ಪುಣೆ ತುಳುಕೂಟದ 21ನೇ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ

Team Udayavani, Aug 7, 2018, 4:16 PM IST

ಪುಣೆ: ಪುಣೆ ತುಳುಕೂಟದ 21 ನೇ ವಾರ್ಷಿಕೋತ್ಸವವು ಆ. 15 ರಂದು ಬಾಣೇರ್‌ನಲ್ಲಿರುವ ಪುಣೆ ಬಂಟರ ಭವನದಲ್ಲಿ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು,  ಈ ಬಗ್ಗೆ ಪೂರ್ವಭಾವಿ ಸಭೆಯು ಆ. 5 ರಂದು ಪುಣೆ ಕನ್ನಡ ಸಂಘದ ಡಾ| ಕಲ್ಮಾಡಿ ಶ್ಯಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ನಡೆಯಿತು.

ಸಭಾಧ್ಯಕ್ಷತೆ ವಹಿಸಿದ್ದ ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು ಸದಸ್ಯರೆಲ್ಲರನ್ನು ಸ್ವಾಗತಿಸಿ ಮಾತನಾಡಿ, 21 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಈ ವರ್ಷ ಬಂಟರ ಭವನದಲ್ಲಿ ನಡೆಯಲಿದ್ದು, ಗಣ್ಯ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಅಂತೆಯೇ ವೈವಿಧ್ಯಮಯವಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.  ಈ ಸಮಾರಂಭವನ್ನು ಯಾವುದೇ ಲೋಪವಿಲ್ಲದೆ ಯಶಸ್ವಿಯಾಗಿ ಸಂಘಟಿಸುವಲ್ಲಿ ಸಂಘದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಪೂರ್ಣ ರೀತಿಯಲ್ಲಿ ಸಹಕಾರ ನೀಡಬೇಕಾಗಿದೆ. ಯಾವುದೇ ಜಾತಿ, ಧರ್ಮ, ಬಡವ ಬಲ್ಲಿದನೆಂಬ ಭೇದವಿಲ್ಲದೆ ಪುಣೆಯಲ್ಲಿರುವ ಸರ್ವ ತುಳುನಾಡ ಬಾಂಧವರೆಲ್ಲರನ್ನು ನಮ್ಮ ತುಳುಭಾಷೆ, ಸಂಸ್ಕೃತಿಯ ತಳಹದಿಯಲ್ಲಿ ಭಾವೈಕ್ಯತೆಯೊಂದಿಗೆ ಒಂದೇ ಛತ್ರದಡಿಯಲ್ಲಿ ಸೇರಿಸುವ ಉದ್ದೇಶವೇ ಪುಣೆ ತುಳುಕೂಟದ ಆಶಯವಾಗಿದ್ದು ಈ ನಿಟ್ಟಿನಲ್ಲಿ ಕಳೆದ ಎರಡು ದಶಕಗಳಿಂದ ತುಳುಕೂಟ ಯಶಸ್ಸನ್ನು ಕಂಡಿದೆ ಎನ್ನಲು ಹರ್ಷವಾಗುತ್ತಿದೆ. ಪುಣೆಯಲ್ಲಿ ಹತ್ತು ಹಲವು ತುಳು-ಕನ್ನಡಿಗರ ಸಂಘ ಸಂಸ್ಥೆಗಳಿದ್ದರೂ ತುಳುಕೂಟ ತನ್ನದೇ ಆದ ಪ್ರತಿಷ್ಠೆಯೊಂದಿಗೆ ಪುಣೆಯಲ್ಲಿ ಮನೆಮಾತಾಗಿದೆ. ಪ್ರತೀವರ್ಷ ಸಂಘದ ವಾರ್ಷಿಕೋತ್ಸವ ಸಂದರ್ಭ ನಿರೀಕ್ಷೆಗೂ ಮೀರಿ ಜನರು ಆಗಮಿಸಿ ಸಂಭ್ರಮಿಸುತ್ತಿರುವುದು ನಮ್ಮ ಸಂಘಟನಾತ್ಮಕ ಬೆಳವಣಿಗೆಗೆ ಶಕ್ತಿ ತುಂಬಿದೆ. ಆದುದರಿಂದ ಅವರೆಲ್ಲರ ನಿರೀಕ್ಷಿತ ರೀತಿಯಲ್ಲಿ ನಮ್ಮ ಕಾರ್ಯಕ್ರಮವನ್ನು ಉತ್ತಮವಾಗಿ ಸಂಘಟಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಎಲ್ಲಾ ಸಮಿತಿಗಳು ಸಕ್ರಿಯರಾಗಿ ತೊಡಗಿಸಿಕೊಂಡು ಅಚ್ಚುಕಟ್ಟಿನ ವ್ಯವಸ್ಥೆಯನ್ನು ಮಾಡುವಲ್ಲಿ ಶ್ರಮಿಸಬೇಕು. ಅದೇ ರೀತಿ ಪ್ರತಿಯೋರ್ವ ತುಳು-ಕನ್ನಡಿಗರಿಗೂ ಆಮಂತ್ರಣವನ್ನು ನೀಡಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರೇರೇಪಿಸಬೇಕಾಗಿದೆ ಎಂದು ನುಡಿದರು.

