ಥಾಣೆ ಬಂಟ್ಸ್‌  ಕಲಾ ಸಂಭ್ರಮ ಸಮಾರೋಪ


Team Udayavani, Nov 16, 2018, 4:38 PM IST

1511mum13.jpg

ಥಾಣೆ: ನಾಡಿನ ಸಂಸ್ಕೃತಿ, ಆಚಾರ, ವಿಚಾರಗಳನ್ನು ಯುವಪೀಳಿಗೆಗೆ ತಿಳಿಸುವಲ್ಲಿ ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಕಳೆದ ಹಲವಾರು ವರ್ಷಗಳಿಂದ ಶ್ರಮಿಸುತ್ತಿದೆ. ಇದೊಂದು ಅಪೂರ್ವ ಕಾರ್ಯಕ್ರಮವಾಗಿದೆ. ಸಂಸ್ಥೆಯ ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾದ ಕರ್ನೂರು ಮೋಹನ್‌ ರೈ, ಜಯಪ್ರಕಾಶ್‌ ಶೆಟ್ಟಿ, ಮರಾಠ ಸುರೇಶ್‌ ಶೆಟ್ಟಿ, ಶಕುಂತಳಾ ಶೆಟ್ಟಿ ಅವರ ಮುಂದಾಳತ್ವದಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆದಿದೆ ಎನ್ನಲು ಸಂತೋಷವಾಗುತ್ತಿದೆ. ಈ ಸಂಭ್ರಮದ ಹಿಂದೆ ಬಹಳಷ್ಟು ಮಂದಿ ಶ್ರಮಿಸಿದ್ದಾರೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಾಂತಾಗಿದೆ. ಪ್ರೊ| ಸೀತಾರಾಮ ಆರ್‌. ಶೆಟ್ಟಿ ಅವರ ಸಂಸ್ಮರಣೆಯಲ್ಲಿ ನಡೆದ ಸಂಭ್ರಮಕ್ಕೆ ಇಂದಿನ ಕಿಕ್ಕಿರಿದು ತುಂಬಿದ ಕಲಾಭಿಮಾನಿಗಳೇ ಸಾಕ್ಷಿಯಾಗಿದ್ದಾರೆ. ಇಂತಹ ಕಲೆ, ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ-ಬೆಳೆಸುವಲ್ಲಿ ಥಾಣೆ ಬಂಟ್ಸ್‌ ಸದಾ ಶ್ರಮಿಸಲಿದೆ. 

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಥಾಣೆ ಬಂಟ್ಸ್‌ನ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ ಅವರು ನುಡಿದರು.
ನ. 13 ರಂದು ಥಾಣೆ ಪಶ್ಚಿಮದ ಹೀರಾನಂದಾನಿ ಮೆಡೋಸ್‌ನಲ್ಲಿರುವ ಕಾಶೀನಾಥ್‌ ಘಾಣೇಕರ್‌ ಸಭಾಗೃಹದಲ್ಲಿ ದಿ| ಪ್ರೊ| ಸೀತಾರಾಮ ಆರ್‌. ಶೆಟ್ಟಿ ವೇದಿಕೆಯಲ್ಲಿ ನಡೆದ ಥಾಣೆ ಬಂಟ್ಸ್‌ ಅಸೋಸಿಯೇಶನ್‌ನ ಥಾಣೆ ಬಂಟ್ಸ್‌ ಕಲಾ ಸಂಭ್ರ‌ಮ-2018 ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಸೋಸಿಯೇಶನ್‌ನ ಸದಸ್ಯರು ಇಂದು ಪ್ರಪ್ರಥಮ ಬಾರಿಗೆ ಕಾಲಿಗೆ ಗೆಜ್ಜೆ ಕಟ್ಟಿರುವುದು ಅಭಿಮಾನದ ವಿಷಯವಾಗಿದೆ. ಇದರಿಂದ ಪ್ರತಿಭೆಗಳಿಗೆ ವೇದಿಕೆ ಸಿಕ್ಕಂತಾಗುತ್ತದೆ. ಸಂಸ್ಥೆಯ ಮೇಲೆ ನಿಮ್ಮ ಅಭಿಮಾನ, ಪ್ರೀತಿ, ಗೌರವ ಇದೇ ರೀತಿಯಲ್ಲಿ ಇರಲಿ ಎಂದು ನುಡಿದರು.

