Udayavni Special

ಗ್ರಾಮದ ಒಳಿತಿಗೆ ಶ್ರಮಿಸೋಣ: ಸುರೇಶ್‌ ಕಾಂಚನ್‌


Team Udayavani, Oct 21, 2020, 7:41 PM IST

mumbai-tdy-1

ಮುಂಬಯಿ, ಅ. 20: ನನ್ನ ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳುವುದೇ ನನ್ನ ಭಾಗ್ಯ. ಇಂದಿನ ಕಾರ್ಯಕ್ರಮವನ್ನು ಯುವಕ ಮಂಡಲದವರು ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ. ನಮ್ಮ ಗ್ರಾಮದಲ್ಲಿ ಬಹಳಷ್ಟು ಜನ ದಾನಿಗಳಿ¨ªಾರೆ. ಎಲ್ಲರೂ ಸೇರಿ ಶಾಲೆಗೆ ವೇದಿಕೆ ನಿರ್ಮಾಣ ಮಾಡಬೇಕಿದೆ. ನಮ್ಮ ಶಾಲೆಯಲ್ಲಿ ಶಿಕ್ಷಣದೊಂದಿಗೆ ಶಿಸ್ತನ್ನೂ ಕಲಿಸಲಾಗುತ್ತಿದೆ. ಇಂದು ವಿತರಿಸಿದ ಪುಸ್ತಕ ಹಾಗೂ ವಿದ್ಯಾರ್ಥಿ ವೇತನವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು.  ಎಲ್ಲರೂ ಗ್ರಾಮದ ಒಳಿತಿಗೆ ಶ್ರಮಿಸೋಣ ಎಂದು ನಗರದ ಉದ್ಯಮಿ, ಸಮಾಜ ಸೇವಕ ಸುರೇಶ್‌ ಕಾಂಚನ್‌ ತಿಳಿಸಿದರು.

ಇತ್ತೀಚೆಗೆ ಉಪ್ಪಿನಕುದ್ರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ ಮುಂಬಯಿ ಉದ್ಯಮಿ ಸುರೇಶ್‌ ಕಾಂಚನ್‌ ಮತ್ತು ಯಶೋದಾ ಕಾಂಚನ್‌ ದಂಪತಿ ವತಿಯಿಂದ ಯುವಕ ಮಂಡಲದ ಆಶ್ರಯದಲ್ಲಿ ನಡೆದ 14ನೇ ವಾರ್ಷಿಕ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿವೇತನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಪ್ರತೀ ವರ್ಷ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದಾರೆ. ಕೊರೊ ನಾ ಸಂದಿಗ್ಧ ಪರಿಸ್ಥಿತಿಯಲ್ಲಿ  ನಿಯಮ  ಪಾಲಿಸಿ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಹಮ್ಮಿಕೊಂಡ ಯುವಕ ಮಂಡಲದವರು, ಅಧ್ಯಾಪಕ ವರ್ಗ, ಗೋಪಾಲ ಕೃಷ್ಣ ದೇವ ಸ್ಥಾನದ ಆಡಳಿತ ಮಂಡಳಿ ಎಲ್ಲರೂ ಅಭಿನಂದ ನಾರ್ಹರು. ನಮ್ಮ ಊರಿನಲ್ಲಿ, ಶಾಲೆಯ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಗ್ರಾಮದ ಯಾವುದೇ ರೀತಿಯ ಸೇವೆಗೆ ಸದಾ ಸಿದ್ಧನಿದ್ದೇನೆ.ಕೋವಿಡ್‌ ನಿಯಮ ಪಾಲಿಸುತ್ತ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳೋಣ ಎಂದರು.

