ಸಿರಿನಾಡ ವೆಲ್ಫೇರ್‌ ಅಸೋಸಿಯೇಶನ್‌: ವಾರ್ಷಿಕ ಶೈಕ್ಷಣಿಕ ಕಾರ್ಯಕ್ರಮ

Team Udayavani, Jul 6, 2018, 3:11 PM IST

0507mum01.jpg

ಡೊಂಬಿವಲಿ: ಸಂಸ್ಥೆಯು ನೀಡುತ್ತಿರುವ ಶೈಕ್ಷಣಿಕ ಆರ್ಥಿಕ ಸಹಾಯವನ್ನು ದುರುಪಯೋಗ ಪಡಿಸಿಕೊಳ್ಳದೆ ಶೈಕ್ಷಣಿಕ ಕಾರ್ಯಗಳಿಗೆ ವಿನಿಯೋಗಿಸಿಕೊಳ್ಳಬೇಕು. ಅಲ್ಲದೆ ಮಕ್ಕಳು ಒಳ್ಳೆಯ ಅಂಕಗಳನ್ನು ಪಡೆದು ಉತ್ತೀರ್ಣರಾಗಿ ಆದರ್ಶ ಪ್ರಜೆಗಳಾಗಿ ಪಾಲಕರ ಕನಸನ್ನು ನನಸಾಗಿಸಬೇಕು. ಶಿಕ್ಷಣದ ಖರ್ಚು -ವೆಚ್ಚಗಳು ಗಗನ ಮುಖೀಯಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಸಂಸ್ಥೆಯು ಸಹಕರಿಸುತ್ತಿದೆ. ಮಕ್ಕಳು ಆರ್ಥಿಕ ಅಡಚಣೆಯಿಂದ ವಿದ್ಯೆಯಿಂದ ವಂಚಿತರಾಗದಂತೆ ಪ್ರಯತ್ನಿಸುವುದು ಸಂಸ್ಥೆಯ ಉದ್ದೇಶ ವಾಗಿದೆ ಎಂದು ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿ ಇದರ ಅಧ್ಯಕ್ಷ ಆರ್‌. ಕೆ. ಸುವರ್ಣ ಇವರು ನುಡಿದರು.

ಜು.1 ರಂದು ಡೊಂಬಿವಲಿಯ ವೈಭವ ಮಂಗಳ ಕಾರ್ಯಾಲಯದಲ್ಲಿ ನಡೆದ ಸಿರಿನಾಡ ವೆಲ್ಫೆàರ್‌ ಅಸೋ ಸಿಯೇಶನ್‌ ಡೊಂಬಿವಲಿ ಇದರ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರ್ಥಿಕ ಧನ ಸಹಾಯದಂತೆ ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವಿಧವೆಯರಿಗೆ ವಿಧವಾ ವೇತನ ನೀಡಲು ಪ್ರಯತ್ನಿಸಲಾಗುವುದು ಎಂದರು.

ಗೌರವ ಅತಿಥಿಯಾಗಿ ಆಗಮಿಸಿದ ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ ಕಲ್ಲಡ್ಕ ಇವರು ಮಾತನಾಡಿ, ವಿದ್ಯಾದಾನವು ಶ್ರೇಷ್ಠ ದಾನವಾಗಿದ್ದು, ಶ್ರೀಮಂತರು ಬಡವರಿಗೆ ಸಹಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ವಿದ್ಯಾರ್ಜನೆಗೆ ಸಹಕರಿಸುವವರಿಗೆ ಭಗವಂತನ ದಯೆ ಸದಾ ಇರುತ್ತದೆ. ಧನ ಸಹಾಯವನ್ನು ಪಡೆದ ಮಕ್ಕಳು ವಿದ್ಯಾವಂತರಾಗಿ ಯೋಗ್ಯ ನಾಗರಿಕರಾಗಿ ಬಾಳಬೇಕು. ಸಂಘವು ಶೈಕ್ಷಣಿಕ ಕಾರ್ಯಕ್ರಮ ಗಳೊಂದಿಗೆ ಅನಾರೋಗ್ಯ ಪೀಡಿತ ಮಹಿಳೆಗೆ ವೈದ್ಯಕೀಯ ನೆರವು ನೀಡಿ ಮಾನವೀಯತೆ ಮೆರೆದಿದೆ. ಇಂತಹ ಕಾರ್ಯಗಳು ಸದಾ ನಡೆಯುತ್ತಿರಲಿ ಎಂದು ನುಡಿದರು.

