ಶ್ರೀ ಆದಿಶಕ್ತಿ ಕನ್ನಡ ಶಾಲೆ: ಶಿಕ್ಷಕಿ ಸುಜಯಾ ಜೈನ್‌ ಬೀಳ್ಕೊಡುಗೆ 

Team Udayavani, Jul 5, 2018, 4:33 PM IST

0407mum02.jpg

ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ನಿರಂತರ ಮೂವತ್ತು ವರ್ಷಗಳಿಂದ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಜಯಾ ಎಲ್‌. ಜೈನ್‌ ಅವರ ಬೀಳ್ಕೊಡುವ ಮತ್ತು ಸಮ್ಮಾನ ಕಾರ್ಯಕ್ರಮವು  ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘ ಮತ್ತು ಶಾಲೆಯ ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು, ಜಗತ್ತಿನಲ್ಲಿಯೇ ಶಿಕ್ಷಕರ ಸ್ಥಾನಮಾನ ಅತ್ಯಂತ ಪವಿತ್ರವಾದುದು. ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕ ರನ್ನಾಗಿ ರೂಪಿಸುವ ಮಹತ್ವದ ಹೊಣೆ ಗಾರಿಕೆಯನ್ನು ಸುಜಯಾ ಎಲ್‌. ಜೈನ್‌ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ವಿದ್ಯಾರ್ಥಿಗಳ ಏಳ್ಗೆಗಾಗಿ ಮುಡುಪಾಗಿಟ್ಟ ಅವರ ಸೇವೆಯನ್ನು ವಿದ್ಯಾರ್ಥಿಗಳು ಮತ್ತು ಸಂಸ್ಥೆಯು ಮರೆಯಲು ಸಾಧ್ಯವಿಲ್ಲ. ಶಿಕ್ಷಣ ಸಂಸ್ಥೆಯ ಅಭಿವೃದ್ಧಿಯಲ್ಲೂ ಅವರ ಯೋಗದಾನ ಬಹಳಷ್ಟಿದೆ ಎಂದು ನುಡಿದು ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಲೆಯ ಮಾಜಿ ಮುಖ್ಯ ಶಿಕ್ಷಕ, ಸುಜಯಾ ಎಲ್‌. ಜೈನ್‌ ಅವರ ಪತಿ, ಲೋಕನಾಥ ಜೈನ್‌ ಅವರು ಮಾತನಾಡಿ, ಇದೊಂದು ಅಪರೂಪದ ಶಿಕ್ಷಣ ಸಂಸ್ಥೆ. ಮಕ್ಕಳ ಅಭಿವೃದ್ಧಿಯೇ ಮುಖ್ಯ ಧ್ಯೇಯ ಎಂಬುವುದಾಗಿ ಕರ್ತವ್ಯಬದ್ಧವಾಗಿ ತನ್ನ ಶಿಕ್ಷಕ ವೃತ್ತಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತಿದೆ. ತಮಗೆ ಸಹಕರಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಭಾಗ್ಯವಂತರು. ಇದೇ ರೀತಿ ಈ ಶಾಲೆಯು ನೂರ್ಕಾಲ ಪ್ರಸಿದ್ಧಿಯನ್ನು ಪಡೆಯಲಿ. ವಿದ್ಯಾರ್ಥಿ ಗಳು ತಂದೆ-ತಾಯಿಯ ಸೇವೆಗೈಯುವು ದರೊಂದಿಗೆ ಶಾಲೆಯ ಋಣವನ್ನು  ಮರೆಯಬಾರದು ಎಂದರು.

ವೇದಿಕೆಯಲ್ಲಿ ಗೌರವ ಕಾರ್ಯದರ್ಶಿ ವಾದಿರಾಜ ಶೆಟ್ಟಿ, ಜತೆ ಕಾರ್ಯದರ್ಶಿ ಏಕನಾಥ್‌ ಕುಂದರ್‌ ಇವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಸ್ವಾಗತಿಸಿದರು. ಪಾಲಕ-ಶಿಕ್ಷಕರ ಸಂಘಟನೆಯ ವತಿಯಿಂದ ಅಶ್ವಿ‌ನಿ ಜವಳಗಿ ಮತ್ತು ರಾಧಿಕಾ ಮಡಪ್‌ಗೊàಲ್‌ ಮಾತನಾಡಿದರು. ಜತೆ ಕಾರ್ಯದರ್ಶಿ ಏಕನಾಥ್‌ ಕುಂದರ್‌,. ಸಂಘದ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಜಯರಾಮ್‌ ಜಿ. ಶೆಟ್ಟಿ, ಇನ್ನೋರ್ವ ಮಾಜಿ ಅಧ್ಯಕ್ಷ ಶಿಮಂತೂರು ಶಂಕರ ಶೆಟ್ಟಿ, ಸಂಘದ ಸದಸ್ಯ ಮೇಘರಾಜ್‌, ರಾಮನಾಥ ಐಲ್‌ ಮಾತನಾಡಿ ಶುಭಹಾರೈಸಿದರು. ಶಾಲಾ ಶಿಕ್ಷಕರಾದ ವೆಂಕಟರಮಣ ಶೆಣೈ, ಪ್ರಮೋದಾ ಮಾಡಾ, ಮಮತಾ ಶೆಟ್ಟಿ, ಸಂತೋಷ್‌ ದೊಡ್ಡಮನೆ, ಪ್ರಕಾಶ್‌ ಚಿಂತಾಮಣಿ, ಪುಷ್ಪಾ ಕುಂಬ್ಳೆ, ನಳಿನಿ ಶೆಟ್ಟಿ, ನಿವೃತ್ತ ಶಿಕ್ಷಕ ಶಾಲಿನಿ ಶೆಟ್ಟಿ, ಚಂದ್ರಾವತಿ ಉದ್ಯಾವರ ಇವರು ಸುಜಯಾ ಎಲ್‌. ಜೈನ್‌ ಅವರ ಸಾಧನೆಗಳನ್ನು ವಿವರಿಸಿ ಶುಭಹಾರೈಸಿದರು.

