ಪಿಂಪ್ರಿ ಚಿಂಚ್ವಾಡ್‌ ಬಂಟರ ಸಂಘ:ಶೈಕ್ಷಣಿಕ ನಿಧಿ ವಿತರಣೆ, ರಕ್ತದಾನ


Team Udayavani, Jun 26, 2018, 5:21 PM IST

2506mum10.jpg

ಪುಣೆ: ಹಿಂದಿನ ಕಾಲದಲ್ಲಿ ಯಾವುದೇ ಸವಲತ್ತುಗಳಿಲ್ಲದೆ ದೂರದೂರ ಕಾಲ್ನಡಿಗೆಯಲ್ಲಿ ಹೋಗಿ ಕಷ್ಟಪಟ್ಟು ಸಂಪಾದಿಸಿದ ಜೀವನ ಸಂಸ್ಕಾರವನ್ನೊಳಗೊಂಡ ವಿದ್ಯೆ ಮೌಲ್ಯ ಯುತವಾಗಿತ್ತು. ಆದರೆ ಆಧುನಿಕ ಪರಿಸ್ಥಿತಿಯಲ್ಲಿ ವಿದ್ಯೆಯು ವ್ಯಾಪಾರೀಕರಣದತ್ತ ಸಾಗುತ್ತಿದ್ದು, ಮಕ್ಕಳಲ್ಲಿ ಜೀವನ ಮೌಲ್ಯಗಳು ಕಡಿಮೆಯಾಗಿ ದೈಹಿಕ ಚಟುವಟಿಕೆಗಳಿಲ್ಲದೆ, ಪೌಷ್ಟಿಕಾಂಶದ ಕೊರತೆಯ ಆಹಾರ ಕ್ರಮ, ಒತ್ತಡದ ಜೀವನ ಶೈಲಿಯೊಂದಿಗೆ  ಭಾವನೆ ರಹಿತವಾದ ಬೊಂಬೆಗಳಂತಾಗಿ ಕೇವಲ ಅಂಕ ಗಳಿಕೆಯ ಮಾನದಂಡವೇ ಶಿಕ್ಷಣದಲ್ಲಿ ಪ್ರಧಾನವಾಗಿ ವಿಜೃಂಭಿಸುತ್ತಿರುವುದು ವಿಷಾದನೀಯವಾಗಿದೆ ಎಂದು ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಚಿಂಚಾÌಡ್‌ನ‌ ಓಣಿಮಜಲು ಜಗನ್ನಾಥ ಶೆಟ್ಟಿ ಕಿರು ಸಭಾಗೃಹದಲ್ಲಿ ನಡೆದ ಪಿಂಪ್ರಿ ಚಿಂಚಾÌಡ್‌ ಬಂಟರ ಸಂಘದ ವಿದ್ಯಾರ್ಥಿ ಗಳಿಗೆ ಶೈಕ್ಷಣಿಕ ನಿಧಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತ ನಾಡಿ, ಮಕ್ಕಳನ್ನು ಹೆತ್ತವರು ಸಮಾಜದಲ್ಲಿನ  ಪ್ರತಿಷ್ಠೆಗಾಗಿ ಒತ್ತಡವನ್ನು ಹೇರದೆ ಮಕ್ಕಳ ಆಸಕ್ತಿಯ ವಿಷಯಗಳಿಗೆ ಆದ್ಯತೆ ನೀಡಿ ಕ್ರಿಯಾ ಶೀಲರಾಗಿ ಸಂಸ್ಕಾರವಂತರಾಗಿ ಬಾಳುವಂತೆ ಪ್ರೇರೇಪಿಸಬೇಕಾಗಿದೆ. ವಿದ್ಯೆ ಒಂದು ಇಡೀ ಕುಟುಂಬದ ಏಳಿಗೆಗೆ ಕಾರಣವಾಗುತ್ತದೆ. ಇದನ್ನು ಮನಗಂಡು ಸಮಾಜದ ಅಭಿವೃದ್ಧಿಯ ಚಿಂತನೆಯೊಂದಿಗೆ ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘವು ಸಮಾಜದ ಬಡ ಮಕ್ಕಳನ್ನು ಗುರುತಿಸಿ ವಿದ್ಯಾವಂಚಿತರಾಗದೆ ಅವರ ಉಜ್ವಲ ಭವಿಷ್ಯವನ್ನು ಮನಗಂಡು ಶೈಕ್ಷಣಿಕ ನಿ ಧಿಯನ್ನು ನೀಡಿ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನೀಯವಾಗಿದೆ. ಅದೇ ರೀತಿ ಮಕ್ಕಳಿಗೆ ತುಳು ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಕ್ತದಾನ ಶಿಬಿರ, ಮಹಿಳೆಯರಿಗೆ ಆರೋಗ್ಯ ಮಾಹಿತಿ ಶಿಬಿರಗಳನ್ನೂ ಹಮ್ಮಿಕೊಂಡು ಮಾದರಿ ಸಮಾಜ ಸೇವೆಯನ್ನು ಮಾಡುತ್ತಿರುವುದು ಸಂಘದ ಕಾರ್ಯತತ್ಪರತೆಯನ್ನು ಬಿಂಬಿ ಸುತ್ತದೆ. ಮಕ್ಕಳು ವಿದ್ಯಾವಂತರಾಗಿ, ಸಂಸ್ಕಾರ ವಂತರಾಗಿ ತಂದೆ-ತಾಯಂದಿರಿಗೆ, ಗುರು ಹಿರಿಯರಿಗೆ, ನೆರವಾದ ಸಂಘ ಸಂಸ್ಥೆಗಳಿಗೆ ವಿಧೇಯವಾಗಿರಬೇಕಾಗಿದೆ ಎಂದರು.

