Udayavni Special

ಶನೀಶ್ವರ ಸೇವಾ ಚಾರಿಟೇಬಲ್‌ ಟ್ರಸ್ಟ್‌:ನಾಗ‌ ಪ್ರತಿಷ್ಠಾಪನೋತ್ಸವ


Team Udayavani, Feb 10, 2019, 5:59 PM IST

0902mum07a.jpg

ಮುಂಬಯಿ: ಮೀರಾರೋಡ್‌ ಶ್ರೀ ಶನೀಶ್ವರ ಸೇವಾ ಚಾರಿಟೇಬಲ್‌ ಟ್ರಸ್ಟ್‌ ಇದರ ಪ್ರಥಮ ವಾರ್ಷಿಕ ಶ್ರೀ ನಾಗದೇವರ ಪ್ರತಿಷ್ಠಾಪನಾ ಉತ್ಸವವು ಮೀರಾರೋಡ್‌ ಪೂರ್ವದ ಪ್ಲೆಸೆಂಟ್‌ ಪಾರ್ಕಿನ ಮೀರಾಧಾಮ ಸೊಸೈಟಿಯಲ್ಲಿರುವ ಶ್ರೀ ಶನಿದೇವರ ಮಂದಿರದ ಆವರಣದಲ್ಲಿ ಫೆ. 7 ರಂದು ವಿಷ್ಣುಮೂರ್ತಿ ಅಡಿಗ ಅವರ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನೆರವೇರಿತು.

ಧಾರ್ಮಿಕ ಕಾರ್ಯಕ್ರಮವಾಗಿ ತನು ತಂಬಿಲ, ನವಕ ಕಲಶ, ಪಂಚಾಮೃತ ಅಭಿಷೇಕ, ಸಾಮೂಹಿಕ ಆಶ್ಲೇಷ ಬಲಿ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನೆರವೇರಿತು. ಮಧ್ಯಾಹ್ನ ನಾರಾಯಣ ಭಟ್‌ ರೆಂಜಾಳ ಅವರಿಂದ ಶ್ರೀ ನಾಗದೇವರ ದರ್ಶನ ನೆರವೇರಿತು.

ಶ್ರೀ ಶನೀಶ್ವರ ಸೇವಾ ಚಾರಿಟೇಬಲ್‌ ಟ್ರಸ್ಟ್‌ನ ಗೌರವ ಕಾರ್ಯದರ್ಶಿ ಪುರಂದರ ಶ್ರೀಯಾನ್‌ ಅವರು ಶ್ರೀ ಕ್ಷೇತ್ರದ ಬಗ್ಗೆ ಮಾಹಿತಿ ನೀಡಿ, ದಿವಂಗತ ಅಶೋಕ್‌ ಕರ್ಕೇರ ಅವರ ಮುಂದಾಳತ್ವದಲ್ಲಿ ಶ್ರೀ ಶನಿದೇವರ ಮೂರ್ತಿಯೊಂದಿಗೆ ಸ್ಥಾಪಿಸಿದ ಶನಿಮಂದಿರದಲ್ಲಿ ಒಂದು ವರ್ಷದ ಹಿಂದೆ ಶ್ರೀ ನಾಗದೇವರ ಮೂರ್ತಿಯನ್ನು ಪ್ರತಿಷ್ಠೆ ಮಾಡಲಾಯಿತು. ಪ್ರತೀ ತಿಂಗಳ ಪಂಚಮಿಯಂದು ತನು ತಂಬಿಲ, ಪಂಚಾಮೃತ ಅಭಿಷೇಕ, ನಾಗರ ಪಂಚಮಿ, ಷಷ್ಠಿ ಉತ್ಸವ ಇನ್ನಿತರ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಲಾಗುತ್ತಿದೆ. ಪ್ರತೀ ಶನಿವಾರ ಗ್ರಂಥ ಪಾರಾಯಣ, ಪ್ರತೀ ತಿಂಗಳ ಕೊನೆಯಲ್ಲಿ ಅನ್ನಸಂತರ್ಪಣೆಯೊಂದಿಗೆ ವಿಶೇಷ ಪೂಜೆ, ಶನಿಜಯಂತಿ, ಆಷಾಡ ಮಾಸ ಶನಿಪೂಜೆ, ಪರಿವಾರ ದೇವರಾದ ಶ್ರೀ ಗಣಪತಿಗೆ ಚತುರ್ಥಿಯಂದು ವಿಶೇಷ ಪೂಜೆ, ಶ್ರೀ ಆಂಜನೇಯ ಆರಾಧನೆ, ಅರಸಿನ ಕುಂಕುಮ, ಉಚಿತ ಯಕ್ಷಗಾನ ತರಬೇತಿ ನೀಡಲಾಗುತ್ತಿದೆ ಎಂದರು.

