ನಾಸಿಕ್‌ ಮಾಸ್ಟರ್ ಆ್ಯತ್ಲೆಟಿಕ್ಸ್‌ ಶಿವಾನಂದ ಶೆಟ್ಟಿಗೆ ಚಿನ್ನ ,ಕಂಚು

Team Udayavani, Mar 30, 2017, 3:21 PM IST

26-Mum06.jpg

ನಾಸಿಕ್‌: ನಾಸಿಕ್‌ನ ಪಂಚವಟಿಯ ಹೀರಾವಾಡಿ ಮೀನಾತಾಯಿ ಠಾಕ್ರೆ ಕ್ರೀಡಾ ಸಂಕುಲದಲ್ಲಿ ಇಂಡಿಯನ್‌ ಮಾಸ್ಟರ್  ಆ್ಯತ್ಲೆಟಿಕ್ಸ್‌ನ 37ನೇ ನ್ಯಾಷನಲ್‌ ಮಾಸ್ಟರ್ ಆ್ಯತ್ಲೆಟಿಕ್‌ ಚಾಂಪಿಯನ್‌ಶಿಪ್‌-2017ನಲ್ಲಿ ತುಳು-ಕನ್ನಡಿಗ ಶಿವಾನಂದ ಶೆಟ್ಟಿ ಅವರು ಚಿನ್ನ, ಕಂಚನ್ನು ಪಡೆದು ವಿಶೇಷ ಸಾಧನೆಗೈದಿದ್ದಾರೆ.

ನಾಸಿಕ್‌ ಡಿಸ್ಟ್ರಿಕ್ಟ್ ವೆಟರನ್ಸ್‌ ಆ್ಯತ್ಲೆಟಿಕ್ಸ್‌ ಅಸೋಸಿಯೇಶನ್‌ ಆಯೋಜಿತ ಮಾಸ್ಟರ್‌ ಆ್ಯತ್ಲೆಟಿಕ್ಸ್‌ ಆಫ್‌ ಮಹಾರಾಷ್ಟ್ರ ಸಂಸ್ಥೆಯ ವತಿಯಿಂದ ಈ ಕ್ರೀಡೋತ್ಸವವು ಜರಗಿತು. ಶಿವಾನಂದ ಶೆಟ್ಟಿ ಅವರು 35-40 ವರ್ಷದೊಳಗಿನವರ  800 ಮೀ. ಓಟದಲ್ಲಿ  ಚಿನ್ನ, 1500 ಮೀ. ಓಟದಲ್ಲಿ ಕಂಚು ಹಾಗೂ 5000 ಮೀ. ಓಟದಲ್ಲಿ ಐದನೇ ಸ್ಥಾನ ಪಡೆದು ತುಳು-ಕನ್ನಡಿಗರಿಗೆ ಕೀರ್ತಿ ತಂದಿದ್ದಾರೆ. ಮಹಾರಾಷ್ಟ್ರ  ಸೇರಿದಂತೆ ಕರ್ನಾಟಕ, ಹರಿಯಾಣ, ತೆಲಂಗಾಣ, ಹರ್ಯಾಣ, ಹೈದರಾಬಾದ್‌, ಉತ್ತರ ಪ್ರದೇಶ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ  ಸುಮಾರು 17 ರಾಜ್ಯಗಳ ಸುಮಾರು 1500ಕ್ಕೂ ಅಧಿಕ ಕ್ರೀಡಾಳುಗಳು ಪಾಲ್ಗೊಂಡಿದ್ದರು. ಮಾ. 24ರಿಂದ ಮಾ. 26ರವರೆಗೆ ಕ್ರೀಡಾಕೂಟವು ನಡೆಯಿತು. ಶಿವಾನಂದ ಶೆಟ್ಟಿ ಅವರನ್ನು ಮಾಸ್ಟರ್‌ ಆ್ಯತ್ಲೆಟಿಕ್ಸ್‌Õ ಆಫ್‌ ಮಹಾರಾಷ್ಟ್ರ ಇದರ ಮುಂಬಯಿ ವಿಭಾಗದ ಪ್ರಬಂಧಕ ಅಶೋಕ್‌ ಚವಾಣ್‌ ಅವರು ಗೌರವಿಸಿದರು.