ಬೈಂದೂರು ಶಾಸಕ ಸುಕುಮಾರ್‌ ಶೆಟ್ಟಿ ದೀಪ ಬೆಳಗಿಸಿ ಮಾತನಾಡಿ, ದೇಶದ ಉನ್ನತಿಗಾಗಿ ಸಮಾಜದ ಮಕ್ಕಳು ಶಿಕ್ಷಿತರಾಗಬೇಕು. ಬೈಂದೂರು ವಿಧಾನ ಸಭಾ ಕ್ಷೇತ್ರ ಅತ್ಯಂತ ಹಿಂದುಳಿದ ಕ್ಷೇತ್ರ. ಕ್ಷೇತ್ರದ ಅಭ್ಯುದಯಕ್ಕೆ ಈ ಪರಿಸರದ ಜನರು ಸಾಕಷ್ಟು ಸಹಕಾರ ನೀಡುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸುರೇಶ್‌ ಕಾಂಚನ್‌ ಅವರು ಶಿಕ್ಷಣಕ್ಕೆ ತನ್ನ ಸಂಪಾದನೆಯ ಭಾಗವನ್ನು ವಿನಿಯೋಗಿಸುತ್ತಿದ್ದಾರೆ. ಅವರಿಂದ ಈ ಗ್ರಾಮದ ಜನರಿಗೆ, ವಿದ್ಯಾರ್ಥಿಗಳಿಗೆ ಮತ್ತಷ್ಟು ಪ್ರಯೋಜನವಾಗುವಂತಾಗಲಿ ಎಂದರು.

ಮುಖ್ಯ ಅತಿಥಿಯಾಗಿದ್ದ ಬಿಜೆಪಿ ನಾಯಕ, ಯುವಕ ಮಂಡಲದ ಗೌರವ ಅಧ್ಯಕ್ಷ ಸದಾನಂದ ಶೇರಿಗಾರ್‌ ಮಾತನಾಡಿ, ಕೊರೊನಾ ಮಹಾಮಾರಿಯಿಂದ ಎಲ್ಲರೂ ಸಂಕಷ್ಟಕ್ಕೀಡಾಗಿರುವ ಈ ಕಾಲಘಟ್ಟದಲ್ಲಿ ಹುಟ್ಟೂರಿನ ಬಡಮಕ್ಕಳ ವಿದ್ಯಾರ್ಜನೆಗೆ ಸ್ಪಂದಿಸಿದ ಸುರೇಶ್‌ ಕಾಂಚನ್‌ ದಂಪತಿಯ ಕಾರ್ಯ ಅಭಿನಂದನೀಯ ಎಂದರು.

ಪ್ರೌಢಶಾಲಾ ಮೂಖ್ಯೋಪಾಧ್ಯಾಯಿನಿ ಮಾಲತಿ ಶುಭ ಹಾರೈಸಿದರು. ಅಂಗನವಾಡಿಯ ಶಿಕ್ಷಕಿ ನಳಿನಿ ಅವರು ಸುರೇಶ್‌ ಕಾಂಚನ್‌ ದಂಪತಿಯನ್ನು  ಸಮ್ಮಾನಿಸಿದರು. ಈ ಬಾರಿಯ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ತಂಡ ಕಾರ್ತಿಕ್‌ ಐತಾಳ ಮತ್ತು ರಚನಾ ಅವರನ್ನು ಸುರೇಶ್‌ ಕಾಂಚನ್‌ ಹಾಗೂ ಗಣ್ಯರು ಸಮ್ಮಾನಿಸಿದರು. ಗಣ್ಯರು ವಿದ್ಯಾರ್ಥಿಗಳಿಗೆ ಪುಸ್ತಕ, ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ 10ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಮಾಧವ್‌, ಯುವಕ ಮಂಡಲದ ಅಧ್ಯಕ್ಷ ಚಂದ್ರ ಕುಂದರ್‌ ಉಪಸ್ಥಿತರಿದ್ದರು. ಮಧುಸೂದನ್‌ ಶೇರಿಗಾರ ಮತ್ತು ರಾಜೇಂದ್ರ ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಾಸಕರನ್ನು ಸುರೇಶ್‌ ಕಾಂಚನ್‌ ಸಮ್ಮಾನಿಸಿ, ಉಪ್ಪಿನಕುದ್ರುವಿನ ಅಭಿವೃದ್ಧಿಗಾಗಿ ಮನವಿ ಪತ್ರ ನೀಡಿದರು. ಸುರೇಶ್‌ ಕಾಂಚನ್‌ ಪುತ್ರಿಯರಾದ ನಿಕಿತಾ, ನಿವೇದಿತಾ ಹಾಗೂ ಊರ ಗಣ್ಯರು, ಹೆತ್ತವರುಉಪಸ್ಥಿತರಿದ್ದರು. ಯುವಕ ಮಂಡಲದ ಸಂಚಾಲಕ ಕೃಷ್ಣಮೂರ್ತಿ, ಅಧ್ಯಕ್ಷ ಚಂದ್ರ ಕುಂದರ್‌, ಶ್ರೀಧರ್‌ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಮಂಜುನಾಥ ಪಿ., ಸರ್ವ ಸದಸ್ಯರು, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪುರೋಹಿತರು, ಅರ್ಚಕರುಸಹಕರಿಸಿದರು. ಸೇರಿದ್ದ ಎಲ್ಲರಿಗೂ ಸುರೇಶ್‌ ಕಾಂಚನ್‌ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಜರ್‌ ನೀಡಲಾಯಿತು. ಕಾರ್ಯಕ್ರಮದಲ್ಲಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

