ಕರ್ನಾಟಕ ಮಹಾಮಂಡಳ ಮೀರಾ-ಭಾಯಂದರ್‌ ವಾರ್ಷಿಕ ಕ್ರೀಡೋತ್ಸವ

Team Udayavani, Feb 26, 2019, 4:34 PM IST

2502mum07.jpg

ಮುಂಬಯಿ: ಕರ್ನಾಟಕ ಮಹಾಮಂಡಳ ಮೀರಾ-ಭಾಯಂದರ್‌ ಇದರ ವಾರ್ಷಿಕ ಕ್ರೀಡೋತ್ಸವವು ಭಾಯಂದರ್‌ ಪೂರ್ವದ ಆದರ್ಶ ಇಂದಿರಾ ನಗರದ ಎಸ್‌. ಎನ್‌. ಕಾಲೇಜಿನ ಎದುರುಗಡೆಯ ಆನಂದ ದಿಘ ಸ್ಮಾರಕ ಮೈದಾನದಲ್ಲಿ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳೊಂದಿಗೆ ಫೆ. 24 ರಂದು ನಡೆಯಿತು.

ಬೆಳಗ್ಗೆ ಕ್ರೀಡೋತ್ಸವವನ್ನು ಉದ್ಘಾಟಿಸಿದ ಪಲಿಮಾರು ಮಠ ಮೀರಾರೋಡ್‌ ಶಾಖೆಯ ಟ್ರಸ್ಟಿ ಮುಖ್ಯ ಪ್ರಬಂಧಕ ವಿದ್ವಾನ್‌ ರಾಧಾಕೃಷ್ಣ ಭಟ್‌ ಇವರು ಮಾತನಾಡಿ, ಕ್ರೀಡೆಯು ವೈಯಕ್ತಿಕ ಪರಿಶ್ರಮದ ಕಲೆಯಾಗಿದೆ. ಪ್ರತಿಯೊಂದು ಸೋಲಿನಲ್ಲಿ ನಾವು ಹೆಚ್ಚು ಅನುಭವಗಳನ್ನು ಪಡೆಯುತ್ತೇವೆ. ಬೌದ್ಧಿಕವಾಗಿ, ಮಾನಸಿಕವಾಗಿ, ದೈಹಿಕವಾಗಿ ಸಮಸ್ಥಿತಿಯಲ್ಲಿರುವ ಪಂದ್ಯಾಟದಲ್ಲಿ ಗೆಲುವಿನಲ್ಲಿ ಸಂಭ್ರಮ, ಸೋಲಿನಲ್ಲಿ ನಿರಾಶೆ ಸಲ್ಲದು. ಕರ್ನಾಟಕ ಮಹಾ ಮಂಡಳದ ಕ್ರೀಡೋತ್ಸವದಿಂದ ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರಗಳು ಭಾಯಂದರ್‌ ಪರಿಸರದಲ್ಲಿ ಅನಾವರಣಗೊಳ್ಳಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ವೇದಿಕೆಯ ಗಣ್ಯರು, ಕಾರ್ಯಕಾರಿ ಸಮಿತಿಯ ಸದಸ್ಯರು, ಕ್ರೀಡಾಪಟುಗಳು ಇತ್ತೀಚೆಗೆ ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ಹುತಾತ್ಮರಾದ ವೀರ ಯೋಧರಿಗೆ  ಶ್ರದ್ಧಾಂಜಲಿ ಸಲ್ಲಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷ ಕರ್ನಾಟಕ ಮಹಾಮಂಡಲದ ಅಧ್ಯಕ್ಷ ರವಿಕಾಂತ ಶೆಟ್ಟಿ ಇನ್ನ ಇವರು ಸ್ವಾಗತಿಸಿ, ದಿನಪೂರ್ತಿ ನಡೆದ ಕ್ರೀಡೋತ್ಸವದಲ್ಲಿ ತಪ್ಪುಗಳು ಸಹಜ. ಅದನ್ನು ಕೂಡಲೆ ಸರಿಪಡಿಸಿ ಸಹನೆ, ತಾಳ್ಮೆ ಹಾಗೂ ಕರ್ನಾಟಕ ಮಹಾಮಂಡಲದ ಪ್ರೀತಿಯಿಂದ ಯಶಸ್ವಿಗೊಳಿಸಬೇಕು ಎಂದು ವಿನಂತಿಸಿ ಶುಭ ಹಾರೈಸಿದರು.

