ಮಹಾಸ್ವರಾಜ್‌ ಕೋ ಆಪರೇಟಿವ್‌ ಲಿ.:ಷೇರು ಅಪ್ಲಿಕೇಶನ್‌ ಬಿಡುಗಡೆ


Team Udayavani, Jul 13, 2018, 2:41 PM IST

1107mum01.jpg

ಮುಂಬಯಿ: ಮಹಾಸ್ವರಾಜ್‌ ಕ್ರೆಡಿಟ್‌ ಕೋ ಆಪರೇಟಿವ್‌ ಲಿಮಿಟೆಡ್‌  ಮುಂಬಯಿ ಇದರ ಷೇರು ಅಪ್ಲಿಕೇಶನ್‌ ಬಿಡುಗಡೆಯ ಸಮಾರಂಭವು ಜು. 8 ರಂದು ಕುರ್ಲಾ ಪೂರ್ವದ ಬಂಟರ ಭವನದ ಸಂಕುಲದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜ್ಞಾನಮಂದಿರದಲ್ಲಿ ನಡೆಯಿತು.

ಮುಂಬಯಿಯ ಸಂತೋಷ್‌ ಕ್ಯಾಟರರ್ಸ್‌ ನ ಮಾಲಕರಾದ ರಾಘು ಪಿ. ಶೆಟ್ಟಿ  ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಷೇರು ಅಪ್ಲಿಕೇಶನ್‌ ಬಿಡುಗಡೆಗೊಳಿಸಿ ಮಾತನಾಡಿ, 1991ರಲ್ಲಿ ಉಡುಪಿಯ ಅಂಬಾಗಿಲಿನಲ್ಲಿ ಸಣ್ಣಮಟ್ಟದಲ್ಲಿ ಪುರಂದರ ಶೆಟ್ಟಿ ಅವರಿಂದ ಪ್ರಾರಂಭಗೊಂಡ ಆರ್ಥಿಕ ಸಂಸ್ಥೆಯು ಹಂತ ಹಂತವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಇದೀಗ ಸಹಕಾರ ಕ್ಷೇತ್ರಕ್ಕೆ ಪ್ರವೇಶವಾಗುತ್ತಿರುವುದು ಅಭಿನಂದನೀಯವಾಗಿದೆ. ಇಂದು ಸಂಸ್ಥೆಯ ಷೇರು ಅಪ್ಲಿಕೇಶನ್‌ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ನನ್ನ ಕೈಯಿಂದ ಬಿಡುಗಡೆ ಆಗುತ್ತಿರುವುದು ನನ್ನ ಸೌಭಾಗ್ಯವಾಗಿದೆ. ಮುಂಬಯಿ, ಪುಣೆ, ಕಲ್ಯಾಣ್‌ಗಳಲ್ಲಿ ಷೇರು ಬಿಡುಗಡೆಗೊಳ್ಳಲಿದ್ದು ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಈ ಸಂಸ್ಥೆಯು  ಅಭಿವೃದ್ಧಿಯನ್ನು ಕಾಣಲಿ ಎಂದರು.

ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ರಾದ ವಿದ್ವಾನ್‌ ಅರವಿಂದ್‌ ಬನ್ನಿಂತಾಯ ಆಶೀರ್ವಚನ ನೀಡಿ, ಶ್ರೀ  ದೇವರ ಸನ್ನಿಧಿಯಲ್ಲಿ ಪುರಂದರ ಶೆಟ್ಟಿ ನೇತೃತ್ವದ  ಮಹಾಸ್ವರಾಜ್‌ ಕ್ರೆಡಿಟ್‌ ಕೋ. ಆಪರೇಟಿವ್‌ ಲಿಮಿಟೆಡ್‌ನ‌ ಷೇರು ಅಪ್ಲಿಕೇಶನ್‌ ಬಿಡುಗಡೆ ಯಾಗುತ್ತಿರುವುದು ಸಂತಸದ ವಿಚಾರವಾಗಿದೆ. ಪ್ರಾಮಾಣಿಕವಾಗಿ ಗ್ರಾಹಕರಿಗೆ  ಉತ್ತಮ ಸೇವೆಯನ್ನು ನೀಡುವ ಮೂಲಕ ಸಂಸ್ಥೆಯು ತೊಡಗಿಸಿಕೊಳ್ಳುವುದರಿಂದ ದೇವರ ಅನುಗ್ರಹವೂ ಪ್ರಾಪ್ತವಾಗುವುದರಲ್ಲಿ ಸಂದೇಹವಿಲ್ಲ.  ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಾದ್ಯಂತ ಈ ಸಂಸ್ಥೆ ಸೇವೆ ನೀಡುವಂತಾಗಲಿ. ದೇವರ ಅನುಗ್ರಹವಿರಲಿ ಸದಾಯಿರಲಿ ಎಂದರು.

