ಮೀರಾರೋಡ್‌ ಶನೀಶ್ವರ ಮಂದಿರ: ನಾಗ ಪ್ರತಿಷ್ಠೆಯ ವರ್ಧಂತಿ ಉತ್ಸವ

Team Udayavani, Feb 8, 2020, 6:22 PM IST

mumbai-tdy

ಮುಂಬಯಿ, ಫೆ. 7: ಮೀರಾರೋಡ್‌ ಪೂರ್ವದ, ನ್ಯೂ ಪ್ಲೆಸೆಂಟ್‌ ಪಾರ್ಕ್‌ನ ಮೀರಾ ಧಾಮ್‌ ಸೊಸೈಟಿಯಲ್ಲಿರುವ ಶ್ರೀ ಶನೀಶ್ವರ ಸೇವಾ ಚಾರಿಟೇಬಲ್‌ ಟ್ರಸ್ಟ್‌ ಇದರ ಶ್ರೀ ಶನೀಶ್ವರ ಮಂದಿರದ ನಾಗ ಸನ್ನಿಧಿಯಲ್ಲಿ ಶ್ರೀ ನಾಗ ಪ್ರತಿಷ್ಠಾಪನೆಯ ದ್ವಿತೀಯ ವರ್ಧಂತಿ ಉತ್ಸವವು ಫೆ. 7ರಂದು ವಿಷ್ಣುಮೂರ್ತಿ ಅಡಿಗ ಅವರ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಅದ್ದೂರಿಯಾಗಿ ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ತನು ತಂಬಿಲ, ನವಕ ಕಲಶ, ಪಂಚಮೃತ ಅಭಿಷೇಕ, ಸಾಮೂಹಿಕ ಆಶ್ಲೇಷ ಬಲಿ, ತದನಂತರ ನಾರಾಯಣ ಭಟ್‌ ರೆಂಜಾಳ ಅವರಿಂದ ನಾಗ ದರ್ಶನ ನಡೆಯಿತು. ಶ್ರೀ ಕ್ಷೇತ್ರದ ಬಗ್ಗೆ ಮಾಹಿತಿ ನೀಡಿದ ಗೌರವ ಕಾರ್ಯದರ್ಶಿ ಪುರಂದರ ಶ್ರೀಯಾನ್‌ ಅವರು ಶ್ರೀ ಶನಿದೇವರ ಮತ್ತು ಶ್ರೀ ನಾಗ ದೇವರ ಮೂರ್ತಿ ಪ್ರತಿಷ್ಠಾಪನೆಯಿಂದ ಮೀರಾರೋಡಿನ ಶನಿ ಮಂದಿರವು ತುಳು ಕನ್ನಡಿಗರ, ಕನ್ನಡೇತರ ಭಕ್ತಿ ಸಂಗಮದ ಕ್ಷೇತ್ರವಾಗಿದೆ. ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ವೃದ್ಧಿಸುತ್ತಿದೆ. ತನು ತಂಬಿಲ, ನಾಗರ ಪಂಚಮಿಯ ಮೂಲಕ ಪರಿವಾರ ಕುಟುಂಬದವರನ್ನು, ಬಂಧು ಮಿತ್ರರನ್ನು ಒಗ್ಗೊಡಿಸುವ ನಾಗ ದೇವರು ಪ್ರಕೃತಿ ರಕ್ಷಕರಾಗಿದ್ದಾರೆ. ಅವರ ಪ್ರತಿಯೊಂದು ಸೇವೆಗಳು ವೈದಿಕ ತತ್ವದಡಿ ಇಲ್ಲಿ ನಡೆಸಲಾಗುವುದು ಎಂದರು.

ಶ್ರೀ ಶನೀಶ್ವರ ಸೇವಾ ಚಾರಿಟೆಬಲ್‌ ಟ್ರಸ್ಟ್‌ ಇದರ ಗೌರವ ಅಧ್ಯಕ್ಷ ವಿನೋದ್‌ ವಘಾಸಿಯ, ಅಧ್ಯಕ್ಷೆ ವಿದ್ಯಾ ಅಶೋಕ್‌ ಕರ್ಕೇರ, ಉಪಾಧ್ಯಕ್ಷರಾದ ಸಂಪತ್‌ ಬಿ. ಶೆಟ್ಟಿ ಮತ್ತು ಗುಣಕಾಂತ್‌ ಶೆಟ್ಟಿ ಕರ್ಜೆ, ಜತೆ ಕಾರ್ಯದರ್ಶಿಗಳಾದ ಲೋಹಿತಾಕ್ಷ ಕೆ. ಬಂಗೇರ ಮತ್ತು ಸುಜಾತಾ ಜಿ. ಶೆಟ್ಟಿ, ಕೋಶಾಧಿಕಾರಿ ಅಚ್ಯುತ ಟಿ. ಕೋಟ್ಯಾನ್‌, ಜತೆ ಕೋಶಾಧಿಕಾರಿಗಳಾದ ಜಯಕರ ಎಸ್‌. ಶೆಟ್ಟಿ ಮತ್ತು ಭಾರತಿ ಎ. ಅಂಚನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಲ್ಲಿಕಾ ಕೆ. ಶೆಟ್ಟಿ, ಕಾರ್ಯದರ್ಶಿ ಲೀಲಾ ಡಿ. ಪೂಜಾರಿ, ಮಹಿಳಾ ಸದಸ್ಯೆಯರು, ಪೂಜಾ ಮತ್ತು ಸಾಂಸ್ಕೃತಿ ಉಪ ಸಮಿತಿಯ ಸರ್ವ ಸದಸ್ಯರು, ಪೂಜಾ ಸಮಿತಿ, ಸಲಹೆಗಾರರು , ಮಹಿಳಾ ವಿಭಾಗದ ಸದಸ್ಯೆಯರು ಭಕ್ತಾದಿಗಳನ್ನು ಗೌರವಿಸಿದರು.

ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ರಾಜಕೀಯ ನೇತಾರರು, ತುಳು – ಕನ್ನಡಿಗರು ಉಪಸ್ಥಿತರಿದ್ದು ಶ್ರೀ ನಾಗ ದೇವರ ಮತ್ತು ಶ್ರೀ ಶನಿ ದೇವರ ದರ್ಶನ ಪಡೆದರು. ಸಹಕರಿಸಿದ ಭಕ್ತಾದಿಗಳಿಗೆ ಕಾರ್ಯದರ್ಶಿ ಪುರಂದರ ಶ್ರೀಯಾನ್‌ ಕೃತಜ್ಞತೆ ಸಲ್ಲಿಸಿದರು. ಸದಾನಂದ ಪೂಜಾರಿ ಕಾರ್ಕಳ ಕಾರ್ಯಕ್ರಮ ನಿರ್ವಹಿಸಿದರು.

ಚಿತ್ರ-ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.