Village

ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…

Sportsಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

ಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಎಂಸಿ ಪ್ರಾರಂಭಿಸಿದ 244 ಉಚಿತ ಕೋವಿಡ್‌ ಪರೀಕ್ಷಾ ಕೇಂದ್ರಗಳಿಗೆ ಉತ್ತಮ ಪ್ರತಿಕ್ರಿಯೆ

ಬಿಎಂಸಿ ಪ್ರಾರಂಭಿಸಿದ 244 ಉಚಿತ ಕೋವಿಡ್‌ ಪರೀಕ್ಷಾ ಕೇಂದ್ರಗಳಿಗೆ ಉತ್ತಮ ಪ್ರತಿಕ್ರಿಯೆ

ತೇಲುವ ವಿದ್ಯುತ್‌ ಸ್ಥಾ ವರ ನಿರ್ಮಾಣಕ್ಕೆ ಮುಂದಾದ ಬಿಎಂಸಿ

ತೇಲುವ ವಿದ್ಯುತ್‌ ಸ್ಥಾ ವರ ನಿರ್ಮಾಣಕ್ಕೆ ಮುಂದಾದ ಬಿಎಂಸಿ

ವಿಶಿಷ್ಟ ಪರಿಕಲ್ಪನೆಯ ಸಾಹಿತ್ಯ ಕಾರ್ಯಕ್ರಮ ನಿರಂತರವಾಗಿ ನಡೆಯಲಿ: ನಂದಳಿಕೆ ನಾರಾಯಣ ಶೆಟ್ಟಿ

ವಿಶಿಷ್ಟ ಪರಿಕಲ್ಪನೆಯ ಸಾಹಿತ್ಯ ಕಾರ್ಯಕ್ರಮ ನಿರಂತರವಾಗಿ ನಡೆಯಲಿ: ನಂದಳಿಕೆ ನಾರಾಯಣ ಶೆಟ್ಟಿ

ವಿದ್ಯಾದಾನ ಮನುಷ್ಯನ ಏಳಿಗೆಗೆ ಅತೀ ದೊಡ್ಡ ದಾನ: ರಾಜೇಂದ್ರ ಕುಮಾರ್‌

ವಿದ್ಯಾದಾನ ಮನುಷ್ಯನ ಏಳಿಗೆಗೆ ಅತೀ ದೊಡ್ಡ ದಾನ: ರಾಜೇಂದ್ರ ಕುಮಾರ್‌

NEWBORN

ಆಚಾರ್ಯ ಎಲೈವ್‌: ನವಜಾತ ಶಿಶುವಿನ ಆರೈಕೆ, ಅಂತರಾಷ್ಟ್ರೀಯ ವಿಚಾರ ಸಂಕಿರಣ

MUST WATCH

udayavani youtube

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ

udayavani youtube

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್ | Udayavani

udayavani youtube

ಮಂಗಳೂರು ದೋಣಿ ದುರಂತದಲ್ಲಿ ಮೃತಪಟ್ಟವರಲ್ಲಿ ಅನ್ಸಾರ್ ಎಂಬಾತನ ಮೃತ ದೇಹಕ್ಕಾಗಿ ಹುಡುಕಾಟ

udayavani youtube

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

udayavani youtube

ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ

ಹೊಸ ಸೇರ್ಪಡೆ

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

Village

ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.