ಮುಂಬಯಿ: “ಪತ್ತನಾಜೆ’ ತುಳು ಚಿತ್ರದ ಪ್ರೀಮಿಯರ್‌ ಶೋ


Team Udayavani, Oct 15, 2017, 3:48 PM IST

66.jpg

ಮುಂಬಯಿ: ನಗರದ ಖ್ಯಾತ ರಂಗಕರ್ಮಿ, ಲಿಮ್ಕಾ ಖ್ಯಾತಿಯ ಕಲಾಜಗತ್ತು ಡಾ| ವಿಜಯ ಕುಮಾರ್‌ ಶೆಟ್ಟಿ ತೋನ್ಸೆ ಅವರ ನಿರ್ದೇಶನ ಮತ್ತು ನಿರ್ಮಾಪಕತ್ವದ ಪತ್ತನಾಜೆ ತುಳು ಚಲನಚಿತ್ರದ ಪ್ರೀಮಿಯರ್‌ ಶೋ ಅ. 8ರಂದು ಸಯಾನ್‌ ರೂಪಂ ಸಿನೆಮಾ ಮಂದಿರದಲ್ಲಿ ಯಶಸ್ವಿಯಾಗಿ ನೆರವೇರಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಆಲ್‌ ಕಾರ್ಗೋ ಲಾಜಿಸ್ಟಿಕ್‌ ಸಂಸ್ಥೆಯ ಸಿಇಒ  ಕನ್ನಡಿಗ ಶಶಿಕಿರಣ್‌ ಶೆಟ್ಟಿ ಅವರು ಚಿತ್ರಕ್ಕೆ ಶುಭ ಹಾರೈಸಿ ಮಾತನಾಡಿ, ಪತ್ತನಾಜೆ  ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಚಿತ್ರವಾಗಿದ್ದು, ನಾಡಿನ ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರಗಳ ಪ್ರತಿಬಿಂಬವಾಗಿದೆ.ಮುಂಬಯಿಯ ತುಳು ಕನ್ನಡಿಗರು ನೋಡಲೇ ಬೇಕಾದ ಚಲನಚಿತ್ರ ಇದಾಗಿದೆ. ಪಾತ್ರಗಳ ಆಯ್ಕೆಯಿಂದ ಹಿಡಿದು, ಸಂಗೀತವಂತು ಅದ್ಭುತ ವಾಗಿ ಮೂಡಿಬಂದಿದೆ. ನಾಡಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಚಿತ್ರೀಕರಣಗೊಂಡ ಈ ಚಲನಚಿತ್ರವು ಯುವಪೀಳಿಗೆಗೆ ಹಲವು ವಿಷಯಗಳಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದರು.

ಚಿತ್ರದ ರೂವಾರಿ ಕಲಾಜಗತ್ತು ಡಾ| ವಿಜಯಕುಮಾರ್‌ ಶೆಟ್ಟಿ ಅವರು ಚಲನಚಿತ್ರದ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಿ, ತುಳುಚಿತ್ರದಲ್ಲಿ ತುಳುವರಿಗೆ ಹೊಸತು ಏನನ್ನಾದರೂ ನೀಡಬೇಕೆಂಬ ಉದ್ದೇಶದಿಂದ ಈ ಚಿತ್ರವನ್ನು ನಿರ್ಮಿಸಲಾಗಿದೆ. ಪತ್ತನಾಜೆ ಉತ್ತಮ ರೀತಿಯ ಮೂಡಿ ಬಂದಿದೆ. ವಿಮರ್ಶಕರಿಂದ ಒಳ್ಳೆಯ ಅಭಿಪ್ರಾಯಗಳು ವ್ಯಕ್ತವಾಗಿದೆ. ಮುಂಬಯಿಯಲ್ಲಿ ನನ್ನ ಎಲ್ಲಾ ಅಭಿಮಾನಿಗಳಿಗೆ ಪತ್ತನಾಜೆಯನ್ನು ವೀಕ್ಷಿಸಲು ಪ್ರೀಮಿಯರ್‌ ಶೋ ಮೂಲಕ‌ ಅವಕಾಶ ನೀಡಲಾಗಿದೆ. ಇಷ್ಟೊಂದು ಸಂಖ್ಯೆಯಲ್ಲಿ ನೀವೆಲ್ಲರೂಬಂದಿರುವುದು ಸಂತೋಷ ತಂದಿದೆ.  ಪತ್ತನಾಜೆ ಚಿತ್ರವನ್ನು ಮುಂಬಯಿಯ ಎಲ್ಲಾ ಸಂಘ-ಸಂಸ್ಥೆಗಳು ಪ್ರದರ್ಶಿಸಲು ಮುಂದಾಗಬೇಕು. ಚಿತ್ರವನ್ನು ಗೆಲ್ಲಿಸಿ, ಕಲಾವಿದರನ್ನು ಪ್ರೋತ್ಸಾಹಿಸಿ ನಮ್ಮನ್ನು ಹರಸುವಂತೆ ವಿನಂತಿಸಿದರು.