ಸಂಘದ ಸಲಹಾ ಸಮಿತಿ ಸದಸ್ಯರಾದ ಮದಂಗಲ್ಲು ಆನಂದ ಭಟ್‌ ಮಾತನಾಡಿ, ಹಿರಿಕಿರಿಯರೆಲ್ಲರೂ ಒಗ್ಗಟಾಗಿ ಸೇರಿ ಕಾರ್ಯಕ್ರಮವನ್ನು ಶಿಸ್ತಿನಿಂದ ನೆರವೇರಿಸುವಲ್ಲಿ ಸಹಕಾರ ನೀಡಬೇಕಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚು ಆದ್ಯತೆ ನೀಡಬೇಕಾಗಿದೆ ಎಂದರು.

ಸಂಘದ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಶ್ರೀಧರ ಶೆಟ್ಟಿ ಕಲ್ಲಾಡಿಯವರು ಮಾತನಾಡಿ,  ನಮ್ಮ ವಾರ್ಷಿಕೋತ್ಸವಕ್ಕಾಗಿ ವಿವಿಧ  ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಸಂಘದ ಎÇÉಾ ಸದಸ್ಯರೂ ಸಹಕಾರ ನೀಡಿ ಯಶಸ್ವಿಗೊಳಿಸುವಲ್ಲಿ ಸಹಕರಿಸಿ ಎಂದರು. ಶಿಕ್ಷಣ ಮತ್ತು ಸಾಮಾಜಿಕ ಸಂಮಿತಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಮಾಣಿಬೆಟ್ಟು ಮಾತನಾಡಿ ನಾವೆಲ್ಲರೂ ಕಾರ್ಯಕ್ರಮದ ಯಶಸ್ಸಿಗಾಗಿ ಸಹಕಾರ ನೀಡಬೇಕಾಗಿದೆ. ಪ್ರತಿಯೊಬ್ಬರೂ ಅವರವರ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದರೆ ಕಾರ್ಯಕ್ರಮ ಸುಲಲಿತವಾಗಿ ನಡೆಯುವಲ್ಲಿ ಸಾಧ್ಯವಾಗಲಿದೆ ಎಂದರು.

ಸಂಘದ ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ ಕಾರ್ಯಕ್ರಮದ ಆಯೋಜನೆಗಾಗಿ ಆರ್ಥಿಕ ಕ್ರೋಢೀಕರಣದ ಹಾಗೂ ಪ್ರಾಯೋಜಕರ ಬಗ್ಗೆ ಮಾಹಿತಿಯಿತ್ತರು. ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಪಿ. ಶೆಟ್ಟಿ ಮಾತನಾಡಿ, ಸಂಘದ ಹಿರಿಯರ ಮಾರ್ಗದರ್ಶನದಂತೆ ವಾರ್ಷಿಕೋತ್ಸವವನ್ನು ಉತ್ತಮವಾಗಿ ವ್ಯವಸ್ಥೆಗೊಳಿಸುವಲ್ಲಿ ಯುವ ವಿಭಾಗದ ಸದಸ್ಯರೆಲ್ಲರೂ ಶ್ರಮವಹಿಸಿ ಕೆಲಸ ಮಾಡುತ್ತೇವೆ. ಇದೊಂದು ನಮಗೆ ಸಿಕ್ಕಿದ ಉತ್ತಮ ಅವಕಾಶವೆಂದು ಪರಿಗಣಿಸಿ ಕಾರ್ಯಪ್ರವೃತ್ತರಾಗುತ್ತೇವೆ ಎಂದರು.