ಸಮಾರಂಭದಲ್ಲಿ ಥಾಣೆ ಬಂಟ್ಸ್‌ ಅಸೋಸಿಯೇ ಶನ್‌ನ ಎಲ್ಲ ಕಾರ್ಯಕ್ರಮಗಳಿಗೆ ಸಹಕರಿಸುತ್ತಿರುವ ಪ್ರಥಮ್‌ ಗ್ರೂಪ್‌ ಆಫ್‌ ಕಂಪೆನೀಸ್‌ ಇದರ ಸಿಎಂಡಿ ಸುರೇಶ್‌ ಎನ್‌. ಶೆಟ್ಟಿ ಮತ್ತು ಸುಷ್ಮಾಲಿ ಶೆಟ್ಟಿ ದಂಪತಿ ಹಾಗೂ ಮಕ್ಕಳನ್ನು  ಸಮ್ಮಾನಿಸಲಾಯಿತು.

ಅಭಿಮಾನದ ವಿಷಯ
ಮುಖ್ಯ ಅತಿಥಿಯಾಗಿ ಆಗಮಿಸಿದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ ಅವರು ಮಾತನಾಡಿ, ತವರೂರಿನಲ್ಲಿ ನಾಡಿನ ಸಂಸ್ಕೃತಿ, ಕಲೆಗಳು ಮರೆ ಯಾಗುತ್ತಿರುವ ಇಂದಿನ ಯುಗದಲ್ಲಿ ಮುಂಬಯಿ ತುಳು-ಕನ್ನಡಿಗರು ಅದರ ಉಳಿವಿನಲ್ಲಿ ತೊಡಗಿರು ವುದು ಅಭಿಮಾನದ ವಿಷಯವಾಗಿದೆ. ಥಾಣೆ ಬಂಟ್ಸ್‌ನ ಯಾವುದೇ ಕಾರ್ಯಕ್ರಮಗಳಿರಲಿ ಅದರಲ್ಲಿ ನಾಡಿನ ಸಂಸ್ಕೃತಿ ಮೇಳೈಸುತ್ತಿರುತ್ತದೆ.   ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಿಸುತ್ತಿರುವ ಪಾಲಕರು ಧನ್ಯರು. ಕಲಾ ಸಂಭ್ರಮವು ವಿಭಿನ್ನ ರೀತಿಯಲ್ಲಿ ಮೂಡಿ ಬಂದಿದ್ದು, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ಮೂಡಿಬರುತ್ತಿರಲಿ ಎಂದು ಹೇಳಿದರು.
ಇನ್ನೋರ್ವ ಅತಿಥಿ ಉದ್ಯಮಿ, ಸಮಾಜ ಸೇವಕ ಬಾಬು ಎಸ್‌. ಶೆಟ್ಟಿ ಪೆರಾರ ಅವರು ಮಾತನಾಡಿ, ತುಳು-ಕನ್ನಡಿಗರು ಮುಂಬಯಿಗೆ ಬಂದು ವಿವಿಧ ಕ್ಷೇತ್ರಗಳಲ್ಲಿ ಮಿಂಚಿದರು ಕೂಡಾ ತಮ್ಮ ಭಾಷೆ, ಸಂಸ್ಕೃತಿಯನ್ನು ಮರೆಯದೇ ಅದರ ಬೆಳವಣಿಗೆಯಲ್ಲಿ ತೊಡಗಿರುವುದು ಅಭಿಮಾನವೆನಿಸುತ್ತಿದೆ. ಇದಕ್ಕೆ ಬಂಟ್ಸ್‌ ಅಸೋಸಿಯೇಶನ್‌ನ ಕಾರ್ಯವೈಖರಿ ಸಾಕ್ಷಿಯಾಗಿದೆ. ಸಂಸ್ಥೆಯ ಮಕ್ಕಳಿಂದ ಹಿಡಿದು, ಹಿರಿಯವರೆಗೆ ಕಲಾ ಸಂಭ್ರಮದಲ್ಲಿ ಸಂಭ್ರಮಿಸಿರುವುದು ಇತರರಿಗೆ ಮಾದರಿಯಾಗಿದೆ ಎಂದು ನುಡಿದರು.

