ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರಕ್ಕೆ ಶ್ರೀ ಸುಬುಧೇಂದ್ರತೀರ್ಥ ಶ್ರೀ 


Team Udayavani, Mar 24, 2017, 4:13 PM IST

12.jpg

ಮುಂಬಯಿ: ಭಕ್ತರಿಂದ ದೇವರೇಂದೆ ಪೂಜಿಸಲ್ಪಡುವ ಶ್ರೀ ರಾಘವೇಂದ್ರ ಸ್ವಾಮಿಗಳು ಸುಮಾರು 346 ವರ್ಷಗಳ ಹಿಂದೆ ಮಂತ್ರಾಲಯ ಕ್ಷೇತ್ರದಲ್ಲಿ ವೃಂದಾವನಸ್ಥರಾಗಿ ಇಂದಿಗೂ ಸದಾ ಭಕ್ತರನ್ನು ಹರಸುತ್ತಿರುವ ಕಾರಣಿಕ ಪುರುಷರು. ಅಂತಹ ಜಗದ್ಗುರು ಶ್ರೀಮಾನ್‌ ಮಧ್ವಾಚಾರ್ಯ ಮೂಲ ಸಂಸ್ಥಾನಂ ಶ್ರೀ ರಾಘವೇಂದ್ರ ಮಠದ ಪ್ರಸಕ್ತ ಪೀಠಾಧೀಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಮಾ. 23ರಂದು ಘನ್ಸೋಲಿಯ ಶ್ರೀ ಕ್ಷೇತ್ರ ಮೂಕಾಂಬಿಕಾ ಮಂದಿರಕ್ಕೆ ಭೇಟಿ ನೀಡಿ ಆಶೀರ್ವಚನ ನೀಡಿ ಹರಸಿದರು.

ಧಾರ್ಮಿಕ ಕಾರ್ಯಕ್ರಮವಾಗಿ ಪೂರ್ವಾಹ್ನ 10 ಕ್ಕೆ  ಸ್ವಾಮೀಜಿ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ಸ್ವಾಮೀಜಿಯಿಂದ ಶ್ರೀಮಾನ್‌ ಮೂಲ ರಾಮದೇವರ ಸಂಸ್ಥಾನ ಪೂಜೆ, ಮಧ್ಯಾಹ್ನ 12 ರಿಂದ ಶ್ರೀಗಳಿಂದ ಭಕ್ತಾದಿಗಳಿಗೆ ಫಲಮಂತ್ರಾಕ್ಷತೆ ನೀಡಿ ಆಶೀರ್ವಚನ, ಮಧ್ಯಾಹ್ನ  ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಶ್ರೀಗಳನ್ನು ದೇವಸ್ಥಾನದ ಆಡಳಿತ ಸಮಿತಿಯ ವತಿಯಿಂದ ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು. ಮಂದಿರದ ಉಪಾಧ್ಯಕ್ಷರುಗಳಾದ  ಜಗದೀಶ್‌ ಶೆಟ್ಟಿ ನಂದಿಕೂರು ಮತ್ತು ಕೆ. ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಗೌರವ ಕೋಶಾಧಿಕಾರಿ ಶೇಖರ್‌ ವಿ. ದೇವಾಡಿಗ, ಜತೆ ಕೋಶಾಧಿಕಾರಿ ಚಂದ್ರಹಾಸ ಪಿ. ಶೆಟ್ಟಿ ದೆಪ್ಪುಣಿಗುತ್ತು, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಾಘು ಆರ್‌. ಕೋಟ್ಯಾನ್‌, ಕುಟ್ಟಿ ಎ. ಕುಂದರ್‌, ಸುಧಾಕರ ಸಿ. ಪೂಜಾರಿ, ಶಂಕರ ಮೊಲಿ, ವಿಶ್ವನಾಥ ಎಸ್‌. ಶೆಟ್ಟಿ, ಅಣ್ಣು ಎಂ. ಶೆಟ್ಟಿ, ಮಹಾಬಲ ಟಿ. ಶೆಟ್ಟಿ, ಹರೀಶ್‌ ಶೆಟ್ಟಿ ಪಡುಬಿದ್ರೆ, ಹರೀಶ್‌ ಶೆಟ್ಟಿ ಕುರ್ಕಾಲ್‌, ಹರೀಶ್‌ ಆರ್‌. ಶೆಟ್ಟಿ ನಲ್ಲೂರು, ಶಕುಂತಳಾ ಎಸ್‌. ಶೆಟ್ಟಿ, ಶ್ರೀ ಮೂಕಾಂಬಿಕಾ ಚಾರಿಟೇಬಲ್‌ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಗಳ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯ ಬಾಂಧವರ ನೇತೃತ್ವದಲ್ಲಿ ಕಾರ್ಯಕ್ರಮವು ಜರಗಿತ್ತು. ಮಂದಿರದ ಪ್ರಧಾನ ಅರ್ಚಕ ಗುರುಪ್ರಸಾದ್‌ ಭಟ್‌ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು.

ಶ್ರೀ ಶನೀಶ್ವರ ಮಂದಿರ ನೆರೂಲ್‌ ಅಧ್ಯಕ್ಷ, ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಉದ್ಯಮಿ ಶ್ಯಾಮ್‌ ಎನ್‌. ಶೆಟ್ಟಿ, ಕಿಶೋರ್‌ ಶೆಟ್ಟಿ, ಉದ್ಯಮಿ ಮನೋಹರ ಎ. ಶೆಟ್ಟಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಗಳ ಅನುಗ್ರಹ ಪಡೆದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀಗಳ ಅನುಗ್ರಹಕ್ಕೆ ಪಾತ್ರರಾದರು.     

ಚಿತ್ರ-ವರದಿ : ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.