ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ವಾರ್ಷಿಕ ತಿರುಗಾಟಕ್ಕೆ ಮಂಗಳ

Team Udayavani, Jun 13, 2018, 4:48 PM IST

1206mum01.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಸಂಚಾಲಿತ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯು ಗತ ಯಕ್ಷವರ್ಷದ ತಿರುಗಾಟಕ್ಕೆ ಜೂ. 9 ರಂದು ಸಂಜೆ ಮಂಗಳವನ್ನಾಡಿತು. ವೇಷಭೂಷಣಗಳ ಜೊತೆಗೆ ಯಕ್ಷಚೌಕಿಗೆ ಪೂಜೆ ನೆರವೇರಿಸಿದ ಬಳಿಕ ಬಿಲ್ಲವರ ಭವನದ ಮಂದಿರ ದಲ್ಲಿ ಪ್ರತಿಷ್ಠಾಪಿತ ಬ್ರಹ್ಮಶ್ರೀ ನಾರಾ ಯಣ ಗುರುಗಳ ಪ್ರತಿಮೆಗೆ ಪೂಜೆ ನೆರವೇರಿಸಿ ಆರತಿಗೈದ ಮಂಡಳಿಯ ಸದಸ್ಯರು ಹಾಗೂ ಯಕ್ಷ ಕಲಾವಿದರು ಕೊನೆಯಲ್ಲಿ ಸಾಯಿಕೇರ್‌ ಲಾಜಿಸ್ಟಿಕ್ಸ್‌ ಸಂಸ್ಥೆಯ ಸುರೇಂದ್ರ ಎ. ಪೂಜಾರಿ ಪರಿವಾರದ ಪ್ರಾಯೋಜಕತ್ವದಲ್ಲಿ ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಕನ್ಯಾಡಿ  ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತರಿದ್ದು ಆಶೀರ್ವಚನ ನೀಡಿ, ಕರ್ನಾಟಕದ ಗಂಡುಕಲೆ ಯಕ್ಷಗಾನ ಕಲೆಯ ಉಳಿವಿಗೆ ಹಗಲಿರುಳು ಎನ್ನದೆ ಶ್ರಮಿಸುವ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮತ್ತು ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಶ್ರಮ ಅಭಿನಂದನೀಯ. ಶ್ರೀ  ಗುರು ನಾರಾಯಣ ಯಕ್ಷಗಾನ ಮಂಡ ಳಿಯು ಜಯ ಸಿ. ಸುವರ್ಣ ಅವರ ಮಾತೋಶ್ರೀ ದಿ| ಅಚ್ಚು ಸಿ. ಸುವರ್ಣ ಸ್ಮರಣಾರ್ಥ ವಾರ್ಷಿಕವಾಗಿ ಕೊಡಮಾಡುವ ಯಕ್ಷಗಾನ ಕಲಾ ಪ್ರಶಸ್ತಿ ಆಗಲಿ, ಅಸೋಸಿಯೇಶನ್‌ನ ಸಾಂಸ್ಕೃತಿಕ ಉಪ ಸಮಿತಿ ಆಯೋಜಿಸುತ್ತಿರುವ ಶ್ರೀ ಗುರುನಾರಾಯಣ  ತುಳು ನಾಟಕ ಸ್ಪರ್ಧೆ ಅನುಕರಣೀಯ. ಒಟ್ಟಾರೆಯಾಗಿ ಈ ಬಿಲ್ಲವರ ಅಸೋಸಿಯೇಶನ್‌ ವಿಶ್ವದ ಬಿಲ್ಲವರ ಆಸ್ತಿಯಾದರೆ ನಾಡಿನ ಸಮಸ್ತ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ನುಡಿದು ಶುಭ ಹಾರೈಸಿದರು. ಅಂತೆಯೇ ಬರುವ ಸೆಪ್ಟೆಂಬರ್‌ನಲ್ಲಿ ಕನ್ಯಾಡಿ ಕ್ಷೇತ್ರದಲ್ಲಿ ಆಯೋಜಿಸಿರುವ ತನ್ನ ಪಟ್ಟಾಭೀಷೇಕ ದಶಮಾನೋತ್ಸವ ಸಂಭ್ರಮ ನಿಮಿತ್ತ ಶ್ರೀ ರಾಮ ತಾರಕ ಮಂತ್ರ ಯಜ್ಞ ಹಾಗೂ ಧರ್ಮ ಸಂಸದ್‌ನ ಯಶಸ್ಸಿಗೆ ಮುಂಬಯಿಯ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸಬೇಕು. ಹೆಚ್ಚಿನ ಮಾಹಿತಿ ಗಾಗಿ ನಿಮ್ಮವರೇ ಆದ ಹಾಗೂ ಭಾರತ್‌ ಬ್ಯಾಂಕ್‌ನ ನಿರ್ದೇಶಕ ಗಂಗಾಧರ್‌ ಜೆ. ಪೂಜಾರಿ ಅವರನ್ನು ಸಂಪರ್ಕಿಸುವಂತೆ ತಿಳಿಸಿದರು. ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಹಾಗೂ ಭಾರತ್‌ ಬ್ಯಾಂಕ್‌  ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಮತ್ತು ಅಸೋಸಿಯೇಶನ್‌ನ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಶ್ರೀಗಳಿಗೆ ಫಲಪುಷ್ಪಗಳಿಂದ ಗೌರವಿಸಿದರು.

ಸಭೆಯಲ್ಲಿ ಕನ್ಯಾಡಿ ಕ್ಷೇತ್ರದ ಸಂಚಾಲಕ ಕೃಷ್ಣಪ್ಪ ಪೂಜಾರಿ, ಅಸೋಸಿಯೇಶನ್‌ನ ಪದಾಧಿಕಾರಿ ಗಳು, ಮಾಜಿ ಅಧ್ಯಕ್ಷ ಎಲ್‌. ವಿ. ಅಮೀನ್‌, ಮಾಜಿ ಗೌರವ  ಪ್ರಧಾನ ಕೋಶಾಧಿಕಾರಿ ಎನ್‌. ಎಂ. ಸನೀಲ್‌, ಭಾರತ್‌ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದು  ಧಾರ್ಮಿಕ ಉಪ ಸಮಿತಿಯ ಕಾರ್ಯದರ್ಶಿ ರವೀಂದ್ರ ಶಾಂತಿ ಮತ್ತು ಬಳಗ ಭಜನೆ ನೆರವೇರಿಸಿತು. 

ಅಸೋಸಿಯೇಶನ್‌ನ ಗೌರವ  ಪ್ರಧಾನ ಕಾರ್ಯದರ್ಶಿ ಧರ್ಮ ಪಾಲ ಜಿ. ಅಂಚನ್‌ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ದಯಾನಂದ್‌ ಆರ್‌. ಪೂಜಾರಿ ಅವರು ಸ್ವಾಗತಿಸಿದರು.  ಗೌರವ  ಕಾರ್ಯದರ್ಶಿ ಅಶೋಕ್‌ ಕುಕ್ಯಾನ್‌ ಸಸಿಹಿತ್ಲು ವಂದಿಸಿದರು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.