ಸಮಾರಂಭದಲ್ಲಿ ಪಾಲ್ಗೊಂಡ ಸ್ಥಾನೀಯ ನಗರ ಸೇವಕಿ ಸಂಗೀತಾ ಮುಕೇಶ್‌ ಪಾಟೀಲ್‌ ಅವರು ಮಾತನಾಡಿ, ನಮ್ಮ ಪರಿಸರದಲ್ಲಿ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಮನೆ-ಮಾತಾಗಿರುವ ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿ ವಲಿ ಸಂಸ್ಥೆಯು ನನ್ನನ್ನು  ಕರೆದು ಗೌರವಿಸಿದೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಸದಾ ಬೆಂಬಲವಿದೆ ಎಂದು ನುಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ವೈಭವ ಮಂಗಳ ಕಾರ್ಯಾಲಯದ ಮಾಲಕ ಕೈಲಾಸ್‌ ಠಾಕೂರ್‌ ಇವರು ಮಾತನಾಡಿ, ಸಂಸ್ಥೆಯ ಕಾರ್ಯ ವೈಖರಿಯನ್ನು ಕಂಡು ಪ್ರೇರಿತನಾಗಿ ಸಂಘವು ನಡೆಸುವ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಸಹಕರಿಸುತ್ತಿದ್ದೇನೆ ಎಂದು ನುಡಿದು,  ಉತ್ತಮ ಅಂಕ ಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಶೋಭಾ ಟಿ. ಪೂಜಾರಿ, ದಿವ್ಯಾ ಶೆಟ್ಟಿ, ಶಕುಂತಲಾ ಸಾಲ್ಯಾನ್‌ ಪ್ರಾರ್ಥ ನೆಗೈದರು. ಸಂಘದ ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ವಸಂತ ಸುವರ್ಣ ಅತಿಥಿಗಳನ್ನು ಪರಿಚಯಿಸಿದರು. 

ಸಂಸ್ಥೆಯ ಪದಾಧಿಕಾರಿಗಳು ಮತ್ತು ಅತಿಥಿ-ಗಣ್ಯರು ಆರ್ಥಿಕವಾಗಿ ಹಿಂದು
ಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ವಿತರಿಸಿದರು. ಸಂಘದ ಸದಸ್ಯ ಬಾಂಧ ವರ ಮಕ್ಕಳನ್ನು ಪ್ರತಿಭಾಪುರಸ್ಕಾರ ಇತ್ತು ಅಭಿನಂದಿಸಲಾಯಿತು.

ಕನ್ನಡ ಕಲಿಕಾ ತರಗತಿಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಪಾರಿತೋಷಕ ನೀಡಿ ಗೌರವಿಸಲಾಯಿತು. ಕನ್ನಡ ಕಲಿಕಾ ಶಿಕ್ಷಕಿಯರನ್ನು ಗೌರವಿಸಲಾಯಿತು. 

