ಮಕ್ಕಳು ಸಂಸ್ಕೃತಿ-ಸಂಸ್ಕಾರ ಗೌರವಿಸುವ ಗುಣ ಬೆಳೆಸಿಕೊಳ್ಳಲಿ: ಎಲ್‌. ವಿ. ಅಮೀನ್‌

Team Udayavani, Nov 23, 2022, 11:59 AM IST

tdy-1

ಕಲ್ಯಾಣ್‌: ಕಲ್ಯಾಣ್‌ ಕರ್ನಾಟಕ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವ ಸಂಭ್ರಮವು ನ. 13ರಂದು ಸಂಜೆ ಕಲ್ಯಾಣ್‌ ಪರಿಸರದ ಕೆ. ಸಿ. ಗಾಂಧಿ ಶಾಲಾ ಸಭಾಗೃಹದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ, ಸಮಾಜ ಸೇವಕ ಎಲ್‌. ವಿ. ಅಮೀನ್‌ ಮಾತನಾಡಿ, ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರ, ತಾಯ್ನಾಡ ಆಚಾರ-ವಿಚಾರಗಳನ್ನು ಗೌರವದಿಂದ ಕಾಣುವುದು ನಮ್ಮೆಲ್ಲರ ಕರ್ತವ್ಯ. ನಾವೆಲ್ಲರೂ ಉದ್ಯೋಗ ನಿಮಿತ್ತ ತಾಯ್ನಾಡಿನಿಂದ ಮುಂಬಯಿಗೆ ಬಂದು ಇಲ್ಲಿ ಅವಿರತವಾಗಿ ಶ್ರಮಿಸಿ, ನಮ್ಮದೇ ಸಂಘ-ಸಂಸ್ಥೆಗಳನ್ನು ಸ್ಥಾಪಿಸಿಕೊಂಡು ಸಮಾಜಪರ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡವರು. ತಾಯ್ನಾಡಿನ ಜತೆಗೆ ಕರ್ಮಭೂಮಿಯಾದ ಮಹಾರಾಷ್ಟ್ರದ ನೆಲವನ್ನೂ ಆದರದಿಂದ, ಗೌರವದಿಂದ ನೋಡುವವರು.  ನಮ್ಮ ಮುಂದಿನ ಜನಾಂಗವಾದ ಇಂದಿನ ಯುವ ಪೀಳಿಗೆಗೆ ನಮ್ಮ ನಾಡನ್ನು, ದೇಶವನ್ನು, ಸಂಸ್ಕೃತಿಯನ್ನು ಗೌರವಿಸುವ ಉತ್ತಮ ಸಂಸ್ಕಾರವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಗೌರವ ಅತಿಥಿಯಾಗಿದ್ದ ನ್ಯಾಯವಾದಿ, ಪ್ರಾಧ್ಯಾಪಕ ಸತೀಶ್‌ ಕಬ್ಬೂರ ಅವರು ಕಲ್ಯಾಣ್‌ ಕರ್ನಾಟಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇತರ ಗಣ್ಯರ ಉಪಸ್ಥಿತಿಯಲ್ಲಿ ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಅತಿಥಿಗಳನ್ನು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಶಾಲು ಹೊದೆಸಿ, ಪುಷ್ಪಗುತ್ಛ ಹಾಗೂ ಸ್ಮರಣಿಕೆಯನ್ನಿತ್ತು ಗೌರವಿಸಿದರು. ಕಾರ್ಯಕ್ರಮದಲ್ಲಿ ತಮ್ಮ ಉದ್ಯಮದಲ್ಲಿ ಉತ್ಕೃಷ್ಟ ಸಾಧನೆಗೈದ, ಸಮಾಜ ಸೇವೆಯಲ್ಲಿ ಸದಾ ನಿರತರಾಗಿರುವ ಅಂಬರ್‌ನಾಥ್‌ ಪರಿಸರದ ಪ್ರಸಿದ್ಧ ಹೊಟೇಲ್‌ ಉದ್ಯಮಿ, ಸಮಾಜ ಸೇವಕ ಸುರೇಂದ್ರ ಪಿ. ರೈ ಅವರನ್ನು ಕಲ್ಯಾಣ ಕನ್ನಡಿಗ ಪುರಸ್ಕಾರವನ್ನಿತ್ತು ಗೌರವಿಸಲಾಯಿತು.

