ಧಾರ್ಮಿಕ ಆಚರಣೆಗಳಿಗೂ ಆದ್ಯತೆ: ಸಂತೋಷ್‌ ಶೆಟ್ಟಿ

Team Udayavani, Oct 25, 2020, 8:18 PM IST

Mumbai-tdy-1

ಪುಣೆ, ಅ. 24: ಕೋವಿಡ್ ಮಹಾಮಾರಿ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಂದರ್ಭ ದಿಂದ ಈವರೆಗೆ ಸಮಾಜ ಬಾಂಧವರ ಕಷ್ಟಸುಖಗಳಲ್ಲಿ ಸ್ಪಂದಿ ಸುವ ಕಾರ್ಯ ನಿರಂತರವಾಗಿ   ನಡೆಯುತ್ತಿದೆ. ಲಾಕ್‌ಡೌನ್‌ ಸಂದರ್ಭ ಪ್ರತಿಯೊಬ್ಬರೂ ತಮ್ಮ ಉದ್ಯೋಗ-ವ್ಯವಹಾರಗಳನ್ನು ಮುಚ್ಚಿ ಮನೆಯಲ್ಲಿಯೇ ಇರಬೇಕಾದ ಅನಿ ವಾರ್ಯ ಪರಿಸ್ಥಿತಿಯಲ್ಲಿದ್ದರೂ. ನಮ್ಮ ಸಂಘದ ಮುಖಾಂತರ ಕಷ್ಟದಲ್ಲಿರುವ ಬಂಧು ಗಳನ್ನು ಗುರುತಿಸಿ ಸಾಧ್ಯವಾದಷ್ಟು  ನೆರವನ್ನು ನೀಡಿದ ತೃಪ್ತಿ ನಮಗಿದೆ. ಸಂಘವು ಪ್ರತಿ ವರ್ಷ ಸಮಾಜಬಾಂಧವರನ್ನು ಒಟ್ಟು ಸೇರಿಸಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿ ಸುತ್ತಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ಸರಕಾರದ ನಿಯಮಾವಳಿಯಂತೆ ಈ ವರ್ಷ ಸರಳವಾಗಿ ಪೂಜೆ, ತೆನೆಹಬ್ಬವನ್ನು ಆಚರಿ ಸುತ್ತಿದ್ದೇವೆ. ಸಂಘದ ಸಾಮಾಜಿಕ ಕಾರ್ಯ ಗಳೊಂದಿಗೆ ಧಾರ್ಮಿಕ ನಂಬಿಕೆಗಳನ್ನು ಆಚರಿಸುವುದೂ ಸಂಘದ ಆದ್ಯತೆಯಾಗಿದ್ದು, ಮುಂದಿನ ದಿನಗಳಲ್ಲಿ ಸಂಘದ ಕಾರ್ಯಗಳು ನಿರಾತಂಕವಾಗಿ ಸಾಗಲಿದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು  ತಿಳಿಸಿದರು.

ಅ. 20ರಂದು ಸಂಘದ ಭವನದಲ್ಲಿ ಆರತಿ ಶಶಿಕಿರಣ್‌ ಶೆಟ್ಟಿ ಚಾವಡಿಯಲ್ಲಿ ಸರಳವಾಗಿ ಆಚರಿಸಲ್ಪಟ್ಟ ಸಂಘದ ದಸರಾ ಪೂಜೆ ಹಾಗೂ ತೆನೆಹಬ್ಬದ ಸಂದರ್ಭ  ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ತೀವ್ರವಾಗಿ ಸಂಕಷ್ಟದಲ್ಲಿರುವ ಹೊಟೇಲ್‌ ಉದ್ಯಮ ಚೇತರಿಕೆ ಕಾಣುವಂತಾಗಲಿ. ಎಲ್ಲರಿಗೂ ಆರೋಗ್ಯ, ಸುಖ ಸಮೃದ್ಧಿ ಕರುಣಿಸಲಿ ಎಂದು ಶ್ರೀದೇವಿಯಲ್ಲಿ ಪ್ರಾರ್ಥಿಸೋಣ. ಕೊರೊನಾ ಸೋಂಕನ್ನು ತಡೆಗಟ್ಟುವಲ್ಲಿ ನಾವೆಲ್ಲರೂ ಮುಂಜಾಗರೂಕತೆಯಿಂದ ಸಾಮಾಜಿಕ ಜಾಗೃತಿ ಮೂಡಿಸಿಕೊಂಡು ನಮ್ಮ ಪರಿವಾರವನ್ನು ಸಂರಕ್ಷಿಸುವಲ್ಲಿ ತೊಡಗಿಸಿಕೊಳ್ಳಬೇ ಕಾಗಿದೆ. ಸಂಘದ ಮೂಲಕ ಸಮಾಜಬಾಂ ಧವರ ಮಕ್ಕಳಿಗೆ ಶೈಕ್ಷಣಿಕ ನೆರವನ್ನು ವಿತರಿಸುವ ಕಾರ್ಯವನ್ನು ಶೀಘ್ರದಲ್ಲಿ ಹಮ್ಮಿಕೊಳ್ಳುವ ಯೋಜನೆ ಇದೆ. ಸಮಾಜ ಬಾಂಧವರ ಸಹಕಾರ ಅಗತ್ಯ ಎಂದರು.

