“ಮನೆ ಬಾಗಿಲಿಗೆ ವ್ಯಾಕ್ಸಿನೇಶನ್‌’ ಬಿಎಂಸಿ ಅಭಿಯಾನಕ್ಕೆ ಹಲವು ಸವಾಲುಗಳು

Team Udayavani, Jul 8, 2021, 12:55 PM IST

Vaccination

ಮುಂಬಯಿ: ಮನಪಾ ಆಡಳಿತವು ಹಾಸಿಗೆ ಹಿಡಿದಿರುವ ರೋಗಿಗಳು, ಹಿರಿಯ ನಾಗರಿಕರು ಅಥವಾ ಅಂಗವಿಕಲರ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಾರಂಭಿಸಿದೆ. ಮನೆಗಳಿಂದ ಹೊರಬರಲಾಗದ ನಾಗರಿಕರಿಗೆ ಲಸಿಕೆ ಹಾಕಲು ನಿರ್ಧರಿಸಿದ್ದು, ಬಿಎಂಸಿ ಅದಕ್ಕೆ ಸಿದ್ಧತೆ ನಡೆಸುತ್ತಿದೆ. ಆದರೂ ನಿಜವಾದ ಅನುಷ್ಠಾನವು ರಾಜ್ಯ ಸರಕಾರದ ಅನುಮೋದನೆ ಬಳಿಕವೇ ನಡೆಯಲಿದೆ.

ಸಂಚರಿಸಲು ಸಾಧ್ಯವಾಗದ ಅಥವಾ ತಿಂಗಳುಗಟ್ಟಲೆ ಮಲಗಿದ್ದಲ್ಲೇ ಇರುವವರಿಗೆ ಮನೆಯಲ್ಲಿ  ಲಸಿಕೆ ನೀಡಬಹುದೇ ಎಂದು ರಾಜ್ಯ ಸರಕಾರ ಚಿಂತನೆ ನಡೆಸುತ್ತಿತ್ತು. ಅದರಂತೆ ಇತ್ತೀಚೆಗೆ ಪುಣೆಯಲ್ಲಿ  ಮನೆ ಬಾಗಿಲಿಗೆ ವ್ಯಾಕ್ಸಿನೇಶನ್‌ ಅನ್ನು ಪ್ರಾಯೋಗಿಕ ಆಧಾರದ ಮೇಲೆ ಪರಿಚಯಿಸಲಾಗಿದೆ. ಸದ್ಯದಲ್ಲಿಯೇ ಮನೆಗೆ ಹೋಗಿ ದೀರ್ಘ‌ಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಲಸಿಕೆ ಹಾಕಲು ಬಿಎಂಸಿ ಆರೋಗ್ಯ ಇಲಾಖೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಮುಂಬಯಿಯಲ್ಲಿ ಪ್ರಸ್ತುತ ಅಂತಹ ರೋಗಿಗಳ ಸಂಖ್ಯೆ ಮಾಹಿತಿ ಇಲ್ಲ. ಆದ್ದರಿಂದ ಈ ರೋಗಿಗಳ ಮಾಹಿತಿಯನ್ನು ಸಂಗ್ರಹಿಸಲು ಬಿಎಂಸಿ ನಿರ್ಧರಿಸಿದೆ.