ಅತಿಥಿಯಾಗಿ ಆಗಮಿಸಿದ ಕ್ಯಾಟರಿಂಗ್‌ ಉದ್ಯಮಿ ಸತೀಶ್‌ ಶೆಟ್ಟಿ ಅವರು ಮಾತನಾಡಿ, ಥಾಣೆ ಬಂಟ್ಸ್‌ ನನಗೆ ಹೊಸತೇನಲ್ಲ. ಸಂಸ್ಥೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ನಾನು ಭಾಗಿಯಾಗುತ್ತಿದ್ದೇನೆ. ಸಂಸ್ಥೆಯಲ್ಲಿರುವ ಒಗ್ಗಟ್ಟು, ಒಮ್ಮತವನ್ನು ಇಲ್ಲಿನ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಕಾಣಬಹುದು. ಸಂಸ್ಥೆಯು ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ ಎಂದು ನುಡಿದು ಶುಭಹಾರೈಸಿದರು.

ಕರ್ನಾಟಕ ಸಂಘ ತಿಲಕ್‌ ನಗರ ಚೆಂಬೂರು ಮಾಜಿ ಅಧ್ಯಕ್ಷ ನ್ಯಾಯವಾದಿ ನಿತ್ಯಾನಂದ ಶೆಟ್ಟಿ ಅವರು ಮಾತನಾಡಿ, ನಮ್ಮಲ್ಲಿ ಮಾಡುವ ಛಲವಿದ್ದರೆ ಏನನ್ನೂ ಸಾಧಿಸಬಹುದು ಎಂಬುವುದಕ್ಕೆ ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಇಂದಿನ ಕಾರ್ಯಕ್ರಮವೇ ನಿದರ್ಶನವಾಗಿದೆ. ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಒಂದೇ ಪರಿವಾರದವರೆಂಬಂತೆ ಕೆಲಸ ಮಾಡುವುದನ್ನು ನೋಡಿ ಸಂತೋಷವಾಗುತ್ತಿದೆ. ಸಂಸ್ಥೆಯ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿ ಯಶಸ್ಸಿನ ಹಾದಿಯತ್ತ ಸಾಗಲಿ ಎಂದು ನುಡಿದರು.

