ಪಿಂಪ್ರಿ ಚಿಂಚ್ವಾಡ್‌  ಬಂಟರ ಸಂಘದ ವಾರ್ಷಿಕ ದಸರಾ ಪೂಜೆ

Team Udayavani, Sep 27, 2017, 4:23 PM IST

25-Mum01b.jpg

ಪುಣೆ: ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘವು ಸಮಾಜ ಬಾಂಧವರನ್ನು ಸಾಂಘಿಕವಾಗಿ ಒಗ್ಗೂಡಿಸಿಕೊಂಡು ದಸರಾದಂತಹ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ನಮ್ಮ ತುಳುಭಾಷೆ, ಸಂಸ್ಕೃತಿ, ಆಚಾರ ವಿಚಾರಗಳ ಉಳಿವಿಗಾಗಿ  ಶ್ರಮಿಸುತ್ತಿರುವುದು ಅಭಿನಂದನೀಯ. ಹಿಂದೆ ಕೂಡು ಕುಟುಂಬದ ಮೂಲಕ ಆದರ್ಶ ಕೌಟುಂಬಿಕ ವ್ಯವಸ್ಥೆಯಲ್ಲಿ  ಕೃಷಿ ಸಂಸ್ಕೃತಿಯೊಂದಿಗೆ  ಬದುಕಿದ್ದ  ನಾವು ಜೀವನೋಪಾಯದ ಉದ್ದೇಶ ದಿಂದ ಹೊರನಾಡನ್ನು ಕರ್ಮ ಭೂಮಿಯನ್ನಾಗಿಸಿ ಕೊಂಡರೂ,  ಇಲ್ಲಿಯೂ ನಮ್ಮದೇ ಆದ ಸಂಘ ಸಂಸ್ಥೆಗಳನ್ನು ಕಟ್ಟಿಕೊಂಡು ನಮ್ಮ ಭಾಷೆ, ಸಂಸ್ಕೃತಿಗಳನ್ನು ಮರೆಯದೆ ಪೋಷಿಸುವ ಕಾರ್ಯ ಮಾಡು ತ್ತಿರುವುದರಿಂದಲೇ ಇಂದಿಗೂ ನಮ್ಮ ತುಳುನಾಡ ಭಾಷೆ, ಸಂಸ್ಕೃತಿ ಉಳಿದಿದ್ದು, ಇಂದು ಸಮಾಜ ಬಾಂಧವರು ಒಂದೇ ಕುಟುಂಬದಂತೆ ಸಂಭ್ರಮಿಸುವಂತಾಗಿದೆ ಎಂದು ಮುಂಬಯಿ ಆಹಾರ್‌ನ ಅಧ್ಯಕ್ಷ  ಆದರ್ಶ್‌ ಶೆಟ್ಟಿ  ಹೇಳಿದರು.

ಸೆ. 23 ರಂದು ನಿಗಿxಯ ಪೂನಾಗೇಟ್‌ ಹೊಟೇಲ್‌ ಸಭಾಂಗಣದಲ್ಲಿ ನಡೆದ ಪಿಂಪ್ರಿ ಚಿಂಚಾÌಡ್‌ ಬಂಟರ ಸಂಘದ ದಸರಾ ಪೂಜೆ ಹಾಗೂ ದಾಂಡಿಯಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ   ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಮ್ಮ ಹೊಟೇಲ್‌ ಉದ್ಯಮಕ್ಕೆ ಎದುರಾದ ದೊಡ್ಡ  ಸಂಕಷ್ಟದಿಂದ ಪಾರಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸುತ್ತಾ ತನ್ನ ಪ್ರಯತ್ನಕ್ಕೆ ಬೆಂಬಲಿಸಿದ ಪಿಂಪ್ರಿ-ಚಿಂಚಾÌಡ್‌ ಹಾಗೂ ಎಲ್ಲ ನಗರಗಳ ಹೊಟೇಲ್‌ ಅಸೋಸಿಯೇಶನ್‌ಗಳ ಅಧ್ಯಕ್ಷರನ್ನು ಅಭಿನಂದಿಸಿದರು. 

