ಪುಣೆ ಬಂಟರ ಸಂಘ: ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ


Team Udayavani, Aug 23, 2018, 4:06 PM IST

2208mum07a.jpg

ಪುಣೆ: ಬಾರಕೂರು ಮಹಾಸಂಸ್ಥಾನದ ಪರಮಪೂಜ್ಯ ವಿದ್ಯಾವಾಚಸ್ಪತಿ ಸಂತೋಷ್‌ ಗುರೂಜಿಯವರ ಮಾರ್ಗದರ್ಶನದಲ್ಲಿ ಪುಣೆ ಬಂಟರ ಸಂಘದ ಆಶ್ರಯದಲ್ಲಿ ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮತ್ತು ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಸಹಕಾರದೊಂದಿಗೆ ಸೆ. 3 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಭೆಯು ಭವನದ ಮೀಟಿಂಗ್‌ ಹಾಲ್‌ನಲ್ಲಿ ಆ. 19 ರಂದು ನಡೆಯಿತು.

ಈ ಸಭೆಯಲ್ಲಿ ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಮುಂಬಯಿ ಇದರ ಅಧ್ಯಕ್ಷರಾದ ಡಾ| ಸತ್ಯಪ್ರಕಾಶ ಶೆಟ್ಟಿ ಉಪಸ್ಥಿತರಿದ್ದು ಮಾತನಾಡಿ,  ಪುಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಬಂಟರ ಭವನದಲ್ಲಿ   ಶ್ರೀನಿವಾಸ ಕಲ್ಯಾಣೋತ್ಸವ ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ. ಬಹಳ ಹಿಂದಿನಿಂದಲೂ ನಮ್ಮ ನಮ್ಮ ಮನೆಗಳಲ್ಲಿ ವೆಂಕಟರಮಣ ದೇವರನ್ನು ಆರಾಧಿಸಿಕೊಂಡು ಬಂದವರಾಗಿದ್ದು ಇದೊಂದು ಧಾರ್ಮಿಕ ಪ್ರಕ್ರಿಯೆಯಾಗಿದೆ.   ಇಂತಹ ಆಚರಣೆಗಳಿಂದ ನಮ್ಮ ಧಾರ್ಮಿಕ ಪ್ರಜ್ಞೆ ಜಾಗೃತಗೊಳ್ಳುವುದಲ್ಲದೆ ನಮ್ಮ ಸಂಸ್ಕೃತಿಯ ಬೆಳವಣಿಗೆಗೆ ಕಾರಣವಾಗು ತ್ತದೆ. ಮುಖ್ಯವಾಗಿ ನಮ್ಮ ಯುವ ಪೀಳಿಗೆಗೆ ಇಂದಿನ ದಿನಮಾನಗಳಲ್ಲಿ ಧಾರ್ಮಿಕ ಪ್ರಜ್ಞೆಯ ನ್ನು ಮೂಡಿಸುವ ಕಾರ್ಯ ಆಗಬೇಕಾಗಿದೆ. ಶ್ರದ್ಧಾ ಭಕ್ತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದರೆ ನಮಗೆ ದೈವಾನುಗ್ರಹ ಸಿಗುವುದರಲ್ಲಿ ಅನುಮಾನವಿಲ್ಲ. ಆದುದರಿಂದ ಕಾರ್ಯಕ್ರಮವನ್ನು ಉತ್ತಮವಾಗಿ ಸಂಯೋ ಜಿಸಬೇಕಾಗಿದೆ. ನಾವು ಬಂಟರು ಮೂಲತಃ ಗುರು ಪರಂಪರೆಯಿಂದ ಬಂದಿಲ್ಲ ವಾದರೂ ನಮ್ಮ ಹಿರಿಯರು ನಮಗೆ ಮಾರ್ಗ ದರ್ಶನ ಮಾಡುತ್ತಿದ್ದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಗುರುಗಳ ಮಾರ್ಗದರ್ಶನ  ನಮಗೆ ಹಾಗೂ ಯುವ ಪೀಳಿಗೆಗೆ ಅಗತ್ಯವಾಗಿದ್ದು ಈ ಸಮಾಜಕ್ಕೆ ಒಳಿತನ್ನು ಮಾಡುವ ಜ್ಞಾನ ಭಂಡಾರವನ್ನು ಹೊಂದಿದ್ದ ಯಾವುದೇ ಗುರುಗಳನ್ನು ಯಾವುದೇ ಭೇದ-ಭಾವವನ್ನು ಮಾಡದೆ  ಮಾರ್ಗ ದರ್ಶಕರಾಗಿ ಸ್ವೀಕರಿಸಬಹುದಾಗಿದೆ. ನಮ್ಮ ಧರ್ಮ, ಜಾತಿ ಹಾಗೂ ಭಾಷೆಗಳಲ್ಲಿ ಅಭಿಮಾನ ಬೆಳೆಸಿಕೊಂಡು ಋಣಸಂದಾಯ ಮಾಡುವ ಸಾಮಾಜಿಕ ಜವಾಬ್ದಾರಿ ನಮ್ಮಲ್ಲಿದೆ ಎಂದರು.

ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾ ಧ್ಯಕ್ಷ ಚಂದ್ರಶೇಖರ ಶೆಟ್ಟಿ ನಿಟ್ಟೆ ಮಾತನಾಡಿ, ಪುಣೆಯಲ್ಲಿ ಪ್ರಪ್ರಥಮ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜನೆಗೊಳ್ಳುತ್ತಿದ್ದು ಪುಣ್ಯದ ಕಾರ್ಯವೆಂದು  ಭಾವಿಸುತ್ತೇನೆ. ಆಧ್ಯಾ ತ್ಮಿಕ, ಧಾರ್ಮಿಕ ಕಾರ್ಯಕ್ರಮ ಇದಾಗಿದ್ದು ನಾವೆಲ್ಲರೂ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸೋಣ ಎಂದರು.

ಬಂಟ್ಸ್‌  ಅಸೋಸಿಯೇಶನ್‌ ಪುಣೆ ಇದರ ಉಪಾಧ್ಯಕ್ಷ ಆನಂದ್‌ ಶೆಟ್ಟಿ ಮಿಯ್ನಾರು  ಮಾತನಾಡಿ,  ಪುಣೆಯಲ್ಲಿ ಎಲ್ಲರನ್ನೂ ಸೇರಿಸಿಕೊಂಡು ಧಾರ್ಮಿಕ ಕಾರ್ಯವಾದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯುವುದು ಸಂತಸದ ವಿಚಾರವಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ನಮ್ಮ ಪೂರ್ಣರೀತಿಯ ಸಹಕಾರವಿದೆ ಎಂದರು.
ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ ಮಾತನಾಡಿ,  ನಮ್ಮಲ್ಲಿ ಧರ್ಮ ಜಾಗೃತಿಯ ಶ್ರೀನಿವಾಸ ಕಲ್ಯಾಣೋತ್ಸವ ನಡೆಯುತ್ತಿರುವುದು ನಮ್ಮ ಸೌಭಾಗ್ಯವಾಗಿದೆ. ಭಕ್ತಿಪೂರ್ವಕವಾಗಿ ನಾವೆಲ್ಲರೂ ಸಹಕಾರ ನೀಡುತ್ತೇವೆ ಎಂದರು.

ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಉಪಾಧ್ಯಕ್ಷ ಮಾಧವ ಆರ್‌. ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿ  ಶೇಖರ್‌ ಸಿ. ಶೆಟ್ಟಿ ಮತ್ತಿತರರು ಮಾತನಾಡಿ ಸಹಕಾರ ನೀಡುತ್ತೇವೆ  ಎಂದರು.

ಸಭೆಯಲ್ಲಿ ಕಾರ್ಯಕ್ರಮದ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು. ಡಾ | ಸತ್ಯಪ್ರಕಾಶ್‌ ಶೆಟ್ಟಿ ಹಾಗೂ ಭಾಸ್ಕರ ಶೆಟ್ಟಿ ಥಾಣೆ ಇವರುಗಳನ್ನು ಸಂಘದ ವತಿಯಿಂದ ಪುಷ್ಪಗುತ್ಛ ನೀಡಿ ಸತ್ಕರಿಸಲಾಯಿತು. ಸಭೆಯಲ್ಲಿ ಪುಣೆ ಬಂಟರ ಸಂಘದ ಪದಾಧಿಕಾರಿಗಳಾದ ಸತೀಶ್‌ ಶೆಟ್ಟಿ, ವಿವೇಕಾನಂದ ಶೆಟ್ಟಿ ಆವರ್ಸೆ, ಪ್ರಶಾಂತ್‌ ಎ.  ಶೆಟ್ಟಿ, ಪ್ರಶಾಂತ್‌ ಶೆಟ್ಟಿ ಹೆರ್ಡೆಬೀಡು, ಸುಜಿತ್‌ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಪದಾಧಿಕಾರಿಗಳಾದ ಗಣೇಶ್‌ ಪೂಂಜಾ, ಹರೀಶ್‌ ಶೆಟ್ಟಿ, ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಬಜಗೋಳಿ, ನಿತಿನ್‌ ಶೆಟ್ಟಿ ನಿಟ್ಟೆ, ಬಂಟ್ಸ್‌  ಅಸೋಸಿಯೇಶನ್‌ ಉಪಾಧ್ಯಕ್ಷ ಆನಂದ್‌ ಶೆಟ್ಟಿ, ಜತೆ ಕಾರ್ಯದರ್ಶಿ ದಿನೇಶ್‌ ಶೆಟ್ಟಿ, ಪಿನ್‌ ಬಂಟರ ಸಂಘದ ಮಹಿಳಾ ವಿಭಾಗದ ಸುಲತಾ ಎಸ್‌. ಶೆಟ್ಟಿ, ವಿನಯಾ ಶೆಟ್ಟಿ, ದಿವ್ಯಾ ಎಸ್‌. ಶೆಟ್ಟಿ, ನಯನಾ ಜೆ. ಶೆಟ್ಟಿ ಉಪಸ್ಥಿತರಿದ್ದರು. 