ಭಾಂಡೂಪ್‌ ಜಿಎಸ್‌ ಶೆಟ್ಟಿ ಇಂಟರ್‌ನ್ಯಾಷನಲ್‌ ಸ್ಕೂಲ್‌ನ ಕಾರ್ಯಾಧ್ಯಕ್ಷ ಶಂಕರ ಶೆಟ್ಟಿ ಅವರು ಮಾತನಾಡಿ, ಥಾಣೆ ಬಂಟ್ಸ್‌ನ ಸ್ಥಾಪಕರಲ್ಲೊಬ್ಬರಾದ ದಿ| ಪ್ರೊ| ಸೀತಾರಾಮ ಶೆಟ್ಟಿ ಅವರ ಹೆಸರಿನಲ್ಲಿ ವೇದಿಕೆಯನ್ನು ನಿರ್ಮಿಸಿ ಕಲಾ ಸಂಭ್ರಮವನ್ನು ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದೆ. ನಿಮ್ಮೆಲ್ಲರ ಉತ್ಸಾಹ, ಪರಿಶ್ರಮ, ಶ್ರದ್ಧೆ ಇತರರಿಗೆ ಮಾದರಿಯಾಗಿರಲಿ ಎಂದು ನುಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ವೇಣುಗೋಪಾಲ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುನಿಲ್‌ ಜೆ. ಶೆಟ್ಟಿ, ಗೌರವ ಕೋಶಾಧಿಕಾರಿ ಭಾಸ್ಕರ ಎನ್‌. ಶೆಟ್ಟಿ, ಜತೆ ಕಾರ್ಯದರ್ಶಿ ಅಶೋಕ್‌ ಎಂ. ಶೆಟ್ಟಿ, ಜತೆ ಕೋಶಾಧಿಕಾರಿ ಚಂದ್ರಶೇಖರ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ರಂಜನ್‌ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಶಕುಂತಳಾ ಶೆಟ್ಟಿ ಉಪಸ್ಥಿತರಿದ್ದರು.
ಸದಸ್ಯೆ ಹೇಮಲತಾ ಬಿ. ಶೆಟ್ಟಿ ಪ್ರಾರ್ಥನೆಗೈದರು. ಬಂಟ ಗೀತೆಯೊಂದಿಗೆ ಸಭಾ ಕಾರ್ಯಕ್ರಮ ಚಾಲನೆಗೊಂಡಿತು. ಉಪಾಧ್ಯಕ್ಷ ವೇಣುಗೋಪಾಲ್‌ ಎಲ್‌. ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯದರ್ಶಿ ಸುನೀಲ್‌ ಜೆ. ಶೆಟ್ಟಿ ಅವರು ಸಂಘದ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಜತೆ ಕೋಶಾಧಿಕಾರಿ ಚಂದ್ರಶೇಖರ್‌ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿ ಅಶೋಕ್‌ ಎಂ. ಶೆಟ್ಟಿ, ಸಾಹಿತ್ಯ ವಿಭಾಗದ ಕಾರ್ಯಾಧ್ಯಕ್ಷ ಡಾ| ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಭಾಸ್ಕರ ಎನ್‌. ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಶಕುಂತಳಾ ಎಸ್‌. ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಅಧ್ಯಕ್ಷ ಕುಶಲ್‌ ಸಿ. ಭಂಡಾರಿ ಮತ್ತು ಪದಾಧಿಕಾರಿಗಳು ಗಣ್ಯರನ್ನು ಗೌರವಿಸಿದರು. ಸಂಪೂರ್ಣ ಸಭಾ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ನಿರೂಪಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ ಅವರು ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಪ್ರಪ್ರಥಮ ಬಾರಿಗೆ ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಪದಾಧಿಕಾರಿಗಳು, ಸದಸ್ಯರು ಮತ್ತು ಸದಸ್ಯರ ಮಕ್ಕಳಿಂದ ಯಕ್ಷಗುರು ಬಾಲಕೃಷ್ಣ ಶೆಟ್ಟಿ ಅಜೆಕಾರು ಅವರ ನಿರ್ದೇಶನದಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತೆ¾ ಯಕ್ಷಗಾನ ಪ್ರದರ್ಶನಗೊಂಡಿತು. 

ಇದೇ ಸಂದರ್ಭದಲ್ಲಿ ನಡೆದ ನೃತ್ಯ ಸ್ಪರ್ಧೆಯ ವಿಜೇತ ತಂಡಗಳಿಗೆ ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸ್ಥಾಪಕರು, ಮಾಜಿ ಅಧ್ಯಕ್ಷರುಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಯಕ್ಷಗಾನದ ಬಗ್ಗೆ  ನನಗೆ ಅಷ್ಟೊಂದು ಅರಿವಿಲ್ಲ. ಆದರೆ ಕಲೆಯ ಬಗ್ಗೆ ನನಗೆ ಅಪಾರ ಅಭಿಮಾನವಿದೆ. ನಮ್ಮಲ್ಲಿ  ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರಗಳು ಮೈಗೂಡಿದ್ದರೆ ಅದಕ್ಕೆ ಕಾರಣ ಯಕ್ಷಗಾನವಾಗಿದೆ. ನನ್ನ ಅಳಿಲ ಸೇವೆಯನ್ನು ಗುರುತಿಸಿ ಸಮ್ಮಾನಿಸಿದ ತಮಗೆಲ್ಲ ರಿಗೂ ಕೃತಜ್ಞತೆಗಳು. ಪ್ರಥಮ ಬಾರಿಗೆ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಯಕ್ಷಗಾನ ಗೆಜ್ಜೆ ಕಟ್ಟಿರುವುದನ್ನು ಕಂಡಾಗ ಬಹಳಷ್ಟು ಹೆಮ್ಮೆಯಾಗುತ್ತಿದೆ. ನಿಮ್ಮ ಕಲಾ ಸೇವೆ ಹೀಗೆಯೆ ಮುಂದುವರಿಯಲಿ. ನನ್ನ ಸಹಕಾರ, ಪ್ರೋತ್ಸಾಹ ಸದಾಯಿದೆ .
ಸುರೇಶ್‌ ಎನ್‌. ಶೆಟ್ಟಿ , ಸಮ್ಮಾನಿತರು

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.