ಮುಂಬಯಿ ಕನ್ನಡ ಸಂಘ: ಆ. 28ರಂದು ನಿಧಿ ಸಂಗ್ರಹ ಸಮಿತಿ ವಿಶೇಷ ಸಭೆ

Team Udayavani, Aug 25, 2021, 1:54 PM IST

ಮುಂಬಯಿ ಕನ್ನಡ ಸಂಘ: ಆ. 28ರಂದು ನಿಧಿ ಸಂಗ್ರಹ ಸಮಿತಿ ವಿಶೇಷ ಸಭೆ

ಮಾಟುಂಗ: ಮಾಟುಂಗ ಪೂರ್ವದ ಮುಂಬಯಿ ಕನ್ನಡ ಸಂಘದ ನಿಧಿ ಸಂಗ್ರಹಣ ಸಮಿತಿ ವತಿಯಿಂದ ನಿಧಿ ಸಂಗ್ರಹಕ್ಕಾಗಿ ವಿಶೇಷ ಸಭೆಯು ಆ. 28ರಂದು ಸಂಜೆ 5ರಿಂದ ಮಾಟುಂಗ ಪೂರ್ವದ ಸಂಘದ ವಾಚನಾಲಯದಲ್ಲಿ ನಡೆಯಲಿದೆ.

ಮಾಟುಂಗ ಪೂರ್ವದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಮುಂಬಯಿ ಕನ್ನಡ ಸಂಘವು ಕಳೆದ ವರ್ಷಗಳಿಂದ ಕನ್ನಡ ಸಾಹಿತ್ಯಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದೆ. ಸಂಘಕ್ಕೆ ತನ್ನದೇ ಆದಂತಹ ಸಭಾಗೃಹ ಇಲ್ಲದಿದ್ದರೂ ಈ ಎಲ್ಲ ಕಾರ್ಯಕ್ರಮಗಳನ್ನು ಸದಾ ನಡೆಸುವಲ್ಲಿ ಸಂಘವು ಯಶಸ್ವಿಯಾಗಿದೆ. ಅಲ್ಲದೆ ಸಂಘವು ಉಚಿತ ವಾಚನಾಲಯದ ಸುಮಾರು 14 ಸಾವಿರಕ್ಕೂ ಹೆಚ್ಚು ಪುಸ್ತಕಗಳಿರುವ ಉತ್ತಮ ಗ್ರಂಥಾಲಯವನ್ನು ನಡೆಸುತ್ತಿದೆ. ಮುಂಬಯಿ ಕನ್ನಡ ಸಂಘದ ಕಚೇರಿ ಮತ್ತು ಗ್ರಂಥಾಲಯವು ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿರುವ ವೆಂಕಟೇಶ ನಿವಾಸದ ಕಟ್ಟಡದಲ್ಲಿದೆ.

ಇದನ್ನೂ ಓದಿ:‘ನಾನು ತಪ್ಪು ಮಾಡಲ್ಲ, ತಲೆಯೂ ಬಾಗಿಸೋಲ್ಲ’: DSS ಅಧ್ಯಕ್ಷ ರಘು ವಿರುದ್ಧ ಜಗ್ಗೇಶ್ ಆಕ್ರೋಶ

ಇದು 95 ವರ್ಷಗಳ ಹಳೆಯ ಕಟ್ಟಡವಾಗಿದ್ದು, 2021ರ ಡಿಸೆಂಬರ್‌ನಲ್ಲಿ ಈ ಕಟ್ಟಡವನ್ನು ಕೆಡವಿ ನವೀಕರಿಸಲು ನಿರ್ಧರಿಸಲಾಗಿದೆ. ಈ ಕಟ್ಟಡದಲ್ಲೇ ಸಂಘಕ್ಕೆ 1,080 ಚದರ ಅಡಿಯ ಒಂದು ಕಿರು ಸಭಾಗೃಹ ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಸುಮಾರು 2 ಕೋ. ರೂ. ಗಳಿಗೂ ಹೆಚ್ಚು ವೆಚ್ಚ ತಗಲಲಿದ್ದು, 3 ವರ್ಷಗಳ ಅವಧಿಯಲ್ಲಿ ಈ ಸಭಾಗೃಹ ನಿರ್ಮಾಣವಾಗಲಿದೆ. ಆದುದರಿಂದ ಈ ಸಭಾಗೃಹ ಖರೀದಿಸಲು ನಿಧಿ ಸಂಗ್ರಹಕ್ಕಾಗಿ ವಿಶೇಷ ಸಮಿತಿಯೊಂದನ್ನು ರಚಿಸಲಾಗಿದ್ದು, ಬೃಹತ್‌ ನಿಧಿ ಸಂಗ್ರಹಕ್ಕಾಗಿ ಈಗಾಗಲೇ ಸಮಿತಿಯ ಸರ್ವ ಸದಸ್ಯರು ಕಾರ್ಯಪ್ರವೃತ್ತಗೊಂಡಿದ್ದಾರೆ.

ಸಭೆಯಲ್ಲಿ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ಉಪಸಮಿತಿಯ ಸದಸ್ಯರು, ನಿಧಿ ಸಂಗ್ರಹಕ್ಕೆ ಸಹಾಯ ಮಾಡಲಿಚ್ಛಿಸುವ ಸಹೃದಯಿ ದಾನಿಗಳು ಪಾಲ್ಗೊಂಡು ಸಭೆಯ ಯಶಸ್ಸಿಗೆ ಸಹಕರಿಸುವಂತೆ ಸಂಘದ ಅಧ್ಯಕ್ಷ ಗುರುರಾಜ ಎಸ್‌. ನಾಯಕ್‌, ಕಿರು ಸಭಾಗೃಹ ಸಮಿತಿಯ ಮುಖ್ಯಸ್ಥ ಕಮಲಾಕ್ಷ ಜಿ. ಸರಾಫ್‌ ಮತ್ತು ವಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಡಾ| ರಜನಿ ವಿ. ಪೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.