Udayavni Special

ನೆರೂಲ್‌ ಶ್ರೀ ಶನೀಶ್ವರ ಮಂದಿರ:ಶ್ರೀ ಗಣೇಶೋತ್ಸವ ಅಖಂಡ ಭಜನೆ 

Team Udayavani, Aug 29, 2017, 2:14 PM IST

27mum07A.jpg

ನವಿಮುಂಬಯಿ:  ನವೀ ಮುಂಬಯಿಯ ನೆರೂಲ್‌ನ ಶ್ರೀ ಶನೀಶ್ವರ ಮಂದಿರದಲ್ಲಿ ಶ್ರೀ ಗಣೇಶೋತ್ಸವದ ಅಂಗವಾಗಿ ಆ.27ರಂದು  24 ಗಂಟೆಗಳ ಅಖಂಡ ಭಜನ ಕಾರ್ಯಕ್ರಮ ಜರಗಿತು. ಮಂದಿರದ ಅಧ್ಯಕ್ಷ ರಮೇಶ್‌ ಎಂ. ಪೂಜಾರಿ ಅವರು ಶ್ರೀ ದೇವರ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸಿ ಶ್ರೀ ದೇವರ ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅನಂತರ ಮಾತನಾಡಿದ ಅವರು, ಭಜನೆ ಎಂಬುದು ದೇವರಿಗೆ ಮಾಡುವ ಅತ್ಯಂತ ಪ್ರೀತಿಯ ಸೇವೆ. ಭಜನೆಯಿಂದ ದೇವರು ಸಂತುಷ್ಟನಾಗುತ್ತಾನೆ. ಭಜನೆ ಮಾಡುವುದರಿಂದ ಧಾರ್ಮಿಕತೆ ಹೆಚ್ಚುತ್ತದೆ. ಶ್ರೀಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಪ್ರತಿ ವರ್ಷ 24 ಗಂಟೆಗಳ  ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತ ಬರುತ್ತಿದ್ದು, ಇದಕ್ಕೆ ವಿವಿಧ ಭಜನಾ ಸಂಘಗಳು ಪಾಲ್ಗೊಳ್ಳುವುದು ನೋಡಿದರೆ ಜನರಿಗೆ ಭಜನೆಯ ಮೇಲೆ ಆಸಕ್ತಿಯು ತುಂಬಾ ಇದೆ ಎಂಬುದನ್ನು ತೋರಿಸುತ್ತದೆ ಎಂದರು.

24 ಗಂಟೆಗಳ ಕಾಲ ನಿರಂತರ ಜರಗಲಿರುವ ಈ ಭಜನಾ ಕಾರ್ಯಕ್ರಮವು ಸೋಮವಾರ ಬೆಳಗ್ಗೆ ಮಹಾ ಮಂಗಳಾರತಿಯೊಂದಿಗೆ ಸಮಾಪ್ತಿ ಹೊಂದಲಿದೆ. ಮುಂಬಯಿ ಹಾಗೂ ಉಪನಗರಗಳಲ್ಲಿನ ವಿವಿಧ ಭಜನ ಮಂಡಳಿಗಳು ಕಾರ್ಯಕ್ರಮದಲ್ಲಿ ಭಾಗಹಿಸಿವೆ. ಉದ್ಘಾಟನಾ ಸಂದರ್ಭದಲ್ಲಿ  ಶನೀಶ್ವರ ಮಂದಿರದ ಉಪಾಧ್ಯಕ್ಷ ಗೋಪಾಲ್‌ ವೈ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿ. ಕೆ. ಸುವರ್ಣ, ಗೌರವ ಕೋಶಾಧಿಕಾರಿ ವಿಶ್ವನಾಥ್‌ ಕೆ. ಪೂಜಾರಿ, ಜೊತೆ ಕೋಶಾಧಿಕಾರಿ ಕರುಣಾಕರ್‌ ಎಸ್‌. ಆಳ್ವ, ಪೂಜಾ ಕಮಿಟಿಯ ಅಧ್ಯಕ್ಷ ಶೇಖರ ಪಾಲನ್‌,ಉಪಾಧ್ಯಕ್ಷ ಕೃಷ್ಣ ಕೋಟ್ಯಾನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವೀಣಾ ವಿ. ಪೂಜಾರಿ ಹಾಗೂ ಸಮಿತಿಯ ಎನ್‌. ಕೆ. ಪೂಜಾರಿ, ಬಾಲಕೃಷ್ಣ ಶೆಟ್ಟಿ, ಆದ್ಯಪಾಡಿ ಕೃಷ್ಣ ಮೂಲ್ಯ, ಚಂದ್ರಶೇಖರ್‌ ದೇವಾಡಿಗ, ದಯಾನಂದ ಶೆಟ್ಟಿಗಾರ್‌, ದೇವೇಂದ್ರ ಕದಂ, ಸುರೇಶ್‌ ದೇವಾಡಿಗ, ಸುರೇಶ್‌ ಶೆಟ್ಟಿ, ಪಿ.ಡಿ. ಕೋಟ್ಯಾನ್‌, ಯೋಗೇಶ್‌ ಬಂಗೇರ, ಪೂಜಾ ಕಮಿಟಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ದೇವಸ್ಥಾನದ ಪ್ರಧಾನ ಅರ್ಚಕ ಸೂರಜ್‌ ಭಟ್‌ ಅವರು ಆರಂಭದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಮಾಡಿ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.       

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

hunasooru news

ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.