ಪುಣೆ ಬಂಟರ ಸಂಘದ ಆಟಿಡೊಂಜಿ ದಿನ ಆಚರಣೆ


Team Udayavani, Aug 9, 2017, 2:37 PM IST

08-Mum03a.jpg

ಪುಣೆ : ನಾವು ಬಂಟರು ತುಳುನಾಡಿನ ಸಾಂಸ್ಕೃತಿಕ ಪರಂಪರೆಯೊಂದಿಗೆ ಬೆಳೆದು ನಮ್ಮ ಗುರುಹಿರಿಯರು ಬಳುವಳಿಯಾಗಿ ನೀಡಿದ ಗುರುಹಿರಿಯರು ಬಳುವಳಿಯಾಗಿ ನೀಡಿದ ಮೌಲಿಕ ಆದರ್ಶಗಳನ್ನು ಪಾಲಿಸಿಕೊಂಡು ಬಂದರಾಗಿದ್ದೇವೆ. ಗತಕಾಲದಲ್ಲಿ ಆಟಿತಿಂಗಳಲ್ಲಿ ನಮ್ಮ ಊರಿನ ಸ್ಥಿತಿಗತಿ ವಿಭಿನ್ನವಾಗಿದ್ದು ಕಷ್ಟದ ದಿನಗಳೊಂದಿಗೆ ಕಳೆದ ನಾವು ಪ್ರಕೃತಿದತ್ತವಾದ ಆಹಾರ ಪದಾರ್ಥಗಳನ್ನು ಸೇವಿಸುತ್ತಾ ವಿವಿಧ ಜಾನಪದ ನಂಬಿಕೆ, ಆಚರಣೆಗಳ ಮೂಲಕ ನಮ್ಮದೇ ಆದ ವಿಶಿಷ್ಟ ಜೀವನ ಕ್ರಮ ನಮ್ಮದಾಗಿತ್ತು. ಅಂದಿನ ಪ್ರತಿಯೊಂದು ಆಚರಣೆಗಳೂ ಅರ್ಥಪೂರ್ಣವಾಗಿತ್ತು. ಅಂತಹ ನಮ್ಮ ಸಂಸ್ಕೃತಿ, ಸಂಸ್ಕಾರಗಳನ್ನು ನೆನಪಿಸುವ ಕಾರ್ಯ ಪುಣೆ ಬಂಟರ ಸಂಘದಿಂದ ಆಗುತ್ತಿರುವುದು ಸ್ತುತ್ಯರ್ಹವಾಗಿದೆ. ನಮ್ಮ ಮಕ್ಕಳಿಗೆ ನಮ್ಮ ಹಿರಿಯರ ಆದರ್ಶಗಳನ್ನು, ಆಚರಣೆಗಳನ್ನು ಪರಿಚಯಿಸುವ ಅಗತ್ಯವಿದ್ದು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ನಾವು ಪ್ರೇರೇಪಿಸಬೇಕಾಗಿದೆ ಎಂದು ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್‌  ಚಂದ್ರ ಶೆಟ್ಟಿ ನುಡಿದರು.

ಆ.  6ರಂದು ಪುಣೆ ಕನ್ನಡ ಸಂಘದ ಡಾ| ಕಲ್ಮಾಡಿ ಶಾಮರಾವ್‌  ಕನ್ನಡ ಮಾಧ್ಯಮ ಹೈಸ್ಕೂಲ… ಸಭಾಂಗಣದಲ್ಲಿ ನಡೆದ ಪುಣೆ ಬಂಟರ ಸಂಘದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತ ರಿದ್ದು ಮಾತನಾಡಿದ ಅವರು, ಇಂದಿನ ಕಾಲ ಘಟ್ಟದಲ್ಲಿ ನಾವು ಎಷ್ಟೇ ಮುಂದುವರಿದರೂ ಮನುಷ್ಯರಾಗಿ ಒಬ್ಬರನ್ನೊಬ್ಬರು ಪರಸ್ಪರ ಅರ್ಥಮಾಡಿಕೊಳ್ಳುವಲ್ಲಿ ಎಡವುತ್ತಿದ್ದು ಇದರಿಂದಾಗಿ ನಮ್ಮ ಸಮಾಜದಲ್ಲಿ ಅನಾಚಾರಗಳು ಹೆಚ್ಚಾಗುತ್ತಿರುವುದು ದುರದೃಷ್ಟಕರವಾಗಿದೆ. ಉತ್ತಮ ಇಚ್ಛಾಶಕ್ತಿ, ಉನ್ನತ ಧ್ಯೇಯ, ಸಾಧಿಸುವ ಗುರಿಯೊಂದಿಗೆ ಉತ್ತಮ ನಾಯಕತ್ವದ ಗುಣಗಳಿಂದಾಗಿಯೇ ಸಂತೋಷ್‌  ಶೆಟ್ಟಿಯವರ ನೇತೃತ್ವದಲ್ಲಿ ಪುಣೆ ಬಂಟರ ಸಂಘದ ಭವನ ತಲೆಯೆತ್ತುತ್ತಿದ್ದು ಹೊಸ ಇತಿಹಾಸ ನಿರ್ಮಿಸಿದಂತಿದೆ ಎಂದರು.