ನಗರದ ಉತ್ತಮ ಮ್ಯಾರಥಾನ್‌ಪಟುವಾಗಿರುವ ಶಿವಾನಂದ ಶೆಟ್ಟಿ ಅವರು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಮ್ಯಾರಥಾನ್‌ ಓಟಗಾರರಾಗಿ ಈಗಾಗಲೇ ಹೆಸರು ಮಾಡಿದ್ದು, ಥಾಣೆಯಲ್ಲಿ ಮಾ. 19ರಂದು ನಡೆದ 18 ರಿಂದ 50 ವರ್ಷದೊಳಗಿನವರ 10 ಕಿ. ಮೀ. ಮುಂಬಯಿ ರನ್‌ ಕಾರ್ನಿವಲ್‌ ರೇಸ್‌ ಮ್ಯಾರಥಾನ್‌ನಲ್ಲಿ ನಾಲ್ಕನೇ ಸ್ಥಾನ, ಕಲ್ಯಾಣ್‌ನಲ್ಲಿ ನಡೆದ 21 ಕಿ. ಮೀ. ಮ್ಯಾರಥಾನ್‌ನಲ್ಲಿ 35-45 ವರ್ಷದೊಳಗಿನ ವಿಭಾಗದಲ್ಲಿ 4ನೇ ಸ್ಥಾನವನ್ನು ಪಡೆದಿದ್ದಾರೆ.

ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡೋತ್ಸವಗಳಲ್ಲಿ ಪಾಲ್ಗೊಂಡಿರುವ ಅವರು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಎ. 18ರಂದು ನ್ಯೂಜಿಲ್ಯಾಂಡ್‌ನ‌ಲ್ಲಿ ನಾಲ್ಕು ವರ್ಷಗಳಿಗೊಮ್ಮೆ ನಡೆಯಲಿರುವ ವರ್ಲ್ಡ್ ಮಾಸ್ಟರ್‌ ಗೇಮ್ಸ್‌ಗೆ ಆಯ್ಕೆಯಾಗಿರುವ ಅವರು, 800 ಮೀ., 1500 ಮೀ., 5000, 10,000 ಮೀ. ಓಟಗಳಲ್ಲಿ ಅಲ್ಲದೆ 10 ಕಿ. ಮೀ. ಕಂಟ್ರಿರೋಡ್‌ ರೇಸ್‌, 21 ಕಿ. ಮೀ. ಆಫ್‌ ಮ್ಯಾರಥಾನ್‌ನಲ್ಲಿ ಭಾಗವಹಿಸಲಿದ್ದಾರೆ.

ಅವರ ನ್ಯೂಜಿಲ್ಯಾಂಡ್‌ ಪ್ರವಾಸಕ್ಕೆ ಹಲವು ಹೊಟೇಲ್‌ ಉದ್ಯಮಿಗಳು ಈಗಾಗಲೇ ಸಹಕರಿಸಿದ್ದು, ಹೊಟೇಲ್‌ ಉದ್ಯಮಿ, ಆಹಾರ್‌ ವಲಯ ಒಂದರ ಉಪಕಾರ್ಯಾಧ್ಯಕ್ಷ ಮಹೇಶ್‌ ಕರ್ಕೇರ ಅವರು ಪ್ರಾಯೋಜಕತ್ವವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದ ನಿರೀಕ್ಷೆಯಲ್ಲಿ ಇರುವುದಾಗಿ ಶಿವಾನಂದ ಶೆಟ್ಟಿ ಅವರು ತಿಳಿಸಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ 9571652927 ಈ ನಂಬರನ್ನು ಸಂಪರ್ಕಿಸಬಹುದು. ಅವರು ಮೂಲತಃ ನಿಡ್ಡೋಡಿ ನಂದಬೆಟ್ಟು ವಸಂತ ಶೆಟ್ಟಿ ಮತ್ತು ದೆಪ್ಪುಣಿಗುತ್ತು ಅತಿಕಾರಿಬೆಟ್ಟು ಲೀಲಾವತಿ ಶೆಟ್ಟಿ ದಂಪತಿಯ ಪುತ್ರ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.