ಕೋವಿಡ್ ಜಾಗೃತಿ ಮೂಡಿಸುವ ಸಲುವಾಗಿ ಕೋಲ್ಕತಾದಿಂದ ಪಾದಯಾತ್ರೆ ಮೂಲಕ ಸುಮಾರು 3,200 ಕಿ. ಮೀ. ಕ್ರಮಿಸಿ ಪುಣೆಗೆ ತಲುಪಿದ ಠಾಕುರ್‌ ದಾಸ್‌ ಸಸ್ಮಾಲ್‌ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವೇ| ಮೂ| ಹರೀಶ್‌ ಭಟ್‌ ಧಾರ್ಮಿಕ ಪೂಜೆ ನೆರವೇರಿಸಿದರು. ಸಂತೋಷ್‌ ಶೆಟ್ಟಿ ಹಾಗೂ ದಿವ್ಯಾ ಸಂತೋಷ್‌ ಶೆಟ್ಟಿ ದಂಪತಿ ಪೂಜಾ ವಿಧಿಗಳಲ್ಲಿ ಭಾಗವಹಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್‌. ಶೆಟ್ಟಿ ಹಾಗೂ ಸದಸ್ಯರು ಆರತಿ ಬೆಳಗಿ ದೇವಿಯನ್ನು ಪೂಜಿಸಿ ಪ್ರಾರ್ಥಿಸಿದರು.

ಸಂತೋಷ್‌ ಶೆಟ್ಟಿಯವರು ಭತ್ತದ ತೆನೆಗಳನ್ನು ಹೊತ್ತು ತಂದು ಸಾಂಪ್ರದಾ ಯಿಕವಾಗಿ ತುಳಸಿ ಕಟ್ಟೆಯಲ್ಲಿಟ್ಟು ಪೂಜಿಸಿ ದರು. ಸಂಘದ ಪದಾಧಿಕಾರಿ ವಿಶ್ವನಾಥ ಶೆಟ್ಟಿ ಹಾಗೂ ಸಂಧ್ಯಾ ವಿ. ಶೆಟ್ಟಿಯವರು ಭವನದ ಆವರಣದಲ್ಲಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಹಾರಾರ್ಪಣೆ ಮಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ ಮತ್ತು ಪದಾಧಿಕಾರಿಗಳು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಸತೀಶ್‌ ಶೆಟ್ಟಿ ಮತ್ತು ಸದಸ್ಯರು, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್‌ ಪೂಂಜ ಮತ್ತು ಪದಾಧಿಕಾರಿಗಳು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹೊಸ ಅಕ್ಕಿ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

-ಚಿತ್ರ -ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ನೂತನ ಅಧ್ಯಕ್ಷರಾಗಿ ಎಲ್‌. ವಿ. ಅಮೀನ್‌ ಪದಗ್ರಹಣ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ನೂತನ ಅಧ್ಯಕ್ಷರಾಗಿ ಎಲ್‌. ವಿ. ಅಮೀನ್‌ ಪದಗ್ರಹಣ

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ: ರತ್ನಾಕರ ಜಿ. ಪೂಜಾರಿ

ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ: ರತ್ನಾಕರ ಜಿ. ಪೂಜಾರಿ

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.