Udayavni Special

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: 19ನೇ ವಾರ್ಷಿಕ ಶ್ರೀ ಅಯ್ಯಪ ಮಹಾಪೂಜೆ


Team Udayavani, Dec 25, 2020, 12:39 PM IST

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: 19ನೇ ವಾರ್ಷಿಕ ಶ್ರೀ ಅಯ್ಯಪ ಮಹಾಪೂಜೆ

ಮುಂಬಯಿ, ಡಿ. 24: ವಸಾಯಿ ಪಶ್ಚಿಮದ ಶ್ರೀ ಮಣಿಕಂಠ ಸೇವಾ ಸಮಿತಿಯ 19ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಡಿ. 20ರಂದು ವಸಾಯಿ ಪಶ್ಚಿಮದ ಅರ್ನ ಬ್ಯಾಂಕ್ವೆಟ್‌ ಸಭಾಗೃಹದಲ್ಲಿ ನಡೆಯಿತು.

ಸಮಿತಿಯ ಗೌರವ ಕಾರ್ಯಾಧ್ಯಕ್ಷ ಕರ್ನೂರು ಶಂಕರ ಆಳ್ವ ಅವರ ಮಾರ್ಗದರ್ಶನದಲ್ಲಿ, ಅಧ್ಯಕ್ಷ ಯಶೋಧರ ಕೋಟ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ಗುರುಸ್ವಾಮಿ ಜಯಶೀಲ ತಿಂಗಳಾಯ  ನೆರವೇರಿಸಿದರು. ಪ್ರತೀ ವರ್ಷವೂ ವಸಾಯಿ ಪಶ್ಚಿಮದ ಸಾಯಿ ನಗರ ಗ್ರೌಂಡ್‌ನ‌ಲ್ಲಿ ಅತೀ ವಿಜೃಂಭಣೆಯಿಂದ ದಿನವಿಡೀ ವಿಶೇಷ ಕಾರ್ಯಕ್ರಮಗಳೊಂದಿಗೆ ಜರಗುತ್ತಿದ್ದ ಧಾರ್ಮಿಕ ಕಾರ್ಯಕ್ರಮವು ಈ ವರ್ಷ ಕೋವಿಡ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರಳ ರೀತಿಯಲ್ಲಿ ಆಚರಿಸಲಾಯಿತು.

ಮಧ್ಯಾಹ್ನ ವಸಾಯಿ-ವಿರಾರ್‌ ಪರಿಸರದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪರಿಸರದ ದಾನಿಗಳು, ಸಮಿತಿಯ ಹಿತೈಷಿಗಳ ಸಮಕ್ಷಮದಲ್ಲಿ ವಿಶೇಷವಾಗಿ ಅಲಂಕೃತಗೊಂಡ ಕಲಿಯುಗದ ವರದ ಶ್ರೀ ಅಯ್ಯಪ್ಪ ಸ್ವಾಮಿ, ಜಗನ್ಮಾತೆ ಶ್ರೀ ದುರ್ಗಾಪರಮೇಶ್ವರೀ, ವಿಘ್ನವಿನಾಯಕ ಮತ್ತು ಷಣ್ಮುಖ ದೇವರಿಗೆ ಮಹಾಮಂಗಳಾರತಿ ನಡೆಯಿತು. ಬಳಿಕ ಲೋಕಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಮುಕ್ತಗೊಂಡು ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷ ಕರ್ನೂರು ಶಂಕರ ಆಳ್ವ ಮಾತನಾಡಿ, ಕಳೆದ 19 ವರ್ಷಗಳಿಂದ ವಸಾಯಿ ಪರಿಸರದಲ್ಲಿ ವಿಜೃಂಭಣೆಯಿಂದ ಜರಗುತ್ತಿದ್ದ ಮಣಿಕಂಠ ಸೇವಾ ಸಮಿತಿಯ ವಾರ್ಷಿಕ ಮಹಾಪೂಜೆ ಪ್ರಸ್ತುತ ವರ್ಷ ಕೋವಿಡ್‌ ಮಹಾಮಾರಿಯಿಂದಾಗಿ ಪೂಜೆಯನ್ನು ಅದ್ದೂರಿಯಿಂದ ನಡೆಸಲು ಅನಾನುಕೂಲವಾದರೂ ವರ್ಷಂಪ್ರತಿ ಜರಗುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಡಚಣೆಯಾಗಬಾರದೆಂದು ಸಮಿತಿಯವರೆಲ್ಲ ಸೇರಿ ಸುಮಾರು 250-300 ಭಕ್ತರಿಗೆ ಅವಕಾಶ ನೀಡಿ ಕಾರ್ಯಕ್ರಮವನ್ನು ನಡೆಸಿದ್ದೇವೆ ಎಂದು ತಿಳಿಸಿ, ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಕರ್ನೂರು ಶಂಕರ ಆಳ್ವ ಮಾತನಾಡಿ, ಕಾರ್ಯಕ್ರಮಕ್ಕೆ ಅರ್ನ ಬ್ಯಾಂಕ್ವೆಟ್‌ನ  ಮಾಲಕ ಕರುಣಾಕರ ಅಮೀನ್‌,  ದಯಾನಂದ ಪೂಜಾರಿ ಹಾಗೂ ವೈಯಕ್ತಿಕವಾಗಿ ನಾನು ಇಂದಿನ ಸಭಾ ಗೃಹವನ್ನು ಉಚಿತವಾಗಿ ನೀಡಿ ಸಹಕರಿಸಿ ದ್ದೇವೆ. ಸಮಿತಿಯ ಅಧ್ಯಕ್ಷ ಯಶೋಧರ ಕೋಟ್ಯಾನ್‌, ಉಪಾಧ್ಯಕ್ಷ ದಿನೇಶ್‌ ಎಕ್ಕಾರು, ಕಾರ್ಯದರ್ಶಿ ನಿತ್ಯಾನಂದ ಕೋಟ್ಯಾನ್‌, ಕೋಶಾಧಿಕಾರಿ ಹೇಮಂತ್‌ ಪಾರೇಖ್‌, ಸುಧೀರ್‌ ಸಾಲ್ಯಾನ್‌, ನಾಗರಾಜ ಶೆಟ್ಟಿ, ಅಶೋಕ್‌ ಶೆಟ್ಟಿ, ದೇವೇಂದ್ರ ಬುನ್ನನ್‌ ಮಹಾಪೂಜೆಗೆ ವಿಶೇಷವಾಗಿ ಸಹಕಾರ ನೀಡಿದ್ದು, ಅವರೆಲ್ಲರನ್ನು ಈ ಸಂದರ್ಭ ಅಭಿನಂದಿಸುತ್ತಿದ್ದೇನೆ. ಸಮಿತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದು ತಿಳಿಸಿದರು.