ಡೊಂಬಿವಲಿ ಮಂಜುನಾಥ ವಿದ್ಯಾಲಯದ ಕನ್ನಡ ವಿಭಾಗದ 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅನಾರೋಗ್ಯ ಪೀಡಿತ ಮಹಿಳೆಗೆ ವೈದ್ಯಕೀಯ ನೆರವು ಹಸ್ತಾಂತರಿಸಲಾಯಿತು. ಸಮಾಜ ಸೇವಕ ಜೈಸಿಂಗ್‌ ಪಾಟೀಲ್‌, ಉದ್ಯಮಿ ಸುರೇಶ್‌ ಶೆಟ್ಟಿ, ಸಲಹೆಗಾರರಾದ ರಾಜೀವ ಭಂಡಾರಿ, ಸಂಘದ ಕೋಶಾಧಿಕಾರಿ ಸದಾಶಿವ ಸಾಲ್ಯಾನ್‌, ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ, ಜತೆ ಕಾರ್ಯದರ್ಶಿ ರವೀಂದ್ರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉದಯಾ ಜೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿನೋದ್‌ ಕರ್ಕೇರ ಇವರು ಉಪಸ್ಥಿತರಿದ್ದರು. ಸುಮಾರು 450 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಕಳೆದ 17 ವರ್ಷಗಳಿಂದ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಉತ್ತಮ ಸಂಸ್ಥೆ ಎಂಬ ಹೆಸರನ್ನು ಗಳಿಸಿರುವ ಈ ಸಂಸ್ಥೆಯ ಆಡಳಿತ ಸಮಿತಿಯ ಕಾರ್ಯವೈಖರಿ ಅಭಿನಂದನೀಯ. ಈ ಸಂಸ್ಥೆಯು ಪ್ರತಿ ವರ್ಷವೂ ನೂತನ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಮುಂದಿನ ವರ್ಷದಲ್ಲಿ ಆರ್ಥಿಕವಾಗಿ ಹಿಂದುಳಿದ ವಿಧವೆಯವರಿಗೆ ವಿಧವಾ ವೇತನವನ್ನು ನೀಡಲು ಮುಂದಾಗಿರುವುದು ಇತರರಿಗೆ ಮಾದರಿಯಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು. ಮಕ್ಕಳಿಗೆ ಸಮಾಜದ ಆಗುಹೋಗುಗಳ ಬಗ್ಗೆ ಅರಿವು ಮೂಡಿಸಿದಾಗ ಅವರಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ. ಸಂಘದ ವತಿಯಿಂದ ನಡೆಯುವ ಕನ್ನಡ ಕಲಿಕಾ ವರ್ಗದ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು.
-ಇಂದ್ರಾಳಿ ದಿವಾಕರ ಶೆಟ್ಟಿ, ಸಲಹೆಗಾರರು  
ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿ

ಮಧ್ಯಮ ವರ್ಗದರಿಂದ ಕೂಡಿದ ತುಳು-ಕನ್ನಡಿಗರು ಡೊಂಬಿವಲಿ ಪರಿಸರದಲ್ಲಿ ಅಧಿಕ ಸಂಖ್ಯೆಯಲ್ಲಿದ್ದು, ಸಮಾಜಪರ ಕಾರ್ಯಕ್ರಮಗಳನ್ನು ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಆಯೋಜಿಸಿಕೊಂಡು ಅವರಿಗೆ ಸಹಕರಿಸುತ್ತಿದೆ. ಈ ಸಂಸ್ಥೆಯ ಪ್ರಗತಿಪಥದತ್ತ ಸಾಗಲು ಸಂಸ್ಥೆಯ ಆಡಳಿಯ ಸಮಿತಿಯ ಪರಿಶ್ರಮ ಮರೆಯುವಂತಿಲ್ಲ. ಈ ಸಂಸ್ಥೆಯಿಂದು ಸಹಾಯವನ್ನು ಪಡೆದ ವಿದ್ಯಾರ್ಥಿಗಳು ಋಣ ತೀರಿಸುವ ಕಾಯಕದಲ್ಲಿ ತೊಡಗಬೇಕು. ಸಂಸ್ಥೆಯಿಂದ ಇನ್ನಷ್ಟು ಸಮಾಜಪರ ಕಾರ್ಯಗಳು ನಿರಂತರವಾಗಿ ನಡೆಯುತ್ತಿರಲಿ.
-ಸುಬ್ಬಯ್ಯ ಶೆಟ್ಟಿ, ಉಪ ಕಾರ್ಯಾಧ್ಯಕ್ಷರು, ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.