ಸಂಘದ ಗೌರವಾಧ್ಯಕ್ಷ ಜಗನ್ನಾಥ ಬಿ. ಶೆಟ್ಟಿ ಓಣಿಮಜಲು ಮಾತನಾಡಿ, ಇಂದಿನ ದಿನ ಬಹಳ ಮಹತ್ವದ ದಿನವಾಗಿದ್ದು ನಾವೆಲ್ಲಾ ಒಂದೇ ಕುಟುಂಬದಂತೆ ಸಂಭ್ರಮಿಸಿ  ನಮ್ಮ ಆಚರಣೆಗಳನ್ನು ಮರೆಯದೆ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗುವುದಕ್ಕೆ ಅಭಿಮಾನವೆನಿಸುತ್ತಿದೆ. ಇದರಿಂದಾಗಿ ನಮ್ಮ ಪರಂಪರೆ ಉಳಿಯಲು ಸಾಧ್ಯ ಎಂದರು.

ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುಣೆಯಲ್ಲಿರುವ ನಮ್ಮ ಸಮಾಜ ಬಾಂಧವರೆಲ್ಲರೂ ಒಂದೇ ಕುಟುಂಬ
ದಂತೆ ಒಗ್ಗಟ್ಟಿನಿಂದ ಸೇರಿ ನಮ್ಮ ನಾಡಿನ ಸಾಂಸ್ಕೃತಿಕ ಆಚರಣೆಯಲ್ಲಿ ಭಾಗವಹಿಸುವಂತೆ ಮಾಡಿ ನಮ್ಮ ಪ್ರಾಚೀನ ಆದರ್ಶ ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಇಂದಿನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ಸಂಘದ ಮಹಿಳಾ ವಿಭಾಗ ಹಾಗೂ ಸಾಂಸ್ಕೃತಿಕ ವಿಭಾಗದ ಮುತು ವರ್ಜಿಯಿಂದಾಗಿಯೇ ಇಂದು ಇಂಥ ಉತ್ತಮ
ಕಾರ್ಯಕ್ರಮವನ್ನು ಆಯೋಜಿಸಲು ಸಾಧ್ಯವಾಗಿದ್ದು, ಅವರೆಲ್ಲರೂ ಅಭಿನಂದನಾರ್ಹರು. ಸಮಾಜ ಬಾಂಧವರೆಲ್ಲರ ಆಶೀರ್ವಾದದ ನೆರವಿನೊಂದಿಗೆ ಸಂಘದ ಮೈಲುಗಲ್ಲಾದ ಭವನದ ಕಾರ್ಯ ಪೂರ್ಣಗೊಳ್ಳುವ ಹಂತ ದಲ್ಲಿದ್ದು ಲೋಕಾರ್ಪಣೆ  ದಿನಗಣನೆಗೆ ಸಜ್ಜಾಗಿದೆ.ನಿಮ್ಮ ಸಹಕಾರ ನಿರಂತರವಾಗಿರಲಿ  ಎಂದರು.

