ಮಾಲ್ದಾಕ್ಕ ಶ್ರೀ ದುರ್ಗಾಪರಮೇಶ್ವರಿ ಮಂದಿರ: ನವರಾತ್ರಿ

Team Udayavani, Oct 4, 2017, 12:30 PM IST

02-Mum04a.jpg

ಪುಣೆ: ಮಂಗಳವಾರಪೇಟೆ ಮಾಲ್ದಕ್ಕದ ಪ್ರತಿಷ್ಠಿತ ಶ್ರೀ ದುರ್ಗಾಪರಮೇಶ್ವರಿ, ಶ್ರೀ  ದುರ್ಗಾಕಾಳಿ ದೇವಸ್ಥಾನದ  54ನೇ ವಾರ್ಷಿಕ ನವರಾತ್ರಿ ಉತ್ಸವವು ಸೆ. 21ರಿಂದ  ಸೆ. 30ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ಅದ್ದೂರಿಯಾಗಿ ನಡೆಯಿತು.

ಮಂದಿರದ ಮೊಕ್ತೇಸರ ಹಾಗೂ ಪ್ರದಾನ ಅರ್ಚಕ ಕರುಣಾಕರ ಶಾಂತಿ ಅವರ  ಪೌರೋಹಿತ್ಯದಲ್ಲಿ ಸೆ. 21 ರಂದು ಘಟ ಸ್ಥಾಪನೆಗೊಂಡು ಪ್ರತಿ ದಿನ ಶ್ರೀದೇವಿಗೆ ವಿಶೇಷ ಹೂವಿನ ಅಲಂಕಾರ, ನವರಾತ್ರಿಯ ವಿಶೇಷ ತ್ರಿಕಾಲ ಪೂಜೆ, ಸಂಜೆ 7ರಿಂದ ಶ್ರೀ  ದುರ್ಗಾಪರಮೇಶ್ವರಿ ಭಜನಾ ಮಂಡಳಿ ಮತ್ತು ಭಕ್ತರಿಂದ ಭಜನ ಕಾರ್ಯಕ್ರಮ, ರಾತ್ರಿ 9 ರಿಂದ ಮಂಗಳಾರತಿ  ಹಾಗೂ ದೇವಿ ದರ್ಶನ ಮತ್ತು ಪೂಜಾ ಸೇವಾ ಕಾರ್ಯಗಳು ನಡೆಯಿತು.

ಸುಮಾರು  54 ವರ್ಷಗಳ ಹಿಂದೆ ಪ್ರತಿಸ್ಥಾಪನೆಗೊಂಡು ಪುಣೆಯಲ್ಲಿ  ದಿನಂಪ್ರತಿ ವಿಶೇಷ ಹೂವಿನ ಅಲಂಕಾರಕ್ಕೆ ಪ್ರಸಿದ್ಧಿ ಪಡೆದ ಈ ದೇವಿ ಮಂದಿರದಲ್ಲಿ ಈ  ಬಾರಿಯ ನವರಾತ್ರಿಯ ವಿಶೇಷ ದಿನಗಳಾದ  ಸೆ, 28ರಂದು ಚಂಡಿಕಾ ಹೋಮ, ಸೆ. 29ರಂದು ಕುಮಾರಿಕಾ ಪೂಜನೆ, ಸೆ. 30 ರಂದು ಶ್ರೀ ಸತ್ಯನಾರಾಯಣ ಮಹಾ ಪೂಜೆ ಹಾಗೂ ವಿಜಯದಶಮಿಯ  ವಿಶೇಷ ಪೂಜೆ ನಡೆಯಿತು.

ಮಹಾ ಪ್ರಸಾದ ವಿತರಣೆಯ ಅಂಗವಾಗಿ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.  ಹತ್ತನೇ ದಿನ ದಸರಾದಂದು ಅಲಂಕೃತ ಮಂಟಪದಲ್ಲಿ  ಶ್ರೀ ದೇವಿಯ ಪ್ರಭಾವಳಿಯ ಭವ್ಯ ಶೋಭಾಯಾತ್ರೆಯು ಸಂಜೆ  6.30 ರಿಂದ  ಚೆಂಡೆ ವಾದ್ಯ ಘೋಷಗಳೊಂದಿಗೆ ನಗರದ ವಿವಿಧ ರಸ್ತೆಗಳ ಮುಖಾಂತರ ಸಾಗಿತು. ಈ ಸಂದರ್ಭದಲ್ಲಿ ಅಲ್ಲಲ್ಲಿ ಭಕ್ತರು ಶ್ರೀ ದೇವಿಗೆ ಹೂ ಹಣ್ಣುಕಾಯಿಯೊಂದಿಗೆ ಪೂಜೆ ಸಲ್ಲಿಸಿ   ಪ್ರಸಾದ ಸ್ವೀಕರಿಸಿದರು.

ನವರಾತ್ರಿಯ ಈ ಪರ್ವ ಕಾಲದಲ್ಲಿ ಹೆಚ್ಚಿನ ಸಂಖ್ಯೆಯ  ತುಳು ಕನ್ನಡಿಗರು ಅಲ್ಲದೆ ಗುಜರಾತಿ, ರಾಜಸ್ಥಾನಿ, ಮರಾಠಿ ಅಲ್ಲದೆ ಬೇರೆ ಬೇರೆ ಭಾಷೆಯ  ದೇವಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ   ಪಾಲ್ಗೊಂಡು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿ ಕೃಪೆಗೆ  ಪಾತ್ರರಾದರು. ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡು ಸೇವೆ ನೀಡಿದ ಎಲ್ಲ ಭಕ್ತರಿಗೆ ಶ್ರೀ ದುರ್ಗಾ ಪರಮೇಶ್ವರಿ ಶ್ರೀ ದುರ್ಗಾಕಾಳಿ ಸನ್ಮಂಗಳವನ್ನು ಕರುಣಿಸಲಿ ಎಂದು ಮಂದಿರದ ಪ್ರಧಾನ ಅರ್ಚಕರಾದ ಕರುಣಾಕರ ಶಾಂತಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. 

 ಚಿತ್ರ-ವರದಿ: ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.