ಮಹಾರಾಷ್ಟ್ರ  ಕನ್ನಡಿಗ ಪತ್ರಕರ್ತರ ಸಂಘ: ಸಾಧಕರಿಗೆ ಸಮ್ಮಾನ, ಯಕ್ಷಗಾನ 


Team Udayavani, Aug 28, 2018, 5:09 PM IST

2608mum05.jpg

ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ದಶಮಾನೋತ್ಸವ ಸಂಭ್ರಮವು ಆ. 22ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ  ಸಮಾರಂಭದಲ್ಲಿ ಹಿರಿಯ ಪತ್ರಕರ್ತರುಗಳಾದ ಬಂಟರ ವಾಣಿಯ ಮಾಜಿ ಸಂಪಾದಕ ರತ್ನಾಕರ ಶೆಟ್ಟಿ ಮತ್ತು ವಸಂತ ಕಲಕೋಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಲಾಯಿತು.

ಬೊರಿವಲಿ ಕ್ಷೇತ್ರದ ಸಂಸದ ಗೋಪಾಲ್‌ ಶೆಟ್ಟಿ, ಸಮಾಜ ಸೇವಕ ಭವಾನಿ ಶಿಪ್ಪಿಂಗ್‌ ಸರ್ವಿಸಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಇದರ ಕಾರ್ಯಾಧ್ಯಕ್ಷ ಕೆ. ಡಿ. ಶೆಟ್ಟಿ, ವಿ. ಕೆ. ಗ್ರೂಪ್‌ ಆಫ್‌ ಕಂಪೆನೀಸ್‌ ಇದರ ಕಾರ್ಯಾಧ್ಯಕ್ಷ ಕೆ. ಎಂ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ   ಚಂದ್ರಶೇಖರ್‌ ಎಸ್‌. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌, ಸಮಾಜ ಸೇವಕ ಕಡಂದಲೆ ಸುರೇಶ್‌ ಭಂಡಾರಿ, ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಆರ್ಥಿಕ ತಜ್ಞ ಡಾ| ಆರ್‌. ಕೆ. ಶೆಟ್ಟಿ, ಮುಂಬಯಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ, ಬಂಟರ ಸಂಘ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಮುಖ್ಯ ಸಲಹೆಗಾರ ಸಿಎ ಐ. ಆರ್‌. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಮಾತೃಭೂಮಿ ಕ್ರೆಡಿಟ್‌ ಕೋ  ಆಪರೇಟಿವ್‌ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ, ಬಂಟರ ಸಂಘ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಗೌರವ ಕಾರ್ಯದರ್ಶಿ ರೋನ್ಸ್‌ ಬಂಟ್ವಾಳ್‌ ಸಂಸ್ಥೆಯ  ಸಾಧನೆಗಳನ್ನು ವಿವರಿಸಿದರು. ಕಲಾಸೌರಭದ ಪದ್ಮನಾಭ ಸಸಿಹಿತ್ಲು ಪ್ರಾರ್ಥನೆಗೈದರು. ಗೌರವ ಕೋಶಾಧಿಕಾರಿ ಪ್ರೇಮನಾಥ್‌ ಶೆಟ್ಟಿ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಶೋಕ ಪಕ್ಕಳ, ವಿಚಾರ ಮಂಡನೆಯನ್ನು ದಯಾಸಾಗರ್‌ ಚೌಟ, ಸಭಾ ಕಾರ್ಯಕ್ರಮವನ್ನು ಹರೀಶ್‌ ಹೆಜ್ಮಾಡಿ ನಿರೂಪಿಸಿದರು. ವೇದಿಕೆಯಲ್ಲಿ ಉದ್ಯಮಿ ರಘುರಾಮ ಶೆಟ್ಟಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಜಯಾ ಪೂಜಾರಿ, ಆಹ್ವಾನಿತ ಸದಸ್ಯ ಸುರೇಶ್‌ ಶೆಟ್ಟಿ ಯೆಯ್ನಾಡಿ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಡಾ| ಶಿವ ಮೂಡಿಗೆರೆ ಮತ್ತಿತರರು ಉಪಸ್ಥಿತರಿದ್ದರು. 

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನಿರ್ದೇಶನದಲ್ಲಿ ಪತ್ರಕರ್ತರಿಂದ ಮಹಿಷಾಸುರ ಮರ್ದಿನಿ ಯಕ್ಷಗಾನ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.