ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಕ್ರೀಡಾ ಸಮಿತಿ: ಕ್ರಿಕೆಟ್‌ ಪಂದ್ಯಾಟ

Team Udayavani, Feb 27, 2019, 3:27 PM IST

2602mum02.jpg

ಥಾಣೆ: ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಇದರ ಕ್ರೀಡಾ ಸಮಿತಿ ಮತ್ತು ಯುವ ವಿಭಾಗದ ಆಶ್ರಯದಲ್ಲಿ ಕ್ರಿಕೆಟ್‌ ಪಂದ್ಯಾಟವು ಫೆ. 24ರಂದು ಥಾಣೆ ಪಶ್ಚಿಮದ ಒವೂರ್‌ ಹಿಲ್ಸ್‌ ಬೆಂಡಿಪಾಡಾದ ಫಿಚ್‌ ಟ್ರಾಪ್‌ ಮೈದಾನದಲ್ಲಿ ನಡೆಯಿತು.

ಸಮಾಜ ಬಾಂಧವರಿಗಾಗಿ ನಡೆದ ಈ ಪಂದ್ಯಾಟದ ಉದ್ಘಾಟನೆಯು ಬೆಳಗ್ಗೆ ಸಂಸ್ಥೆಯ ಅಧ್ಯಕ್ಷ  ಕುಶಲ್‌ ಸಿ. ಭಂಡಾರಿ ಅಧ್ಯಕ್ಷತೆಯಲ್ಲಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೇಶ್‌ ಶೆಟ್ಟಿ, ಪುಷ್ಪರಾಜ್‌ ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ ಹಾಗೂ ಯುವ ವಿಭಾಗದ ಕಾರ್ಯಾಧ್ಯಕ್ಷ ರಂಜನ್‌ ಆರ್‌. ಶೆಟ್ಟಿ ಅವರ ಮುಂದಾಳತ್ವದಲ್ಲಿ ನೆರವೇರಿತು.

ಕನಕಫುಡ್‌ ಮ್ಯಾನೇಜ್‌ಮೆಂಟ್‌ ಸರ್ವಿಸಸ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಕಾರ್ಯಕಾರಿ ಆಡಳಿತ ನಿರ್ದೇಶಕ ಜಗದೀಶ್‌ ಶೆಟ್ಟಿ ಮತ್ತು ಡಾಕ್ಟರ್‌ ಪ್ಲೇನೆಟ್‌ ಇದರ ಆಡಳಿತ ನಿರ್ದೇಶಕ ರತ್ನಾಕರ ಶೆಟ್ಟಿ ಅವರು ದೀಪ ಪ್ರಜ್ವಲಿಸಿ, ಮೈದಾನದಲ್ಲಿ ತೆಂಗಿನಕಾಯಿ ಒಡೆದು ಪಂದ್ಯಾಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಪ್ರಾರಂಭದಲ್ಲಿ ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅಧ್ಯಕ್ಷ ಕುಶಲ್‌ ಸಿ. ಭಂಡಾರಿ ಇವರು ಮಾತನಾಡಿ, ನಮ್ಮ ಬದುಕಿನಲ್ಲಿ ಕ್ರೀಡೆಯ ಪಾತ್ರ ಮಹತ್ತರವಾಗಿದೆ. ಸಮಾಜದ ಯುವ ವರ್ಗವನ್ನು ಒಗ್ಗೂಡಿಸುವ, ಅವರಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಥಾಣೆ ಬಂಟ್ಸ್‌ ಪ್ರತಿ  ವರ್ಷ ಕ್ರೀಡಾಕೂಟವನ್ನು ಆಯೋಜಿಸುತ್ತಾ ಬಂದಿದೆ. ನಮ್ಮ ಕ್ರೀಡಾ ಸಮಿತಿಯವರು ಮತ್ತು ಯುವ ವಿಭಾಗದವರು ಈ ಮೂಲಕ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಎನ್ನಲು ಹೆಮ್ಮೆಯಾಗುತ್ತಿದೆ. ಮುಂದೆಯೂ ಕ್ರೀಡಾಕೂಟ ನಿರಂತರವಾಗಿ ನಡೆಯುತ್ತಿರಲಿ. ಯುವ ವರ್ಗದ ಈ ಕಾರ್ಯಕ್ಕೆ  ಎಲ್ಲರ ಸಹಕಾರ ಸದಾಯಿರಲಿ ಎಂದು ಹಾರೈಸಿದರು.