ಆರೋಗ್ಯ ಕಾರ್ಯಕರ್ತರ ಸಹಕಾರ

ಹಾಸಿಗೆ ಹಿಡಿದ ರೋಗಿಗಳಿಂದ ಅಥವಾ ವೈದ್ಯರಿಂದ ಮಾಹಿತಿಯನ್ನು ಪಡೆಯಲಾಗುತ್ತಿದೆ. ಇದಕ್ಕಾಗಿ ಆರೋಗ್ಯ ಕಾರ್ಯಕರ್ತರ ಸಹಾಯವನ್ನು ತೆಗೆದುಕೊಳ್ಳ ಲಾಗು ವುದು. ಆರೋಗ್ಯ ಕಾರ್ಯಕರ್ತರು ನಾಗರಿಕರೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿರುವು ದರಿಂದ ರೋಗಿಗಳು ಎಲ್ಲಿದ್ದಾರೆ ಮತ್ತು ಯಾರೆಂದು ಅವರಿಗೆ ತಿಳಿದಿದೆ. ಈ ಮಾಹಿತಿಯನ್ನು ಅವರಿಂದ ತೆಗೆದುಕೊಳ್ಳಲಾಗುವುದು.  ಮಾಹಿತಿ ಪಡೆಯಲು  ವ್ಯವಸ್ಥೆ  ಮಾಡಲಾಗುವುದು ಎಂದು ಬಿಎಂಸಿ ಅಧಿಕಾರಿ ಗಳು ತಿಳಿಸಿದ್ದಾರೆ.

ರಾಜ್ಯ ಸರಕಾರದ ನಿಯಮದ ಬಳಿಕ ಚಾಲನೆ

ಮಾಹಿತಿಯನ್ನು ಸಂಗ್ರಹಿಸಿದ ಬಳಿಕ ಎಷ್ಟು ರೋಗಿಗಳು ಮತ್ತು ಅವರು ಎಲ್ಲಿದ್ದಾರೆ ಎಂದು ಅಂದಾಜು ಮಾಡಲು ಸಾಧ್ಯವಾಗುತ್ತದೆ. ಆ ಆಧಾರದ ಮೇಲೆ ಯೋಜನೆ ಮಾಡಬಹುದು. ಅಲ್ಲಿಯವರೆಗೆ ರಾಜ್ಯ ಸರಕಾರದ ನಿಯಮಗಳು ಜಾರಿಗೆ ಬಂದ ಬಳಿಕವೇ ಗೃಹಾಧಾರಿತ ವ್ಯಾಕ್ಸಿನೇಶನ್‌ ಜಾರಿಗೆ ತರಲು ಸಾಧ್ಯವಾಗುತ್ತದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ಹೇಳಿದರು.

ಆರೋಗ್ಯ ಕಾರ್ಯಕರ್ತರ ಮೇಲೆ ಒತ್ತಡ

ಈ ಮಧ್ಯೆ ಮನೆ ಮನೆಗೆ ವ್ಯಾಕ್ಸಿನೇಶನ್‌ ಅಭಿಯಾನಕ್ಕೆ ಸವಾಲುಗಳು ಎದುರಾಗುವ ಸಾಧ್ಯತೆಯಿದೆ. ಆದ್ದರಿಂದ ಬಿಎಂಸಿ ಅಭಿಯಾನದ ಯಶಸ್ಸಿಗೆ ಎಚ್ಚರಿಕೆಯಿಂದ ತಯಾರಿ ನಡೆಸುತ್ತಿದೆ.

ರೋಗಿಯ ಮನೆಗೆ ಹೋಗಿ ಲಸಿಕೆ ನೀಡಲು ಲಸಿಕೆ ತೆರೆದರೆ ಉಳಿದ ಒಂಬತ್ತು ಡೋಸ್‌ ಅನ್ನು ಹೇಗೆ ಯೋಜಿಸುವುದು ಎಂಬ ಪ್ರಶ್ನೆ ಉದ್ಭವಿಸಿದೆ. ವ್ಯಾಕ್ಸಿನೇಶನ್‌ ಬಳಿಕ ರೋಗಿಯು ಅರ್ಧ ಗಂಟೆಯವರೆಗೆ ಕಾಯಬೇಕಾಗಿರುವುದು ಇದಕ್ಕೆ ಕಾರಣವಾಗಿದೆ. ಅಲ್ಲದೆ ಲಸಿಕೆಯನ್ನು ಮನೆಯಲ್ಲಿಯೇ ನೀಡಿದರೆ ಆರೋಗ್ಯ ಕಾರ್ಯಕರ್ತರ ಮೇಲೆ ಒತ್ತಡ ಹೇರುವ ಮೂಲಕ ಇದನ್ನು ಹೆಚ್ಚಾಗಿ ದುರುಪಯೋಗಪಡಿಸಿಕೊಳ್ಳಬಹುದು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.