ಆರತಿ ಶಶಿಕಿರಣ್‌ ಶೆಟ್ಟಿ, ಮೂಲ್ಕಿ ವಿಜಯಾ ಕಾಲೇಜಿನ ಆಡಳಿತ ಸಮಿತಿಯ ಶಮೀನಾ ಆಳ್ವ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಜಯ ಕೃಷ್ಣ ಶೆಟ್ಟಿ,  ತೀಯಾ ಸಮಾಜ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಪತ್ರಕರ್ತ ಏಳಿಂಜೆ ನಾಗೇಶ್‌, ಚಿತ್ರದ ಸಹ ನಿರ್ಮಾಪಕ ಮಂಜುನಾಥ ಬನ್ನೂರು, ಪ್ರೇಮ್‌  ಶೆಟ್ಟಿ ಸುರತ್ಕಲ…,  ವಿಜಯ… ಕುಮಾರ್‌  ಕೊಡಿಯಾಲ್‌ಬೈಲ್‌, ಸಚಿನ್‌ ಎ. ಎಸ್‌. ಉಪ್ಪಿನಂಗಡಿ, ರಾಜೇಶ್‌ ಕುಡ್ವಾ,  ಫ್ರಾಂಕ್‌ ಫೆರ್ನಾಂಡಿಸ್‌, ಸೂಜ್‌ ಪಾಂಡೇಶ್ವರ್‌, ಸುಜಿತ್‌ ನಾಯಕ್‌, ಗಣೇಶ್‌ ಶೆಟ್ಟಿ ಮಿಜಾರ್‌, ಕಲಾವಿದರಾದ ಸುರೇಂದ್ರ ಕುಮಾರ್‌  ಹೆಗ್ಡೆ, ರೇಷ್ಮಾ  ಶೆಟ್ಟಿ, ಕಾಜಲ… ಕುಂದರ್‌ ಅಲ್ಲದೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿದೇಶದಿಂದ ಆಗಮಿಸಿದ ಗಣ್ಯರು, ಉದ್ಯಮಿಗಳು ಉಪಸ್ಥಿತರಿದ್ದರು.

ಅತಿಥಿಗಳನ್ನು  ಸ್ಮರಣಿಕೆ ನೀಡಿ ಗೌರವಿಸಲಾಯಿತು. ದಯಾ ಸಾಗರ ಚೌಟ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ನೂರಾರು ಮಂದಿ ಕಲಾಪ್ರೇಮಿಗಳು ಉಪಸ್ಥಿತರಿದ್ದು ಚಿತ್ರವನ್ನು ವೀಕ್ಷಿಸಿ ಕಲಾಜಗತ್ತು ವಿಜಯಕುಮಾರ್‌ ಶೆಟ್ಟಿ ಹಾಗೂ ಕಲಾವಿದರನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.