ್ಮರಣಾರ್ಥಕವಾಗಿ ಅವರ ಪತ್ನಿ, ಪರಿವಾರದ ಸದಸ್ಯರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಸಮಾರಂಭದ ವೇದಿಕೆಯಲ್ಲಿ ಥಾಣೆಯ ಮೇಯರ್‌, ತುಳು-ಕನ್ನಡತಿ ಮೀನಾಕ್ಷೀ ರಾಜೇಂದ್ರ ಶಿಂಧೆ ಪೂಜಾರಿ, ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಜಾಸ್ಮಿàನ್‌ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ಶೆಟ್ಟಿ, ಕ್ರಿಸ್ಟಲ್‌ ಆಟೋಮೇಶನ್‌ ಪ್ರೈವೇಟ್‌ ಲಿಮಿಟೆಡ್‌ನ‌ ಆಡಳಿತ ನಿರ್ದೇಶಕ ಚಂದ್ರಶೇಖರ್‌ ಎಸ್‌. ಶೆಟ್ಟಿ, ಸಂಘದ ಉಪಾಧ್ಯಕ್ಷ ಕೇಶವ ಟಿ. ನಾಯಕ್‌ ಹಾಗೂ ನವೋದಯ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕಿ ಅಜಿತಾ ಪ್ರದೀಪ್‌ ಕುಮಾರ್‌ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುರಾಧಾ ಅರ್ಜುನ್‌ ವಾಡ್ಕರ್‌ ಉಪಸ್ಥಿತರಿದ್ದರು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್‌. ಶೆಟ್ಟಿ  ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿ-ಗಣ್ಯರನ್ನು ಗೌರವ ಪ್ರಧಾನ ಕೋಶಾಧಿಕಾರಿ ಸುನೀಲ್‌ ಎಸ್‌. ಶೆಟ್ಟಿ, ಉಪಾಧ್ಯಕ್ಷ ಕೇಶವ ಟಿ. ನಾಯಕ್‌, ಜತೆ ಕಾರ್ಯದರ್ಶಿ ಪ್ರಶಸ್ಥ ಎಸ್‌. ಶೆಟ್ಟಿ, ಜೊತೆ ಕೋಶಾಧಿಕಾರಿ ದಯಾನಂದ್‌ ಬಿ. ಹೆಗ್ಡೆ ಅವರು ಪರಿಚಯಿಸಿದರು. ಅಧ್ಯಕ್ಷ ಜಯ ಕೆ. ಶೆಟ್ಟಿ ಅವರು ಅತಿಥಿ-ಗಣ್ಯರುಗಳನ್ನು ಶಾಲು ಹೊದೆಸಿ, ಪುಷ್ಪಗುಚ್ಚ, ಸ್ಮರಣಿಕೆಯನ್ನಿತ್ತು ಗೌರವಿಸಿದರು.

ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ವೇದಿಕೆಯಲ್ಲಿ ಅತಿಥಿ-ಗಣ್ಯರೊಂದಿಗೆ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ  ರವಿ ಹೆಗ್ಡೆ ಹೆರ್ಮುಂಡೆ ಕಾರ್ಯಕ್ರಮ ನಿರ್ವಹಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್‌. ಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.