ಕಾರ್ಯಕಾರಿ ಸಮಿತಿಯ ಗೌರವಾಧ್ಯಕ್ಷ ವಿನೋದ್‌ ವಘಾಸಿಯಾ, ಅಧ್ಯಕ್ಷೆ ವಿದ್ಯಾ ಅಶೋಕ್‌ ಕರ್ಕೇರ, ಉಪಾಧ್ಯಕ್ಷರುಗಳಾದ ಸಂಪತ್‌ ಶೆಟ್ಟಿ, ಗುಣಕಾಂತ್‌ ಶೆಟ್ಟಿ ಕರ್ಜೆ, ಜತೆ ಕಾರ್ಯದರ್ಶಿಗಳಾದ ಲೋಹಿತಾಕ್ಷ ಕೆ. ಬಂಗೇರ, ಸುಜಾತಾ ಜಿ. ಶೆಟ್ಟಿ, ಕೋಶಾಧಿಕಾರಿ ಅಚ್ಚುತ ಕೋಟ್ಯಾನ್‌, ಜಯಕರ ಎಸ್‌. ಶೆಟ್ಟಿ, ಭಾರತಿ ಅಂಚನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಲ್ಲಿಕಾ ಕೆ. ಶೆಟ್ಟಿ, ಕಾರ್ಯದರ್ಶಿ ಲೀಲಾ ಡಿ. ಪೂಜಾರಿ, ಪೂಜಾ ಮತ್ತು ಸಾಂಸ್ಕೃತಿಕ ಸಮಿತಿಯ ಸದಸ್ಯರು, ಸಲಹೆಗಾರರು, ಸರ್ವ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಸಹಕರಿಸಿದರು.

ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ರಾಜಕೀಯ ನೇತಾರರು, ತುಳು-ಕನ್ನಡಿಗರು, ಕನ್ನಡೇತರರರು ಉಪಸ್ಥಿತರಿದ್ದು ಶ್ರೀ ನಾಗದೇವರ ಮತ್ತು ಶ್ರೀ ಶನಿದೇವರ ದರ್ಶನ ಪಡೆದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

Untitled-1

ನವರಾತ್ರಿ ಪ್ರಯುಕ್ತ ಡೊಂಬಿವಲಿಯಲ್ಲಿ  ಸೀರೆಗಳ ವಿಶೇಷ ಪ್ರದರ್ಶನ, ಮಾರಾಟ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gujgutyuyt

ಮೂವರು ಅಂತಾರಾಜ್ಯ ಸುಲಿಗೆಕೋರರ ಬಂಧನ  

hgyyuyuy

ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ghghtyut

ರೈತರಿಗೆ ಗೌರವ ಕೊಡುವ ಕಾರ್ಯವಾಗಲಿ  : ಸಚಿವ ಶಿವರಾಮ ಹೆಬ್ಬಾರ

chfghtf

ಅನ್ನದಾನೇಶ್ವರ ಮಠದ ಪಟ್ಟಾಧಿಕಾರ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.