ಈ ಸಂದರ್ಭ ಮುಂಬಯಿ ಬಂಟರ ಸಂಘದ ಸಿಟಿ ರೀಜನ್‌ ಮಾಜಿ ಕಾರ್ಯಾಧ್ಯಕ್ಷ ಭುಜಂಗ ಶೆಟ್ಟಿ ಸಂಸ್ಥೆಗೆ ಶುಭವನ್ನು ಕೋರಿದರು.  ಮಹಾಸ್ವರಾಜ್‌ ಕ್ರೆಡಿಟ್‌ ಕೋ. ಆಪರೇಟಿವ್‌ ಲಿಮಿಟೆಡ್‌ ಮುಂಬಯಿ ಇದರ ಅಧ್ಯಕ್ಷರಾದ ಬಿ. ಪುರಂದರ ಶೆಟ್ಟಿಯವರು ಅತಿಥಿಗಳನ್ನು ಸತ್ಕರಿಸಿ ವಂದನೆಗಳನ್ನು ಸಲ್ಲಿಸಿದರು.

ಸಂಜೆ ನವಿಮುಂಬಯಿಯ ಘನ್ಸೋಲಿ ಮೂಕಾಂಬಿಕಾ ದೇವಸ್ಥಾನದಲ್ಲಿ  ಉದ್ಯಮಿ ಸಿಬಿಡಿ ಭಾಸ್ಕರ ಶೆಟ್ಟಿಯವರು   ಷೇರು ಅಪ್ಲಿಕೇಶನ್‌ ಬಿಡುಗಡೆಗೊಳಿಸಿ ಶುಭ ಕೋರಿದರು. ದೇವಸ್ಥಾನದ ಧರ್ಮದರ್ಶಿ ಅಣ್ಣಿ ಶೆಟ್ಟಿ, ಕಲಾಸಾರಥಿ ಕರ್ನೂರು ಮೋಹನ್‌ ರೈ, ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ನಿವೃತ್ತ ವ್ಯವಸ್ಥಾಪಕರಾದ ನರೋತ್ತಮ ಜಿ. ಖೀರ್‌, ನವಿಮುಂಬಯಿಯ ಜ್ಯೋತಿಷ್ಯರಾದ ನಯನ್‌ ಎನ್‌. ಖೀರ್‌ ಉಪಸ್ಥಿತರಿದ್ದು ಸಂಸ್ಥೆಗೆ ಶುಭವನ್ನು ಹಾರೈಸಿದರು. ಸಂಸ್ಥೆಯ ಅಧ್ಯಕ್ಷ ಬಿ. ಪುರಂದರ ಶೆಟ್ಟಿ, ಆಡಳಿತ ನಿರ್ದೇಶಕ ಕಾರ್ತಿಕ್‌ ಶೆಟ್ಟಿ, ನಿರ್ದೇಶಕಿ ತಪಸ್ಯಾ ಶೆಟ್ಟಿ ಉಪಸ್ಥಿತರಿದ್ದು ಅತಿಥಿಗಳನ್ನು ಸತ್ಕರಿಸಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.