ರಾಷ್ಟ್ರೀಯ ಕ್ರೀಡಾಪಟು ಮೋನಿಶ್‌ ಪೂಜಾರಿ ಮೈದಾನಕ್ಕೆ ತೆಂಗಿನಕಾಯಿಯನ್ನು ಒಡೆಯು ವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಅನಂತರ ವಿವಿಧ ಕ್ರೀಡಾಸ್ಪರ್ಧೆಗಳು ನಡೆದವು. ವಯೋಮಿತಿಗೆ ಅನುಗುಣವಾಗಿ ರನ್ನಿಂಗ್‌ ರೇಸ್‌, ಪುರುಷ ಹಾಗೂ ಮಹಿಳೆಯರಿಗೆ ಶಾಟ್‌ಪುಟ್‌, ಲಿಂಬು ಚಮಚ, ಬಟಾಟೆ ಓಟ, ಸ್ಯಾಕ್‌ರೇಸ್‌, ಕ್ರಿಕೆಟ್‌, ಹಗ್ಗಜಗ್ಗಾಟ, ತ್ರೋಬಾಲ್‌, ಪುರುಷ ಹಾಗೂ ಮಹಿಳೆಯರಿಗೆ ಹಿಮ್ಮುಖ ನಡಿಗೆ ಸ್ಪರ್ಧೆ ನಡೆಯಿತು.

ಸಂಸ್ಥೆಯ ಸ್ಥಾಪಕ ಚಂದ್ರಶೇಖರ ಶೆಟ್ಟಿ, ಗೌರವಾಧ್ಯಕ್ಷ ಡಾ| ಅರುಣೋದಯ ರೈ, ಸಂಚಾಲಕ ಕರುಣಾಕರ ಶೆಟ್ಟಿ, ಉಪಾಧ್ಯಕ್ಷರಾದ ಸುಭಾಷ್‌ ಶೆಟ್ಟಿ ಮತ್ತು ಶಂಕರ್‌ ಶೆಟ್ಟಿ, ಕಾರ್ಯದರ್ಶಿ ಪ್ರವೀಣ್‌ ಶೆಟ್ಟಿ, ಜತೆ ಕೋಶಾಧಿಕಾರಿ ಸೀತಾರಾಮ ಸುವರ್ಣ, ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ, ಜತೆ ಕೋಶಾಧಿಕಾರಿ ಚಂದ್ರಶೇಖರ ಕುಲಾಲ್‌, ಇತರ ಉಪಸಮಿತಿಯ ಪದಾಧಿಕಾರಿಗಳಾದ ಆಶಾ ಶೆಟ್ಟಿ, ಸುಮಂಗಲಾ ಕಣಂಜಾರು, ನಯನಾ ಶೆಟ್ಟಿ, ಅರುಣ್‌ ಶೆಟ್ಟಿ ಪಣಿಯೂರು, ರಾಜೇಶ್‌ ಶೆಟ್ಟಿ ಕಾಪುಕಲ್ಯ, ಗಣೇಶ್‌ ಅಂಚನ್‌, ಸರ್ವ ಸದಸ್ಯರು, ಮಹಿಳಾ ಸದಸ್ಯೆಯರು ಸಹಕರಿಸಿದರು. 

    ಚಿತ್ರ-ವರದಿ:  ರಮೇಶ್‌ ಅಮೀನ್‌

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.