ಹಳೆವಿದ್ಯಾರ್ಥಿಗಳಾದ ಸಂಗೀತಾ ಶೆಟ್ಟಿ, ನಿಶಾ ಪೂಜಾರಿ, ಪಪ್ಪು ರಾಥೋಡ್‌, ಅಖೀಲ ಭಾರತ ಜೈನ ಸಂಘದ ವತಿಯಿಂದ ಸುಪ್ರೀತಾ ಹೆಗ್ಡೆ ಅವರು ಮಾತನಾಡಿ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಸುಜಯಾ ಎಲ್‌. ಜೈನ್‌ ಅವರನ್ನು ಶಾಲೆ, ಹಳೆ ವಿದ್ಯಾರ್ಥಿಗಳ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಜೈನ ಸಂಘ ಹಾಗೂ ಗೋಪಾಲ ಗೌಡ ಅವರ ವತಿಯಿಂದ ಗೌರವಿಸಲಾಯಿತು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಸುಜಯಾ ಜೈನ್‌ ಅವರು, ಈ ಶಾಲೆಯಲ್ಲಿ ನಿರಂತರ 30 ವರ್ಷಗಳ ಕಾಲ ಸೇವೆ ಸಲ್ಲಿಸಲು ಸಹಕರಿಸಿದ ಎಲ್ಲರಿಗೂ ಋಣಿಯಾಗಿದ್ದೇನೆ. ಸಂಘದ ಹಿಂದಿನ ಹಾಗೂ ಪ್ರಸ್ತುತ ಪದಾಧಿಕಾರಿಗಳು ಸಹಕರಿಸಿದ್ದಾರೆ. ಸಹಶಿಕ್ಷಕ -ಶಿಕ್ಷಕಿಯರ ಸಹಕಾರ ವನ್ನು, ಹಳೆವಿದ್ಯಾರ್ಥಿಗಳು, ವಿದ್ಯಾರ್ಥಿಗಳನ್ನು ನಾನು ಜೀವನದಲ್ಲಿ ಮರೆಯುವಂತಿಲ್ಲ ಎಂದರು.

ವಿವಿಧ ಶಿಕ್ಷಕರ ಸಂದೇಶಗಳನ್ನು ಮಮತಾ ಶೆಟ್ಟಿ ಅವರು ವಾಚಿಸಿದರು. ಜೈನ ಸಂಘದ ಪವನಂಜಯ, ಶಿವ ಪ್ರಕಾಶ್‌ ಅವರ ಸಂದೇಶವನ್ನು ವೆಂಕಟರಮಣ ಶೆಣೈ  ವಾಚಿಸಿದರು.  ಮಾಜಿ ಕೋಶಾಧಿಕಾರಿ ಕೇಶವ ಆಳ್ವ, ಜಯರಾಮ್‌ ಕೆ. ಶೆಟ್ಟಿ, ಮನೋಜ್‌ ಹೆಗ್ಡೆ, ಧರ್ಮನಾಥ ಪೂಜಾರಿ, ಅಜಿತ್‌ ಕರ್ನಂತಾಯ, ವಿದ್ಯಾರ್ಥಿಗಳು, ಪಾಲಕರು, ಪೋಷಕರು, ಸುಜಯಾ ಎಲ್‌. ಜೈನ್‌ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್‌ ಚಿಂತಾಮಣಿ ಇವರು ವಂದಿಸಿದರು. ನಳಿನಿ ಶೆಟ್ಟಿ  ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Dubai ಕನ್ನಡ ಸಂಘ: ಹಾದಿಯ ಮಂಡ್ಯ ಅಧ್ಯಕ್ಷೆ, ವರದರಾಜ್‌ ಕೋಲಾರ ಪ್ರ.ಕಾರ್ಯದರ್ಶಿ

Dubai ಕನ್ನಡ ಸಂಘ: ಹಾದಿಯ ಮಂಡ್ಯ ಅಧ್ಯಕ್ಷೆ, ವರದರಾಜ್‌ ಕೋಲಾರ ಪ್ರ.ಕಾರ್ಯದರ್ಶಿ

Desi Swara: ಕತಾರ್‌ ಕರ್ನಾಟಕ ಸಂಘಕ್ಕೆ ನೂತನ ಸಾರಥ್ಯ

Desi Swara: ಕತಾರ್‌ ಕರ್ನಾಟಕ ಸಂಘಕ್ಕೆ ನೂತನ ಸಾರಥ್ಯ

Desi Swara-ದೋಹಾ: ಮಾವಿನ ರುಚಿಗೆ ಮಾರುಹೋದ ಸಾವಿರಾರು ಮಂದಿ

Desi Swara-ದೋಹಾ: ಮಾವಿನ ರುಚಿಗೆ ಮಾರುಹೋದ ಸಾವಿರಾರು ಮಂದಿ

1-asdasdas

Mango fair; ಕೊಲ್ಲಿ ರಾಷ್ಟ್ರದಲ್ಲಿ ಹಣ್ಣಿನ ರಾಜನ ಹಿರಿಮೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.