ಸಂಘದ ಅಧ್ಯಕ್ಷ ಮಹೇಶ್‌ ಹೆಗ್ಡೆ ಕಟ್ಟಿಂಗೇರಿಮನೆ ಮಾತನಾಡಿ, ವಿದ್ಯೆಯೊಂದಿದ್ದರೆ ಜೀವನವನ್ನು ಗೆಲ್ಲಬಹುದಾಗಿದೆ. ಬಡತನವನ್ನು ದೂರೀಕರಿಸಿ ಆತ್ಮವಿಶ್ವಾಸವನ್ನು ತುಂಬುವ ಶಕ್ತಿ ವಿದ್ಯೆಗಿದೆ. ಶಿಕ್ಷಣವೆಂಬುದು ಅಂಕಗಳಿಕೆಯೊಂದೇ  ಉದ್ದೇಶವಾಗಿರದೆ ಜೀವನದಲ್ಲಿ ಸಂಸ್ಕಾರ, ಜ್ಞಾನವನ್ನು ಗಳಿಸುವ ಆಗರವಾಗಬೇಕಾಗಿದೆ. ಕಿಂಚಿತ್‌ ನೆರವು ನೀಡುವ ಮೂಲಕ  ಸಮಾಜದ ಬಡ ಮಕ್ಕಳಿಗೆ ವಿದ್ಯೆಗೆ ಪ್ರೋತ್ಸಾಹ  ತುಂಬುವ ಕಾರ್ಯವನ್ನು ಸಂಘವು ಮಾಡುತ್ತಿದೆ. ಈ ಕಾರ್ಯಕ್ಕೆ ಸಂಘದ ಪದಾಧಿಕಾರಿಗಳು ಹಾಗೂ ಹಲವಾರು ದಾನಿಗಳು ನೆರವಾಗಿದ್ದು ಅವರೆಲ್ಲರಿಗೂ ಚಿರಋಣಿಯಾಗಿದ್ದೇವೆ. ಅದೇ ರೀತಿ ಯುವ ವಿಭಾಗದ ಕಾರ್ಯಾಧ್ಯಕ್ಷ ಅಜಿತ್‌ ಶೆಟ್ಟಿ ನೇತೃತ್ವದಲ್ಲಿ ರಕ್ತದಾನ ಶಿಬಿರ, ಡಾ| ವಿನಯ್‌ ಶೆಟ್ಟಿ ನೇತೃತ್ವದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಮಾಹಿತಿ ಶಿಬಿರಗಳನ್ನು ಆಯೋಜನೆ, ಪರಿಸರ ಸಂರಕ್ಷಣೆಯ ಸಂಕಲ್ಪದೊಂದಿಗೆ ಗಿಡಗಳನ್ನು ನೆಡುವ ಕಾರ್ಯಕ್ರಮ, ಮಕ್ಕಳಿಗೆ ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆಗಳು ಮುಂತಾಗಿ ಒಂದೇ ದಿನದಲ್ಲಿ ಹಲವಾರು ಕಾರ್ಯಕ್ರಮ ಆಯೋಜಿಸಲು ಸಂಘದ ಪದಾಧಿಕಾರಿಗಳೆಲ್ಲರ ಶ್ರಮದಿಂದ ಸಾಧ್ಯವಾಗಿದೆ ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ವಿಜಯ್‌ ಶೆಟ್ಟಿ ಬೋರ್ಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಬಜಗೋಳಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಡಾ| ವಿನಯ್‌ ಶೆಟ್ಟಿ ಕೆಂಜೂರು, ಯುವ ವಿಭಾಗದ ಕಾರ್ಯಾಧ್ಯಕ್ಷ ಅಜಿತ್‌ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತನುಜಾ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್‌ ಶೆಟ್ಟಿ ಪೆರ್ಡೂರು  ಉಪಸ್ಥಿತರಿದ್ದರು.

ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅತಿಥಿಗಳ ಹಸ್ತದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಿಧಿ ವಿತರಿಸಲಾಯಿತು. ಈ ಸಂದರ್ಭ ಹತ್ತು ವರ್ಷದೊಳಗಿನ ಮತ್ತು ಹತ್ತು ವರ್ಷಗಳ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ತುಳು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿಜೇತ ವಿದ್ಯಾರ್ಥಿಗಳ ವರ್ಷದ ಪೂರ್ಣ ಶಾಲಾ ಶುಲ್ಕವನ್ನು ಸಂಘದ ವತಿಯಿಂದ ನೀಡಲಾಯಿತು.

ಬೆಳಗ್ಗೆ ದುರ್ಗಾ ಟೆಕಿx ನಿಗಿx ಇಲ್ಲಿ ಪರಿಸರ ಸಂರಕ್ಷಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ, ಯುವ ವಿಭಾಗದ ವತಿಯಿಂದ ರಕ್ತದಾನ ಶಿಬಿರ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ, ಮಹಿಳಾ ಸದಸ್ಯರಿಗಾಗಿ ಖ್ಯಾತ ಕ್ಯಾನ್ಸರ್‌ ತಜ್ಞರಾದ ಡಾ|  ಜೈಪಾಲ್‌ ರೆಡ್ಡಿಯವರಿಂದ ಕ್ಯಾನ್ಸರ್‌ ರೋಗದ ಬಗ್ಗೆ ಮಾಹಿತಿ ಶಿಬಿರ ಮುಂತಾದ ಕಾರ್ಯಕ್ರಮಗಳು ನಡೆದವು. ಸಂಧ್ಯಾ ವಿ. ಶೆಟ್ಟಿ ಅವರನ್ನು ಸಂಘದ ವತಿಯಿಂದ ಶಾಲು ಹೊದೆಸಿ, ಸ್ಮರಣಿಕೆ ಪುಷ್ಪಗುತ್ಛ ನೀಡಿ ಸತ್ಕರಿಸಲಾಯಿತು.

ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ ಮತ್ತು ಎರ್ಮಾಳ್‌ ಸೀತಾರಾಮ ಶೆಟ್ಟಿ ಮಕ್ಕಳ ಭಾಷಣ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು. ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಂಘದ ಪದಾಧಿಕಾರಿಗಳು, ಯುವ ವಿಭಾಗ, ಮಹಿಳಾ ವಿಭಾಗದ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಶ್ರೀನಿಧಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ| ವಿನಯ್‌ ಶೆಟ್ಟಿ ಸ್ವಾಗತಿಸಿ ಅಜಿತ್‌ ಶೆಟ್ಟಿ ವಂದಿಸಿದರು. ಅಧ್ಯಕ್ಷ ಮಹೇಶ್‌ ಹೆಗ್ಡೆ ಪ್ರಾಯೋಜಕತ್ವದಲ್ಲಿ  ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು. 

ಚಿತ್ರ-ವರದಿ :ಕಿರಣ್‌ ಬಿ. ರೈ ಕರ್ನೂರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.