ಕಾತ್ರಜ್‌ ಶ್ರೀ ಅಯ್ಯಪ್ಪ ದೇವಸ್ಥಾನದ ವಾರ್ಷಿಕ ಉತ್ಸವ

Team Udayavani, Dec 18, 2017, 4:52 PM IST

17-Mum05a.jpg

ಪುಣೆ: ಪುಣೆಯ ಕಾತ್ರಜ್‌ ಸಚ್ಚಾಯಿ ಮಾತಾ ನಗರದ  ಶ್ರೀ  ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  ಶ್ರೀ  ಅಯ್ಯಪ್ಪ ಸ್ವಾಮಿಯ ವಾರ್ಷಿಕ ಮಹೋತ್ಸವ ಹಾಗೂ ಮಹಾಪೂಜೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ  ಡಿ.  16ರಂದು ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕ ವೇ|ಮೂ| ಶ್ರೀ ಹರೀಶ್‌ ಭಟ್‌ ಮತ್ತು ಸಂಗಡಿಗರ ನೇತೃತ್ವದಲ್ಲಿ  ದೇವಸ್ಥಾನದ ಆರಾಧ್ಯ ದೇವರಾದ  ಶ್ರೀ ಅಯ್ಯಪ್ಪ ಸ್ವಾಮಿಗೆ ಹಾಗೂ ಪರಿವಾರ ದೇವರಿಗೆ   ಹೋಮ, ವಿಶೇಷ ಪೂಜೆ  ಮತ್ತು ಪಡಿಪೂಜೆ  ಮಹಾಪೂಜೆ, ಪಲ್ಲಕಿ ಉತ್ಸವ, ಬಲಿ ಉತ್ಸವ  ಮೊದಲಾದ ಧಾರ್ಮಿಕ ಕಾರ್ಯ ಕ್ರಮಗಳು ಜರಗಿತು.   ಡಿ. 15ರಂದು ಸಂಜೆ  ಸುದರ್ಶನ ಹೋಮ ಮತ್ತು ವಾಸ್ತು ಪೂಜೆ ಜರಗಿತು.

ಡಿ. 16ರಂದು ಗಣಹೋಮ, ಶ್ರೀ  ಅಯ್ಯಪ್ಪ ಸ್ವಾಮಿ  ದೇವರ ಪ್ರಧಾನ ಹೋಮ ಜರಗಿತು.  ಅನಂತರ  ಆರಾಧ್ಯ ದೇವರಾದ ಅಯ್ಯಪ್ಪ ಸ್ವಾಮಿಗೆ ವಿವಿಧ ಅಭಿಷೇಕಗಳು ಮತ್ತು ಅಲಂಕಾರ ಪೂಜೆ ನೆರವೇರಿತು. ಅನಂತರ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಯವರಿಂದ ಮತ್ತು ಭಕ್ತ ಸಮೂಹದಿಂದ ಭಜನಾವಳಿ ನಡೆಯಿತು. ಪೂರ್ವಾಹ್ನ ವಿವಿಧ ರೀತಿಯ ಪ್ರಭಾವಳಿ, ಚೆಂಡೆ, ವಾದ್ಯ, ಮಂತ್ರಘೋಷಗಳೊಂದಿಗೆ ಅಯ್ಯಪ್ಪ ಮಾಲಾಧಾರಿಗಳು ಮತ್ತು  ಭಕ್ತವೃಂದದ ಕುಣಿತದೊಂದಿಗೆ ದೇವರ ಪಲ್ಲಕಿ ಬಲಿ ಮೆರವಣಿಗೆಯು ದೇವಸ್ಥಾನದ ಸುತ್ತಮುತ್ತದ ರಸ್ತೆ ಗಳಲ್ಲಿ ಸಾಗಿ ಮತ್ತೆ ದೇವಸ್ಥಾನದಲ್ಲಿ ಸಮಾಪನಗೊಂಡಿತು.

ಮಧ್ಯಾಹ್ನ 12.30 ರಿಂದ ಭಕ್ತರ ಜಯಘೋಷದೊಂದಿಗೆ   ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ಹರೀಶ್‌ ಭಟ್‌ ನೇತೃತ್ವದಲ್ಲಿ   ಪ್ರಧಾನ ಮಹಾಪೂಜೆ, ಮಹಾಮಂಗಳಾರತಿ ಹಾಗೂ ನೂರಾರು ಅಯ್ಯಪ್ಪ ಮಾಲಾಧಾರಿಗಳು ಮತ್ತು ಪ್ರಭಾಕರ  ಗುರುಸ್ವಾಮಿಯವರ ನೇತೃತ್ವದಲ್ಲಿ  ಪಡಿಪೂಜೆ  ಜರಗಿತು. 

ಅನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು ರಾತ್ರಿ  7ರಿಂದ ಶ್ರೀ ಅಯ್ಯಪ್ಪ ಸ್ವಾಮಿಗೆ ರಂಗ ಪೂಜೆ ಮತ್ತು ಮಹಾಅರತಿ  ನೆರವೇರಿತು. ಶ್ರೀ  ಅಯ್ಯಪ್ಪ ಸ್ವಾಮಿ ದೇವರ ಬಲಿ ಉತ್ಸವವು ಪೂಜೆ,  ವಿವಿಧ  ರೀತಿಯ ವಾದ್ಯಘೋಷ, ಭಜನೆ, ನೃತ್ಯದೊಂದಿಗೆ ಜರಗಿತು. ಪುಣೆ ತುಳು ಕನ್ನಡಿಗರಲ್ಲದೆ ಇತರ ಭಾಷಿಕರು ಭಾಗವಹಿಸಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಪರಾಹ್ನ 2ರಿಂದ ಮಕ್ಕಳಿಂದ ನೃತ್ಯ ವೈವಿಧ್ಯ ಮತ್ತು ವಿವಿಧ ವಿನೋದಾವಳಿಗಳು,  ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಇವರಿಂದ ಮಂಡಲಿಯ  ಕಲಾವಿದರು  ಮತ್ತು ಅತಿಥಿ ಕಲಾವಿದರ ಕೂಡು ವಿಕೆಯಿಂದ ಪಾಪಣ್ಣ ವಿಜಯ ಗುಣಸುಂದರಿ ಯಕ್ಷಗಾನ ಪ್ರದರ್ಶನಗೊಂಡಿತು.
ದೇವಸ್ಥಾನದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ  ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಸುಭಾಷ್‌ ಎ. ಶೆಟ್ಟಿ, ಉಪಾಧ್ಯಕ್ಷ  ಸುಧಾಕರ ಸಿ. ಶೆಟ್ಟಿ, ಗೌರವ ಕಾರ್ಯದರ್ಶಿ ರಘುರಾಮ್‌ ಕೆ. ರೈ, ಗೌರವ ಕೋಶಾಧಿಕಾರಿ ಜಗದೀಶ್‌ ಬಿ. ಶೆಟ್ಟಿ, ಜನಸಂಪರ್ಕಾಧಿಕಾರಿ ಪ್ರಶಾಂತ್‌ ಆರ್‌. ಆಳ್ವ, ಜೊತೆ ಕಾರ್ಯದರ್ಶಿ ಸಚ್ಚಿದಾನಂದ ಎಸ್‌. ಶೆಟ್ಟಿ,  ಜತೆ ಕೋಶಾಧಿಕಾರಿ  ಬಾಲಕೃಷ್ಣ ಎಸ್‌. ಗೌಡ, ಕಾರ್ಯಕ್ರಮ ವ್ಯವಸ್ಥಾಪಕರಾದ ಭಾಸ್ಕರ ವಿ. ಶೆಟ್ಟಿ, ಪೂಜಾ ಸಮಿತಿಯ  ವ್ಯವಸ್ಥಾಪಕರಾದ  ಭಾಸ್ಕರ ಎಂ. ಕೊಟ್ಟಾರಿ, ವ್ಯವಸ್ಥಾಪಕರಾದ  ಜಯ ಎಸ್‌. ಪೂಜಾರಿ ಮತ್ತು ಪ್ರಧಾನ ಸಲಹೆಗಾರರಾದ ಶೇಖರ್‌ ಟಿ. ಪೂಜಾರಿ ಅವರ ಮುಂದಾಳತ್ವದಲ್ಲಿ, ಶ್ರೀ  ಅಯ್ಯಪ್ಪ ಸೇವಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್‌ ಎನ್‌. ಶೆಟ್ಟಿ ಮತ್ತು ಪದಾಧಿಕಾರಿಗಳು, ಶ್ರೀ ಅಯ್ಯಪ್ಪ ಸೇವಾ ಮಹಿಳಾ ಮಂಡಳಿಯ ಅಧ್ಯಕ್ಷೆ  ವಿನೋದಾ ಎಸ್‌. ಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರ  ಸಹಕಾರದೊಂದಿಗೆ ಕಾರ್ಯಕ್ರಮವು ನೆರವೇರಿತು. ನೂರಾರು ಸಂಖ್ಯೆಯ ಭಕ್ತರು ಸ್ವಯಂಸೇವಕರಾಗಿ ವಾರ್ಷಿಕೋತ್ಸವದಲ್ಲಿ ಸಹಕರಿಸಿದರು.   

 ಚಿತ್ರ-ವರದಿ :ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.