ಪುಣೆ ಕನ್ನಡ ಸಂಘ, ಪುರಂದರದಾಸ ಗಾಯನ ಸ್ಪರ್ಧೆ

Team Udayavani, Feb 15, 2019, 4:14 PM IST

1402mum16.jpg

ಪುಣೆ: ಪುಣೆ ಕನ್ನಡ ಸಂಘದ ವತಿಯಿಂದ  ವಾರ್ಷಿಕ ಪುರಂದರದಾಸ ಗೀತೆಗಳ ಗಾಯನ ಸ್ಪರ್ಧೆಯನ್ನು  ಸಂಘದ ಡಾ|  ಕಲ್ಮಾಡಿ ಶ್ಯಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ಫೆ.  9ರಂದು ಆಯೋಜಿಸಲಾಯಿತು.

ಹಿರಿಯರ ವಿಭಾಗ, ಯುವ ವಿಭಾಗ ಹಾಗೂ ಚಿಣ್ಣರಿಗಾಗಿ ಪ್ರತ್ಯೇಕ   ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ಕನಕದಾಸ, ಪುರಂದರದಾಸ ಮತ್ತು ವಿಜಯದಾಸರ ಹಾಡುಗಳನ್ನು ಹಾಡುವ ಅವಕಾಶ ಕಲ್ಪಿಸಲಾಯಿತು.  ಒಟ್ಟು 30ಕ್ಕೂ ಹೆಚ್ಚು ಸ್ಪರ್ಧಾಳುಗಳು  ಭಾಗವಹಿಸಿದರು.

5 ವರ್ಷದ ಮಕ್ಕಳಿಂದ  ಹಿಡಿದು 75 ವರ್ಷದ ಹಿರಿಯ  ನಾಗರಿಕರು ಭಾಗವಹಿಸಿ ಪ್ರೇಕ್ಷಕರಿಂದ ಉತ್ತಮ ಪ್ರಶಂಸೆ ಪಡೆದರು. ಪ್ರಾರಂಭದಲ್ಲಿ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌, ಕಾರ್ಯದರ್ಶಿ  ಮಾಲತಿ ಕಲ್ಮಾಡಿ ಹಾಗೂ ಜೊತೆ ಕೋಶಾಧಿಕಾರಿ ರಾಧಿಕಾ ಶರ್ಮ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಸದಸ್ಯರೂ  ಉತ್ತಮವಾದ ಗಾಯನದೊಂದಿಗೆ ಗಮನ  ಸೆಳೆದರು.

ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌ ಮಾತನಾಡಿ, ಮನೆ ಮನೆಯಲ್ಲಿ ಎಲ್ಲರ ಮನಗಳಲ್ಲಿ ಭಕ್ತಿಭಾವವನ್ನು ಮೂಡಿಸಲು ದಾಸ ಸಾಹಿತ್ಯ ಸಹಕಾರಿಯಗಿದ್ದು ನಿತ್ಯ ಈ ಹಾಡುಗಳನ್ನು ಹಾಡಿ ಮಾನಸಿಕ ಶಾಂತಿ ಪಡೆಯಬಹುದು. ಪುರಂದರದಾಸರ ಹಾಡುಗಳು ಪುರಂದರ ವಿಠಲನನ್ನು ಸ್ಮರಿಸಿದಾಗ ಕರ್ನಾಟಕ ಮತ್ತು ಮಹಾರಾಷ್ಟ್ರದ ನಿಕಟ ಬಾಂಧವ್ಯವನ್ನು ವ್ಯಕ್ತಪಡಿಸುವುದೆಂದು ತಿಳಿಸಿದರು.

ಸ್ಪರ್ಧೆಗಳಲ್ಲಿ  ವಿಜೇತರಾದ ವಿನೀತ ಆಚಾರ್ಯ  ಪ್ರಜಕ್ತ ದೇವರ್ದ  ದಿವ್ಯ ಶ್ರೀಕಾಂತ, ಹೇಮಾ ಕುಲಕರ್ಣಿ, ಕು| ದರ್ಶನ ಸುರೇಶ, ಕು| ಸಾಕ್ಷಿ ಜಾಧವ್‌, ಕು| ಸಮೃದ್ಧಿ, ಕು| ಜಾಹ್ನವಿ ಇವರುಗಳನ್ನು ಇಂದಿರಾ ಸಾಲಿಯಾನ್‌, ಮಾಲತಿ ಕಲ್ಮಾಡಿ ಮತ್ತು ರಾಮದಾಸ್‌ ಆಚಾರ್ಯ ಬಹುಮಾನಗಳನ್ನು ನೀಡಿ ಗೌರವಿಸಿದರು. 

ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಪ್ರಾಧ್ಯಾಪಕಿ  ಜ್ಯೋತಿ ಕಡಕೊಳ್‌ ಕಾರ್ಯಕ್ರಮವನ್ನು ನಿರೂಪಿಸಿದರು.  ಡಾ|  ರಾಜಶ್ರೀ ಮಹಾಜನ್‌ ಹಾಗೂ  ಸುಧಾ ಆಚಾರ್ಯ ನಿರ್ಣಾಯಕರಾಗಿ ಸಹಕರಿಸಿದರು.

ಸ್ಪರ್ಧೆಯ ನಂತರ ಸಂಗೀತ ಶಿಕ್ಷಣ ಡಾ| ರಾಜಶ್ರೀ ಮಹಾಜನ್‌ ಅವರು  ತಮ್ಮ ಸುಮಧುರ ಕಂಠದಲ್ಲಿ  ಇಂದಿರಾ ಸಾಲಿಯಾನ್‌ ಸೂಚಿಸಿದ ಮತ್ತು ಕೆಲವು ಪ್ರಮುಖ ಪುರಂದರದಾಸರ ಹಾಡುಗಳನ್ನು ಅಚ್ಚ ಕನ್ನಡದಲ್ಲಿ ಹಾಡಿ ಎಲ್ಲರನ್ನೂ ಮಂತ್ರಮುಗ್ಧಗೊಳಿಸಿದರು. ಕನ್ನಡ ಮಾಧ್ಯಮ ಹೈಸ್ಕೂಲ್‌ ಮುಖ್ಯೋಪಾಧ್ಯಾಯರಾದ ಚಂದ್ರಕಾಂತ ಹಾರಕೂಡೆ ವಂದಿಸಿದರು. ಸಂಗೀತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.                

ಚಿತ್ರ -ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.