ಉದ್ಯಮಿ, ಸಮಾಜ ಸೇವಕ, ಆರ್‌ಎಸ್‌ಎಸ್‌ ಕಾರ್ಯಕರ್ತ ಅನಿಲ್‌ ಹೊಸಖಂಡೆ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಸಂಘದ ಸ್ಥಾಪಕಾಧ್ಯಕ್ಷ ನಂದಾ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಅಲ್ಲದೆ ಕಲ್ಯಾಣ್‌ ಪರಿಸರದ ಹೊಟೇಲ್‌ ಉದ್ಯಮಿ, ಸಮಾಜ ಸೇವಕ, ಸಂಘದ ಮಾರ್ಗದರ್ಶಕ ನಡ್ಡೋಡಿಗುತ್ತು ಗುರುದೇವ್‌ ಭಾಸ್ಕರ್‌ ಶೆಟ್ಟಿಯವರನ್ನು ಅವರ ಅಪ್ರತಿಮ, ನಿಸ್ವಾರ್ಥ ಸಮಾಜ ಸೇವೆಗಾಗಿ ಸಂಘದ ವತಿಯಿಂದ ಸಮ್ಮಾನಿಸಿ ಅಭಿನಂದಿಸಲಾಯಿತು. ಸಮ್ಮಾನ ಪತ್ರವನ್ನು ಸಂಘದ ಮಾಜಿ ಅಧ್ಯಕ್ಷ ಟಿ. ಎಸ್‌. ಉಪಾಧ್ಯಾಯ ವಾಚಿಸಿದರು. ಸಮ್ಮಾನಿತರು ಸಂದಭೋìಚಿತವಾಗಿ ಮಾತನಾಡಿ ಕೃತಜ್ಞತೆ ಸಲ್ಲಿಸಿ ದರು.

ಗಣ್ಯರು ಸಂಘದ ಮುಖವಾಣಿ ಕಲ್ಯಾಣ ದರ್ಪಣದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಆಶಾ ನಾಯಕ್‌ ಸಂಗಡಿಗರು ನಾಡಗೀತೆಯನ್ನು ಪ್ರಸ್ತುತಪಡಿಸಿದರು. ಸಂಘದ ಅಧ್ಯಕ್ಷ ಕೆ. ಎನ್‌. ಸತೀಶ್‌ ಸ್ವಾಗತಿಸಿ, ಸವಿತಾ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ಗಣೇಶ್‌ ಪೈ ವಂದಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಲ್ಯಾಣ್‌ ಕರ್ನಾಟಕ ಸಂಘತ ಮಾಜಿ ಅಧ್ಯಕ್ಷರಾದ ಟಿ. ಎಸ್‌. ಉಪಾಧ್ಯಾಯ, ಗೋಪಾಲ್‌ ಹೆಗ್ಡೆ ಹಾಗೂ ನಿಕಟಪೂರ್ವಾಧ್ಯಕ್ಷೆ ದರ್ಶನ ಸೋನ್ಕರ್‌, ಉಪಾಧ್ಯಕ್ಷೆ ಜಯಂತಿ ಹೆಗ್ಡೆ, ವೀಣಾ ನಾಯಕ್‌, ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ಕಾಮತ್‌ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಸಹಕರಿಸಿದರು.

ಸಂಘವು ಕಳೆದ ಎರಡು ದಶಕಗಳಿಂದ ನಾಡು-ನುಡಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ವರ್ಷಪೂರ್ತಿ ಆಯೋಜಿಸುತ್ತಾ, ಕಲ್ಯಾಣ್‌ ಪರಿಸರದ ಕನ್ನಡಿಗರನ್ನು ಒಂದೇ ವೇದಿಕೆಯಡಿಯಲ್ಲಿ ಸಂಘಟಿಸುವ ಕಾರ್ಯದಲ್ಲಿ ತೊಡಗಿದೆ. ಸಂಘದ ವಿವಿಧ ವಿಭಾಗಗಳು ಸಂಘದ ಬಲವರ್ಧನೆಗೆ ಅಹರ್ನಿಶಿಯಾಗಿ ಶ್ರಮಿಸುತ್ತಿವೆ. ಸಂಘವನ್ನು ಇನ್ನಷ್ಟು ಬಲಾಡ್ಯಗೊಳಿಸುವಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಸಂಘವನ್ನು ಮಾದರಿ ಸಂಸ್ಥೆಯನ್ನಾಗಿ ಬೆಳೆಸಿದ ಸಂಘದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ವಿಭಾಗದ ಸದಸ್ಯೆಯರೆಲ್ಲರಿಗೂ ಅಭಿನಂದನೆಗಳು. ನಾವೆಲ್ಲರೂ ಒಂದಾಗಿ, ಒಗ್ಗಟ್ಟಿನಿಂದ ಸಂಘಟನೆಯನ್ನು ಬಲಪಡಿಸೋಣ. ಕೆ. ಎನ್‌. ಸತೀಶ್‌ ಅಧ್ಯಕ್ಷರು, ಕಲ್ಯಾಣ್‌ ಕರ್ನಾಟಕ ಸಂಘ

ನಮ್ಮ ಯಾವುದೇ ಸಮಸ್ಯೆಗಳಿಗೆ ಎಲ್ಲರೂ ಒಂದಾಗಿ ಸಮಾಧಾನಕರ, ಸಮರ್ಪಕ ಪರಿಹಾರ ಕಂಡುಕೊಂಡು ಸದಾ ಇತರರಿಗೆ ಪ್ರೇರಣೆಯಾಗಿರಬೇಕು. ನಮಗೆ ನಾವೇ ಪ್ರೇರಕರಾಗಬೇಕು. ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಮಕ್ಕಳಿಗೆ ತಿಳಿಯಪಡಿಸಿ ಅವರನ್ನು ಸುಸಂಸ್ಕೃತರನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ನ್ಯಾಯವಾದಿ ಸತೀಶ್‌ ಕಬ್ಬೂರ, ಪ್ರಾಧ್ಯಾಪಕರು

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.