ನಮ್ಮ ಸಾಂಸ್ಕೃತಿಕ ಸಮಿತಿಯ ನೇತೃತ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದ್ದು ಇದರ ಪೂರ್ಣ ಜವಾಬ್ದಾರಿಯನ್ನು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ವಹಿಸಿಕೊಂಡಿದ್ದು, ನಮ್ಮ ಸಂಘದೊಂದಿಗೆ ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘ ಹಾಗೂ ಬಂಟ್ಸ್‌ ಅಸೋಸಿಯೇಶನ್‌ ಪುಣೆ ಸಹಕಾರ ನೀಡಲಿದೆ. ನಮ್ಮಲ್ಲಿ ಯಾವುದೇ ಜಾತಿ, ಸಂಘ ಸಂಸ್ಥೆಗಳೊಂದಿಗೆ ಭೇದಭಾವವಿಲ್ಲ. ಇದೊಂದು ಧಾರ್ಮಿಕ ಕಾರ್ಯಕ್ರಮ ವಾಗಿದ್ದು. ಎಲ್ಲಾ  ಸಂಘ ಸಂಸ್ಥೆಗಳೂ ಸೇರಿದಂತೆ ನಮ್ಮ ಸಂಘದ ಕಾರ್ಯಕಾರಿ ಸಮಿತಿ, ಯುವ ವಿಭಾಗ, ಮಹಿಳಾ ವಿಭಾಗ ಎಲ್ಲರೂ ಸಹಕಾರ ನೀಡಬೇಕು.
  -ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು  
ಅಧ್ಯಕ್ಷರು : ಪುಣೆ ಬಂಟರ ಸಂಘ

ಇದೊಂದು ಧಾರ್ಮಿಕ ಕಾರ್ಯಕ್ರಮವಾಗಿದ್ದು ಜೀವನದಲ್ಲಿ  ಧಾರ್ಮಿಕ ಪ್ರಜ್ಞೆ, ಸಂಸ್ಕೃತಿಯ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಪೂರಕವಾಗಿದೆ.  ನಮ್ಮ ಸಮಿತಿ ಈ ಕಾರ್ಯಕ್ರಮದ ಪೂರ್ತಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ಆಯೋಜಿಸುತ್ತೇವೆ.   ಉತ್ತಮ ಜ್ಞಾನವನ್ನು ನೀಡುವ ಎಲ್ಲಾ ಗುರುಗಳಿಂದ ಉತ್ತಮ ವಿಚಾರಗಳನ್ನು ಕಲಿಯಲು ಸಾಧ್ಯವಿದೆ ಆದುದರಿಂದ ಎಲ್ಲಾ ಗುರುಗಳು ನಮಗೆ ಸಮಾನರು
– ಪ್ರವೀಣ್‌ ಶೆಟ್ಟಿ ಪುತ್ತೂರು 
ಕಾರ್ಯಾಧ್ಯಕ್ಷರು : ಸಾಂಸ್ಕೃತಿಕ ಸಮಿತಿ ಪುಣೆ ಬಂಟರ ಸಂಘ

ಚಿತ್ರ-ವರದಿ : ಕಿರಣ್‌ ಬಿ ರೈ ಕರ್ನೂರು

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

“ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು?’

Desi Swara: ಹೊನ್ನುಡಿ- ಕೊಟ್ಟಿದ್ದೇ ಸಿಗುವುದು !

Desi Swara:  ಸಾಮಾಜಿಕ ಮಾಧ್ಯಮ ಹಾಗೂ ವಿಭಿನ್ನ ವರ್ತನೆಗಳು

Desi Swara:  ಸಾಮಾಜಿಕ ಮಾಧ್ಯಮ ಹಾಗೂ ವಿಭಿನ್ನ ವರ್ತನೆಗಳು

Desi Swara: ಶಿಷ್ಯನಿಂದ ಪರಾಭವವನ್ನಿಚ್ಛಿಸುವ ಗುರು

Desi Swara: ಶಿಷ್ಯನಿಂದ ಪರಾಭವವನ್ನಿಚ್ಛಿಸುವ ಗುರು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.