ಪಿಂಪ್ರಿ -ಚಿಂಚಾÌಡ್‌ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಎರ್ಮಾಳ್‌  ನಾರಾಯಣ ಶೆಟ್ಟಿ ಮಾತನಾಡಿ, ನಮ್ಮ  ತುಳುನಾಡಿನ ಮಣ್ಣಿನ ಸಂಸ್ಕೃತಿಯೊಂದಿಗೆ ಬೆಸೆದುಕೊಂಡು ವಿಭಿನ್ನ ಆಚರಣೆಗಳ ಮೂಲಕ ಪ್ರತಿಯೊಂದು ಕಾಲಕಾಲಕ್ಕನುಗುಣವಾಗಿ ಜೀವನ ಮೌಲ್ಯ ಗಳನ್ನು ಪ್ರತಿಪಾದಿಸುತ್ತಾ ಬಂದವರು. ಅದರಂತೆ ಅಂದಿನ ಆಟಿ ತಿಂಗಳಿನಲ್ಲಿ ಪಡುತ್ತಿದ್ದ ಕಷ್ಟದ ದಿನಗಳು ಬದುಕಿಗೆ ಅರ್ಥವನ್ನು ಕಲ್ಪಿಸುತ್ತಿದ್ದವು. ಅಂತಹ ನಮ್ಮ ಪರಂಪರೆಯನ್ನು ನಮ್ಮ ಮಕ್ಕಳಿಗೆ ತಿಳಿಸುವ ಕಾರ್ಯ ಆಗಬೇಕಾಗಿದೆ. ನಮ್ಮ ಮಕ್ಕಳು ಮಾತಾಪಿತರನ್ನು ವೃದ್ಧಾಶ್ರಮಕ್ಕೆ ಕಳುಹಿಸುವಂತಹ ಮನಃಸ್ಥಿತಿಯನ್ನು ಪರಿವರ್ತಿ ಸಬೇಕಾದ ಸಂಸ್ಕಾರವನ್ನು ನೀಡಬೇಕಾಗಿದೆ  ಎಂದು ಹೇಳಿದರು.

ಹಿರಿಯ ಉದ್ಯಮಿ ರಘುನಾಥ ಎಸ್‌.  ಶೆಟ್ಟಿ ಅವರು ಮಾತನಾಡಿ, ನಮ್ಮ ನಾಡಿನ ಕಟ್ಟುಕಟ್ಟಳೆಗಳನ್ನು ನೆನಪಿಸುವ ಕಾರ್ಯ ಅಭಿನಂದನೀಯವಾಗಿದೆ. ಸಂತೋಷ್‌  ಶೆಟ್ಟಿಯವರ ನಿಸ್ವಾರ್ಥ ಕಾರ್ಯದಿಂದ ಇಂದು ಪುಣೆ ಬಂಟರ ಭವನ ನಿರ್ಮಾಣ ಆಗಿರುವುದು ನಮ್ಮ ಹೆಮ್ಮೆಯಾಗಿದೆ  ಎಂದರು. ಪಡುಬಿದ್ರಿ ಬಂಟರ ಸಂಘದ ಕಾರ್ಯದರ್ಶಿ ಡಾ| ಮನೋಜ್‌ ಶೆಟ್ಟಿ ಮಾತನಾಡಿ, ನಮ್ಮ ನಾಡಿನಲ್ಲಿ ಆಟಿ ತಿಂಗಳಲ್ಲಿ ರೂಢಿಸಿಕೊಂಡಿರುವ ಆಹಾರ ಪದ್ಧತಿಗಳು, ಪ್ರತಿಯೊಂದು ಆಚರಣೆಗಳಿಗೆ ವಿಶೇಷ ಅರ್ಥವಿದೆ. ನಮ್ಮ ಜೀವನ ಸಂಸ್ಕಾರ  ಮಾದರಿಯಾಗಿದ್ದು ಇಂದಿನ ಯಾಂತ್ರೀಕೃತ ಬದುಕಿನಲ್ಲಿ ಟಿವಿ ಮಾಧ್ಯಮಗಳ ದಾಸರಾಗದೆ ಜಾಗೃತರಾಗಬೇಕಿದೆ ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ  ಪ್ರವೀಣ್‌ ಶೆಟ್ಟಿ ಪುತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಮಹಿಳಾ ವಿಭಾಗದ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷೆ ಶಮ್ಮಿ ಅಜಿತ್‌ ಹೆಗ್ಡೆ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌  ಶೆಟ್ಟಿ ಕಳತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂಪಾ ಎಸ್‌. ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ ಬೈಲೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಬಿ. ಶೆಟ್ಟಿ ಉಪಸ್ಥಿತರಿದ್ದರು.
ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯ ಕ್ರಮಕ್ಕೆ ಚಾಲನೆಯಿತ್ತರು. ಸುಲತಾ ಎಸ್‌.  ಶೆಟ್ಟಿ ಮತ್ತು ಸುಮಾ ಶೆಟ್ಟಿ ಪ್ರಾರ್ಥಿಸಿದರು. ಈ ಸಂದರ್ಭ ಅತಿಥಿ-ಗಣ್ಯರನ್ನು ಶಾಲು ಹೊದೆಸಿ, ಪೇಟ ತೊಡಿಸಿ, ಹೂವಿನ ಗಿಡ, ಸ್ಮರಣಿಕೆ, ಪುಷ್ಪಗುತ್ಛಗಳನ್ನು ನೀಡಿ ಸಮ್ಮಾನಿಸಲಾಯಿತು. ಸುಲತಾ ಎಸ್‌. ಶೆಟ್ಟಿ ಕಾರ್ಯಕ್ರಮ ನಿರೂಪಿ ಸಿದರು. ಸಂತೋಷ್‌  ಶೆಟ್ಟಿ ಸ್ವಾಗತಿಸಿದರು. ಅಜಿತ್‌ ಹೆಗ್ಡೆ ವಂದಿಸಿದರು.

ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಮಹಿಳಾ ಸದಸ್ಯರು, ಯುವ ವಿಭಾಗ, ಉತ್ತರ ಹಾಗೂ ದಕ್ಷಿಣ ಪ್ರಾದೇಶಿಕ ಸಮಿತಿ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಉಪಸ್ಥಿತರಿದ್ದರು. ಮನೋರಂಜನೆಯ ಅಂಗವಾಗಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ವತಿಯಿಂದ ಹೆಸರಾಂತ ಕಲಾವಿದರ‌ ಕೂಡುವಿಕೆಯೊಂದಿಗೆ ಕು|  ಕಾವ್ಯಶ್ರೀ ಅಜೇರು ಭಾಗವತಿಕೆಯಲ್ಲಿ ಸ್ವಾಮಿ ಭಕ್ತ  ಮಂಜಣ್ಣೆ  ತುಳು ಯಕ್ಷಗಾನ ಪ್ರದರ್ಶನಗೊಂಡಿತು.  

ಈ ಸಂದರ್ಭ ಪ್ರಾಚೀನ ಸೊಗಡನ್ನು ನೆನಪಿಸಿದ ಆಟಿ ಅಟಿಲ…ನಲ್ಲಿ  ಬಗೆಬಗೆಯ ಖಾದ್ಯಗಳು ಗಮನ ಸೆಳೆದವು. ತಿಮರೆದ ಚಟ್ನಿ, ಎಟ್ಟಿದ ಚಟ್ನಿ, ನುಗ್ಗೆಸೊಪ್ಪು$ ಪಲ್ಯ, ಉಪ್ಪಡಚ್ಚಿರ್‌, ಮೆದಡ್ಡೆ, ಕುಕ್ಕುದ ಚಟ್ನಿ, ಪತ್ರೊಡೆ, ಪುಂಡಿ, ಪದೆಂಗಿ ಸಲಾಯಿ ಪಾಯಸ, ಮೆತ್ತೆದ  ಗಂಜಿ, ಕಂಚೊಲ್‌ ಪಲ್ಯ, ಕೋರಿರೊಟ್ಟಿ, ಗೆಂಡದಡ್ಡೆ, ಕೋರಿ ಸುಕ್ಕ ಮುಂತಾದ ಬಗೆಬಗೆಯ ವ್ಯಂಜನಗಳು ಆಟಿದ ಅಟಿಲ್‌ ರುಚಿಯನ್ನು ಹೆಚ್ಚಿಸಿದ್ದವು.

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.