ಕ್ರೀಡಾಧ್ಯಕ್ಷ ಪುಷ್ಪರಾಜ್‌ ಶೆಟ್ಟಿ ಇವರು ಮಾತನಾಡಿ, ನಾವೆಲ್ಲರೂ ಆರೋಗ್ಯ ವಂತರಾಗಿರಲು ಮಾನಸಿಕವಾಗಿ ಮತ್ತು ದೈಹಿಕವಾಗಿ ದೃಢವಾಗಿರಬೇಕಾದರೆ ಅದರಲ್ಲಿ ಕ್ರೀಡೆಯ ಪಾಲು ಮಹತ್ತರವಾಗಿದೆ. ಇಂದು ಥಾಣೆ ಬಂಟ್ಸ್‌ನ ಪದಾಧಿಕಾರಿಗಳ ಸಹಕಾರದಿಂದ ನಾವು ಈ ಕ್ರಿಕೆಟ್‌ ಪಂದ್ಯಾಟವನ್ನು ಆಯೋಜಿಸಿದ್ದೇವೆ. ಕೇವಲ ಬಂಟ ಬಾಂಧವರಿಗೆ ಆಯೋಜಿಸಲಾಗಿರುವ ಈ ಪಂದ್ಯಾಟದಲ್ಲಿ ಬಂಟರ ಸಂಘದ ವಿವಿಧ ಪ್ರಾದೇಶಿಕ ಸಮಿತಿಗಳು ಸೇರಿದಂತೆ ಒಟ್ಟು 10 ತಂಡಗಳು ಭಾಗವಹಿಸುತ್ತಿದೆ ಎನ್ನಲು ಸಂತೋಷವಾಗುತ್ತಿದೆ ಎಂದು ನುಡಿದು ಪಂದ್ಯಾಟದ ಮಾಹಿತಿ ನೀಡಿದರು.

ಅತಿಥಿ-ಗಣ್ಯರನ್ನು ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಪುಷ್ಪರಾಜ್‌ ಶೆಟ್ಟಿ, ಯೋಗೇಶ್‌ ಶೆಟ್ಟಿ ಮತ್ತು ಹರಿಶ್ಚಂದ್ರ ಶೆಟ್ಟಿ ಅವರು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಗೌರವಿಸಿದರು. ವೇದಿಕೆಯಲ್ಲಿ ಅಸೋಸಿಯೇಶನ್‌ನ ಜತೆ ಕಾರ್ಯದರ್ಶಿ ಸುನಿಲ್‌ ಜೆ. ಶೆಟ್ಟಿ, ಕೋಶಾಧಿಕಾರಿ ಭಾಸ್ಕರ ಎನ್‌. ಶೆಟ್ಟಿ, ಜತೆ ಕಾರ್ಯದರ್ಶಿ ಅಶೋಕ್‌ ಎಂ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಯೋಗೇಶ್‌ ಜಿ. ಶೆಟ್ಟಿ, ಪುಷ್ಪರಾಜ್‌ ಎಲ್‌. ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಪದಾಧಿಕಾರಿಗಳನ್ನು ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರು ಗೌರವಿಸಿದರು. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು, ಸಂಸ್ಥೆಯ ಮಾಜಿ ಅಧ್ಯಕ್ಷರನ್ನು ಗೌರವಿಸಲಾಯಿತು.

ಕಾರ್ಯದರ್ಶಿ ನವೀನ್‌ ಜೆ. ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಮುಖವಾಣಿ ಸ್ನೇಹ ಸೌರಭದ ಸಂಪಾದಕ ನಿತ್ಯಾನಂದ ಶೆಟ್ಟಿ ಬೆಳುವಾಯಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಮನೀಷ್‌ ಶೆಟ್ಟಿ ಅವರು ಕ್ರೀಡಾ ವೀಕ್ಷಕ ವಿವರಣೆಯನ್ನು ನೀಡಿದರು. ಸಂಜೆ ಕ್ರೀಡಾಕೂಟದ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವು ಕುಶಲ್‌ ಸಿ. ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ ಕನಕ ಫುಡ್‌ನ‌ ಆಡಳಿತ ನಿರ್ದೇಶಕ ಜಗದೀಶ್‌ ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಬೆಳಗ್ಗೆಯ ಉಪಾಹಾರ, ಮಧ್ಯಾಹ್ನದ ಭೋಜನ, ಸಂಜೆಯ ಚಹಾ-ತಿಂಡಿ ಹಾಗೂ ರಾತ್ರಿಯ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿ ಮತ್ತು ಜವಾಬ್‌ ತಂಡಗಳ ಮಧ್ಯೆ ಉದ್ಘಾಟನಾ ಪಂದ್ಯ ನಡೆಯಿತು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.