ಸಮಾಜ ಬಾಂಧವರ ಯೋಗಕ್ಷೇಮ ಸಂಘದ ಮುಖ್ಯ ಧ್ಯೇಯ: ಚಂದ್ರಹಾಸ್‌ ಶೆಟ್ಟಿ


Team Udayavani, Apr 21, 2021, 11:14 AM IST

programme held at mumbai

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ನವಿಮುಂಬಯಿ ಪ್ರಾದೇಶಿಕ ಸಮಿತಿಯ ವತಿಯಿಂದ ಉಚಿತ ಕೋವಿಡ್‌ ಲಸಿಕೆ ಶಿಬಿರವು ಎ. 15, 16ರಂದು ಅಪೋಲೊ ಆಸ್ಪತ್ರೆಯಲ್ಲಿ ನಡೆಯಿತು.ಈ ಸಂದರ್ಭ ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಮಾತನಾಡಿ, ಬಂಟ ಬಾಂಧವರ ಯೋಗ ಕ್ಷೇಮವೇ ನಮ್ಮ ಮುಖ್ಯ ಧ್ಯೇಯ ಎಂಬ ವಿಚಾರದ ಅಡಿಯಲ್ಲಿ ಆದಷ್ಟು ಮಂದಿಯನ್ನು ಕೋವಿಡ್‌ ಲಸಿಕೆ ಪಡೆಯುವಂತೆ ಪ್ರೇರೇಪಿಸುತ್ತಿದ್ದೇವೆ. ಕೋವಿಡ್‌ನಿಂದಾಗುವ ತೊಂದರೆಗಳ ಕುರಿತು ಜಾಗೃತಿ ಮೂಡಿಸಿ, ಅವರ ಹಾಗೂ ಅವರ ಪರಿವಾರದ ಸದಸ್ಯರ ಜೀವನವನ್ನು ಸುಗಮವಾಗಿಸುವ ನಿಟ್ಟಿನಲ್ಲಿ ಈ ಶಿಬಿರ ಆಯೋಜಿಸಲಾಗಿದೆ.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಬಂಟರ ಸಂಘ ಮುಂಬಯಿ ನವಿಮುಂಬಯಿ ಪ್ರಾದೇಶಿಕ ಸಮಿತಿಯ ವೈದ್ಯಕೀಯ ವಿಭಾಗದ ಕಾರ್ಯಾಧ್ಯಕ್ಷ ಬಾಲೇಶ್‌ ಅರಿಗ ಅವರ ಮುಂದಾಳತ್ವದಲ್ಲಿ ಜರಗಿದ ಶಿಬಿರದಲ್ಲಿ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ, ಸಮನ್ವಯಕ ಜಗದೀಶ್‌ ಶೆಟ್ಟಿ ನಂದಿಕೂರು, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ್‌ ಶೆಟ್ಟಿ ಖಾಂದೇಶ್‌, ಉಪ ಕಾರ್ಯಾಧ್ಯಕ್ಷ ಭಾಸ್ಕರ್‌ ಶೆಟ್ಟಿ, ದಕ್ಷಿಣ್‌, ಕಾರ್ಯದರ್ಶಿ ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ರವೀಶ್‌ ಜಿ. ಶೆಟ್ಟಿ, ಜತೆ ಕಾರ್ಯದರ್ಶಿ ನಾಗೇಶ್‌ ಶೆಟ್ಟಿ ಬೈಕಾಡಿ ಹೆದ್ದಾರಿ ಮನೆ, ಜತೆ ಕೋಶಾಧಿಕಾರಿ ಭಾಸ್ಕರ್‌ ಶೆಟ್ಟಿ ಪದ್ಮ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಮಹಿಳಾ ವಿಭಾಗದ ಸಲಹಾ ಸಮಿತಿಯ ಕಾರ್ಯಾಧ್ಯಕ್ಷೆ ರೂಪಾ ಡಿ. ಶೆಟ್ಟಿ, ಮಹಿಳಾ ಸಮಿತಿಯ ಉಪ ಕಾರ್ಯಾಧ್ಯಕ್ಷೆ ಮಮತಾ ಆರ್‌. ಶೆಟ್ಟಿ, ಕೋಶಾಧಿಕಾರಿ ಗೀತಾ ಎಸ್‌. ಶೆಟ್ಟಿ, ಸದಸ್ಯೆಯರಾದ ಜ್ಯೋತಿ ಎಸ್‌. ಶೆಟ್ಟಿ, ತಾರಾ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ನಿಶ್ಮಿತಾ ಎಸ್‌. ಶೆಟ್ಟಿ, ಯುವ ವಿಭಾಗದ ಸಮನ್ವಯಕರಾದ ಯಾಶಿಕಾ ಡಿ. ಶೆಟ್ಟಿ, ಮಾನಸ್‌ ಶೆಟ್ಟಿ, ಮನೀಶ್‌ ಶೆಟ್ಟಿ, ಹರೀಶ್‌ ಎ. ಶೆಟ್ಟಿ ಪಾಲ್ಗೊಂಡಿದ್ದರು.

ವಿವಿಧ ವಲಯಗಳ ಪ್ರತಿನಿಧಿಗಳಾದ ಸತೀಶ್‌ ಶೆಟ್ಟಿ ಮೂಡುಕೊಟ್ರಪಾಡಿ, ರಾಜೇಶ್ವರಿ ಎಸ್‌. ಶೆಟ್ಟಿ, ಸುರೇಶ್‌ ಶೆಟ್ಟಿ ಸೀತಾನದಿ, ಬಾಲಕೃಷ್ಣ ಶೆಟ್ಟಿ ಸಿಬಿಡಿ, ಚೇತನ್‌ ಶೆಟ್ಟಿ, ಗುರು ಶೆಟ್ಟಿ ಪನ್ವೇಲ್‌, ಅಶೋಕ್‌ ಶೆಟ್ಟಿ ಉರಾಣ್‌, ವೈದ್ಯಕೀಯ ಸಮಿತಿಯ ಉಪಕಾರ್ಯಾಧ್ಯಕ್ಷ ಕೊಲ್ಪೆ ಧನಂಜಯ ಶೆಟ್ಟಿ ಮೊದಲಾದವರು ಸಹಕರಿಸಿದರು.ಕಾರ್ಯಕ್ರಮದಲ್ಲಿ ಸುಮಾರು 192 ಮಂದಿ ಬಂಟ ಬಾಂಧವರು ಕೋವಿಡ್‌ ಲಸಿಕೆ ಹಾಕಿಸಿಕೊಂಡರು.

ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರಾದ ಕೆ. ಡಿ. ಶೆಟ್ಟಿ, ಸಂತೋಷ್‌ ಡಿ. ಶೆಟ್ಟಿ, ಸಂಜೀವ ಎನ್‌. ಶೆಟ್ಟಿ, ಭಾಸ್ಕರ್‌ ಶೆಟ್ಟಿ ತಾಳಿಪಾಡಿಗುತ್ತು, ಸಲಹೆಗಾರರಾದ ಶಿವರಾಮ್‌ ಜಿ. ಶೆಟ್ಟಿ, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ದಯಾನಂದ ಶೆಟ್ಟಿ ಶಿಮಂತೂರು, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದರೇಣುಕಾ ರೈ, ವೀಣಾ ಎ. ಶೆಟ್ಟಿ, ಗುಣವತಿ ವೈ. ಶೆಟ್ಟಿ ಮೊದಲಾದವರುಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರನ್ನು ಅಭಿನಂದಿಸಿ ಗೌರವಿಸಿದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.