“ಮಳೆಗಾಲದಲ್ಲಿ ಕೋವಿಡ್ ವಿರುದ್ಧದ ಹೋರಾಟ ಕಠಿನ’

Team Udayavani, May 18, 2021, 10:35 AM IST

“ಮಳೆಗಾಲದಲ್ಲಿ ಕೋವಿಡ್ ವಿರುದ್ಧದ ಹೋರಾಟ ಕಠಿನ’

ಮುಂಬಯಿ: ಮಳೆಗಾಲದಲ್ಲಿ ಕೊರೊನಾ ವಿರುದ್ಧದ ಹೋರಾಟ ಇನ್ನಷ್ಟು ಕಠಿನವಾಗುವ ಸಾಧ್ಯತೆ ಇರುವುದರಿಂದ ಟಾಸ್ಕ್ ಪೋರ್ಸ್ ಸಿದ್ಧವಾಗಿರಬೇಕೆಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಕೋವಿಡ್ ವಿರುದ್ಧ ಹೋರಾಡಲು ಜೂ. 1ರ ವರೆಗೆ ರಾಜ್ಯದಲ್ಲಿ ಲಾಕ್‌ಡೌನ್‌ ವಿಧಿಸಿದ ಠಾಕ್ರೆ ಸರಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದರ ಭಾಗವಾಗಿ ಸಿಎಂ ಉದ್ಧವ್‌ ಠಾಕ್ರೆ ಮಹಾರಾಷ್ಟ್ರ ಕಾರ್ಯಪಡೆಯ ಸದಸ್ಯರೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ಈ ವೇಳೆ ರಾಜ್ಯದಲ್ಲಿನ ವೈದ್ಯರು ಮಾಝಾ ಡಾಕ್ಟರ್‌ ಎಂಬ ಪರಿಕಲ್ಪನೆಯೊಂದಿಗೆ ಮುಂದೆ ಬರಬೇಕೆಂದು ಅವರು ವೈದ್ಯರಿಗೆ ಮನವಿ ಮಾಡಿದ್ದಾರೆ.

ಕಳೆದ ವರ್ಷ ತಜ್ಞ ವೈದ್ಯರು ದೊಡ್ಡ ಸಹಾಯಕರಾಗಿದ್ದರು. ಕೊರೊನಾ ರೋಗಿಗಳಿಗೆ ನಾವು ಯಾವ ಚಿಕಿತ್ಸಾ ವಿಧಾನಗಳನ್ನು ಹೊಂದಿರಬೇಕು, ಯಾವ ಔಷಧ ನೀಡಬೇಕು ಮತ್ತು ಎಷ್ಟು ನೀಡಬೇಕು ಎಂಬುದರ ಕುರಿತು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಪ್ರತಿಯೊಂದು ಕುಟುಂಬವು ಪರಿಣಿತ ವೈದ್ಯರನ್ನು ಹೊಂದಿರುತ್ತದೆ. ಆ ವೈದ್ಯರ ಸಲಹೆಯ ಆಧಾರದ ಮೇಲೆ ಜನರು ನಿರ್ಧಾರ ತೆಗೆದುಕೊಳ್ಳುತ್ತಾರೆ. ನಮ್ಮಲ್ಲಿ ಕುಟುಂಬ ವೈದ್ಯರೂ ಇ¨ªಾರೆ. ವೈದ್ಯರು ಪ್ರತಿಯೊಂದು ಕುಟುಂಬದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುತ್ತಾರೆ ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ರಾಜ್ಯದಲ್ಲಿ ಶೇ. 70ರಿಂದ 75 ರೋಗಿಗಳು ಲಕ್ಷಣರಹಿತರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿಲ್ಲ. ಮನೆ ಚಿಕಿತ್ಸೆಯನ್ನು ತೆಗೆದುಕೊಳ್ಳುವ ಮೂಲಕ ರೋಗಿಗಳನ್ನು ಗುಣಪಡಿಸಬಹುದು. ಆದರೆ ಅವರ ಚಿಕಿತ್ಸೆಯತ್ತ ಗಮನ ಹರಿಸಲು, ಅವರಿಗೆ ಸರಿಯಾದ ಔಷಧ ನೀಡಲು ನೀವು ಕೆಲಸ ಮಾಡಬೇಕು. ಮಧುಮೇಹ ಹೊಂದಿದ ಕೋವಿಡ್‌ ರೋಗಿಯ ಸೋಂಕು ನಿಯಂತ್ರಿಸಲು ವೈದ್ಯರು ಉತ್ತಮ ಚಿಕಿತ್ಸೆ ನೀಡಬೇಕು ಎಂದು ಉದ್ಧವ್‌ ಠಾಕ್ರೆ ಮನವಿ ಮಾಡಿದರು.

ಜೂ. 1ರಿಂದ ಮಾನ್ಸೂನ್‌ ಪ್ರಾರಂಭವಾಗಲಿದ್ದು, ಬಳಿಕ ಪರೀಕ್ಷೆ ಇನ್ನಷ್ಟು ಕಠಿಣವಾಗಲಿದೆ. ಈ ಸಮಯದಲ್ಲಿ ನಿಮಗೆ ಬೇಕಾದ ಬೆಂಬಲವನ್ನು ನೀಡಲು ನಾವು ಸಿದ್ಧರಿದ್ದೇವೆ ಎಂದು ಹೇಳಿರುವ ಉದ್ಧವ್‌ ಠಾಕ್ರೆ, ವೈದ್ಯರ ಎಲ್ಲ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಡಾ| ಸಂಜಯ್‌ ಓಕ್‌, ಶಶಾಂಕ್‌ ಜೋಶಿ, ಡಾ| ತತ್ಯರಾವ್‌ ಲಹಾನೆ ಮತ್ತು ಡಾ| ರಾಹುಲ್‌ ಪಂಡಿತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.