ಸಂಘದ ಅಧ್ಯಕ್ಷರಾದ ಕಟ್ಟಿಂಗೇರಿ ಮನೆ ಮಹೇಶ್‌ ಹೆಗ್ಡೆ ಮಾತನಾಡಿ, ದಸರಾ ಮಹೋತ್ಸವದ ಈ ಸಂದರ್ಭದಲ್ಲಿ ಪ್ರಕೃತಿಯ ಆರಾಧನೆಯ ಸಂಕೇತವಾದ ಭತ್ತದ  ತೆನೆಗಳನ್ನು ಆರಾಧಿಸಿ ಶ್ರೀದೇವಿಯ ಆರಾಧನೆಯನ್ನು ಮಾಡುತ್ತಾ, ನಮ್ಮ ನಾಡಿನ ಧಾರ್ಮಿಕ ನಂಬಿಕೆಗಳನ್ನು ಜೀವಂತವಾಗಿಡುವುದರ ಮೂಲಕ ನಮ್ಮ ಮಕ್ಕಳಿಗೂ ನಮ್ಮ ಪಾರಂಪರಿಕ ಪದ್ಧತಿಯನ್ನು ತಿಳಿಸುವ ಉದ್ದೇಶ ನಮ್ಮದಾಗಿದೆ. ಈ ಕಾರ್ಯಕ್ರಮವನ್ನು ನಾವು ಪ್ರತೀ ವರ್ಷ ಹಮ್ಮಿಕೊಳ್ಳುತ್ತಿದ್ದು ಸಮಾಜ ಬಾಂಧವರು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಿರುವುದಕ್ಕೆ ಅಭಿ ಮಾನವೆನಿಸುತ್ತಿದೆ. ಈ ಕಾರ್ಯಕ್ರಮಕ್ಕೆ ತನು, ಮನ, ಧನದ ಸಹಕಾರವನ್ನಿತ್ತು ಸಂಘದ ಎಲ್ಲಾ ಸದಸ್ಯರಿಗೆ ಕೃತಜ್ಞತೆಗಳು ಎಂದರು. ಹೊಟೇಲ್‌ ಉದ್ಯಮಕ್ಕೆ ಸರಕಾರದ ಹೊಸ ತೆರಿಗೆ ಪದ್ಧತಿ ಜಿಎಸ್‌ಟಿ ಹೊರೆಯಾಗಿದ್ದು ತೆರಿಗೆಯ ಶೇಕಡಾವನ್ನು ಕಡಿಮೆಗೊಳಿಸುವಲ್ಲಿ ಪ್ರಯತ್ನಿಸುವಂತೆ ಆಹಾರ್‌ನ ಅಧ್ಯಕ್ಷ ಆದರ್ಶ್‌ ಶೆಟ್ಟಿ ಅವರಿಗೆ ಮನವಿ ಮಾಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ವಿಜಯ್‌  ಶೆಟ್ಟಿ ಬೋರ್ಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಬಜಗೋಳಿ, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಕುರ್ಕಾಲ…, ಶಿಕ್ಷಣ ಮತ್ತು ಸಮಾಜ ಕಲ್ಯಾಣ ವಿಭಾಗದ ಕಾರ್ಯಾಧ್ಯಕ್ಷ  ಡಾ| ವಿನಯ ಶೆಟ್ಟಿ ಕೆಂಜೂರು, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಸುಧಾಕರ ಶೆಟ್ಟಿ ಪೆಲತ್ತೂರು ಮೇಲ್ಮನೆ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್‌ ಶೆಟ್ಟಿ ಪೆರ್ಡೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತನುಜಾ ಎ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಜಿತ್‌  ಶೆಟ್ಟಿ ಮುಂಡ್ಕೂರು ಮೊದಲಾದವರು ಉಪಸ್ಥಿತರಿದ್ದರು.

ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಮಾ ಶೆಟ್ಟಿ, ಸುನೀತಾ ಶೆಟ್ಟಿ, ಸೌಮ್ಯಾ ಶೆಟ್ಟಿ ಪ್ರಾರ್ಥನೆಗೈದರು. 

ನಿಧೀಶ್‌  ಶೆಟ್ಟಿ ನಿಟ್ಟೆ ಅತಿಥಿಗಳನ್ನು ಪರಿಚಯಿಸಿದರು. ಮುಖ್ಯ ಅತಿಥಿಗಳಾದ ಆದರ್ಶ್‌ ಶೆಟ್ಟಿ ಅವರನ್ನು ಸಂಘದ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ,  ಸ್ಮರಣಿಕೆಯನ್ನಿತ್ತು ಸತ್ಕರಿಸಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳನ್ನು ಹಾಗೂ ವಿವಿಧ ಗಣ್ಯರುಗಳನ್ನು ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು.

ಉಪಾಧ್ಯಕ್ಷ ವಿಜಯ್‌  ಶೆಟ್ಟಿ ಬೋರ್ಕಟ್ಟೆ ಸ್ವಾಗತಿಸಿದರು. ವಿಶ್ವನಾಥ್‌ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂತೋಷ್‌ ಶೆಟ್ಟಿ ಪೆರ್ಡೂರು ವಂದಿಸಿದರು. ಮೊದಲಿಗೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಂಘದ ಅಧ್ಯಕ್ಷ ಮಹೇಶ್‌  ಹೆಗ್ಡೆ ಅವರು ಭತ್ತದ ತೆನೆಗಳನ್ನು ಹೊತ್ತು ತಂದು ತುಳಸೀ ಕಟ್ಟೆಯಲ್ಲಿರಿಸಿ ಸಾಂಪ್ರದಾಯಿಕ ರೀತಿಯಿಂದ ಪೂಜಿಸಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತನುಜಾ ಶೆಟ್ಟಿ ಮತ್ತು ಸದಸ್ಯರು ಶ್ರೀದೇವಿಯ ಅಲಂಕೃತ ಮಂಟಪಕ್ಕೆ ಆರತಿ ಬೆಳಗಿ ಪ್ರಾರ್ಥಿಸಿದರು. ಭಜನಾ ವಿಭಾಗದ ಕಾರ್ಯಾಧ್ಯಕ್ಷ  ಶ್ರೀಧರ ಶೆಟ್ಟಿ ಮತ್ತು ಬಳಗದಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಹಿಳೆಯರು, ಪುರುಷರು ಮತ್ತು ಮಕ್ಕಳೆಲ್ಲ ಸೇರಿ ಆಕರ್ಷಕ ದಾಂಡಿಯಾ ಕಾರ್ಯಕ್ರಮದಲ್ಲಿ ಭಾಗವವಹಿಸಿದರು. ಮಧುಕರ್‌ ಭಟ್‌ ಶ್ರೀದೇವಿಯ ಮಂಟಪವನ್ನು ಸುಂದರವಾಗಿ ಅಲಂಕರಿಸಿದರು. ಕಾರ್ಯಕ್ರಮದಲ್ಲಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮ ದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳು, ಪುಣೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಉಪಸ್ಥಿತರಿದ್ದರು. ಸಂಘದ ಕಾರ್ಯ ಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.