ಭಜನ ಕಾರ್ಯಕ್ರಮದಲ್ಲಿ ಸಹಕರಿಸಿದ ಗುರುರಾಜ ಮಾನವ ಜಾಗೃತಿ ಬಳಗ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮೀರಾರೋಡ್‌ ಇದರ ಸದಸ್ಯರಿಗೆ, ಪೂಜಾ ವಿಧಿವಿಧಾನವನ್ನು ನೆರವೇರಿಸಿದ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ಮೀರಾ-ಡಹಾಣೂ ಬಂಟ್ಸ್‌ನ ಗೌರವಾಧ್ಯಕ್ಷ ಡಾ| ವಿರಾರ್‌  ಶಂಕರ್‌ ಶೆಟ್ಟಿ, ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷ ಪಾಂಡು ಎಲ್‌. ಶೆಟ್ಟಿ, ಶ್ರೀ ದೇವಿ ಯಕ್ಷಕಲಾ ನಿಲಯದ ಅಧ್ಯಕ್ಷ ಶಶಿಧರ ಶೆಟ್ಟಿ, ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಸಾದ ಸ್ವೀಕರಿಸಿದರು.

 

ಚಿತ್ರ-ವರದಿ: ರಮೇಶ್‌ ಉದ್ಯಾವರ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Will make state free from bullets, agitations and floods in five years: Amit Shah in Assam

ಬಿಜೆಪಿ ಇನ್ನೂ 5 ವರ್ಷ ಅಧಿಕಾರಕ್ಕೆ ಬಂದರೇ, ಅಸ್ಸಾಂ ಭದ್ರವಾಗುತ್ತದೆ : ಶಾ

ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್

ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

ಕಾರು – ಬೊಲೆರೋ ಜೀಪ್ ನಡುವೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ

ಕಾರು – ಬೊಲೆರೋ ನಡುವೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ

ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸಾವು

ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಅಕ್ರಮ ಗಣಿಗಾರಿಕೆ ಆರಂಭವಾಗಿದ್ದೇ ಸಿದ್ದರಾಮಯ್ಯ ಕಾಲದಲ್ಲಿ : ಕಟೀಲ್

ಅಕ್ರಮ ಗಣಿಗಾರಿಕೆ ಆರಂಭವಾಗಿದ್ದೇ ಸಿದ್ದರಾಮಯ್ಯ ಕಾಲದಲ್ಲಿ : ಕಟೀಲ್

ಇತರ ಆಟಗಾರರ ಸಹಕಾರದಿಂದ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಯಿತು: ನಟರಾಜನ್

ಇತರ ಆಟಗಾರರ ಸಹಕಾರದಿಂದ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಯಿತು: ನಟರಾಜನ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ghatkopar Shri Bhawani Saneeswara Temple

ಘಾಟ್‌ಕೋಪರ್‌ ಶ್ರೀ ಭವಾನಿ ಶನೀಶ್ವರ ದೇವಸ್ಥಾನ: ವಾರ್ಷಿಕ ಮಹಾಪೂಜೆ

Annual Founder’s Day

ಇಂದು 89ನೇ ವಾರ್ಷಿಕ ಸಂಸ್ಥಾಪನ ದಿನಾಚರಣೆ

Nandita Kotyan  selected as a vice president

ಉಪಾಧ್ಯಕೆಯಾಗಿ  ನಂದಿತಾ ಕೋಟ್ಯಾನ್‌ ಬೆಳ್ಮಣ್ ಆಯ್ಕೆ

Madhva Navami festival celebration

ಮಧ್ವ ನವಮಿ ಉತ್ಸವ ಆಚರಣೆ

Mumbai  Babu Shiva Poojary selected as an presiden

ಅಧ್ಯಕರಾಗಿ ಮುಂಬಯಿ ಸಾಹಿತಿ  ಬಾಬು ಶಿವ ಪೂಜಾರಿ ಆಯ್ಕೆ

MUST WATCH

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

udayavani youtube

ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ

udayavani youtube

ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,

ಹೊಸ ಸೇರ್ಪಡೆ

Will make state free from bullets, agitations and floods in five years: Amit Shah in Assam

ಬಿಜೆಪಿ ಇನ್ನೂ 5 ವರ್ಷ ಅಧಿಕಾರಕ್ಕೆ ಬಂದರೇ, ಅಸ್ಸಾಂ ಭದ್ರವಾಗುತ್ತದೆ : ಶಾ

ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್

ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

Shivamogga

ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ ಅಪಾರ

Cm In Shvamogga

ಹುಣಸೋಡು ಸ್ಫೋಟ: ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.