ಮಹಿಳಾ ವಿಭಾಗದ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷೆ ಸರಿತಾ ಟಿ. ಶೆಟ್ಟಿ  ಸಂಘದ ಸದಸ್ಯರ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಮಾಹಿತಿಯಿತ್ತರು. ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ  ಸುಜಾತಾ ಡಿ. ಶೆಟ್ಟಿ ಮಹಿಳಾ ವಿಭಾಗದ ಜವಾಬ್ದಾರಿಯ ಬಗ್ಗೆ ತಿಳಿಸಿದರು. ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಮಿಯ್ನಾರ್‌ ರಾಜ್‌ಕುಮಾರ್‌ ಎಂ. ಶೆಟ್ಟಿ, ಉಪಾಧ್ಯಕ್ಷರಾದ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಮತ್ತು ಯುವ ವಿಭಾಗದ ಸದಸ್ಯರು ಉಪಸ್ಥಿತರಿದ್ದರು. ಸಂತೋಷ್‌ ಶೆಟ್ಟಿ ಎಣ್ಣೆಹೊಳೆ ವಂದಿಸಿದರು. 

ಪುಣೆ ತುಳುಕೂಟವು ಯಶಸ್ಸಿನ ಪಥದಲ್ಲಿ ಮುಂದುವರಿಯುತ್ತಾ ತನ್ನ ಉದ್ದೇಶವನ್ನು ಸಾರ್ಥಕಗೊಳಿಸುತ್ತಾ 21 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವುದಕ್ಕೆ ಆನಂದವಾಗುತ್ತಿದೆ. ಈಗಾಗಲೇ ಕಾರ್ಯಕ್ರಮದ ಯಶಸ್ಸಿಗೆ ಸದಸ್ಯರೆಲ್ಲರೂ ಉತ್ಸಾಹದಿಂದ ತೊಡಗಿಕೊಂಡಿದ್ದು ಸಮಾರಂಭವನ್ನು ಶಿಸ್ತುಬದ್ಧಗೊಳಿಸುವಲ್ಲಿ ಶ್ರಮಿಸಬೇಕಾಗಿದೆ. ಕಾರ್ಯಕ್ರಮದಲ್ಲಿ ಪುಣೆಯ ಎಲ್ಲಾ ತುಳುಕನ್ನಡಿಗರು ಆಗಮಿಸುವಂತೆ ಮಾಡಲು ವಿವಿಧೆಡೆಗಳಿಂದ ಬಸ್ಸಿನ ವ್ಯವಸ್ಥೆಯನ್ನು ಮಾಡಬೇಕಾಗಿದೆ. ಅದೇ ರೀತಿ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮವನ್ನು ನಡೆಸುವಲ್ಲಿ ಆದ್ಯತೆಯನ್ನು ನೀಡಬೇಕಾಗಿದೆ. ನಮ್ಮ ಕಾರ್ಯಕ್ರಮದಲ್ಲಿ ಸಾಧ್ಯವಾದಷ್ಟು ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಕಾರ್ಯವನ್ನು ಮಾಡಬೇಕಾಗಿದೆ.
-ಜಯ ಕೆ. ಶೆಟ್ಟಿ, ಸಂಘದ ಸ್ಥಾಪಕಾಧ್ಯಕ್ಷರು, ಪುಣೆ ತುಳುಕೂಟ

ಚಿತ್ರ -ವರದಿ :ಕಿರಣ್‌ ಬಿ. ರೈ ಕರ್ನೂರು

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