ಜಾಗತಿಕ ದೌರ್ಬಲ್ಯ, ರೂಪಾಯಿ ಕುಸಿತ: ಸೆನ್ಸೆಕ್ಸ್ 336 ಅಂಕ ನಷ್ಟ
Team Udayavani, Mar 25, 2019, 11:11 AM IST
ಮುಂಬಯಿ : ಜಾಗತಿಕ ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ದೌರ್ಬಲ್ಯ ಮತ್ತು ಡಾಲರ್ ಎದುರು ರೂಪಾಯಿಯ ಹಿನ್ನಡೆಯೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 325ಕ್ಕೂ ಹೆಚ್ಚು ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಕಳೆದ ಶುಕ್ರವಾರ ಸೆನ್ಸೆಕ್ಸ್ 222.14 ಅಂಕಗಳ ನಷ್ಟವನ್ನು ಅನುಭವಿಸಿತ್ತು. ಇಂದು ಸೋಮವಾರ ಬೆಳಗ್ಗೆ 11.10ರ ಸುಮಾರಿಗೆ ಸೆನ್ಸೆಕ್ಸ್ 336.78 ಅಂಕಗಳ ನಷ್ಟದೊಂದಿಗೆ 37,827.83 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 100 ಅಂಗಳ ನಷ್ಟದೊಂದಿಗೆ 11,356.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 16 ಪೈಸೆಗಳ ನಷ್ಟಕ್ಕೆ ಗುರಿಯಾಗಿ 69.11 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಸೆನ್ಸೆಕ್ಸ್ ವಹಿವಾಟಿನಲ್ಲಿ ಇಂದು ಬೆಳಗ್ಗೆ ಎಚ್ ಡಿ ಎಫ್ ಸಿ, ಇನ್ಫೋಸಿಸ್, ಎಚ್ ಡಿ ಎಫ್ ಸಿ ಬ್ಯಾಂಕ್, ಟಿಸಿಎಸ್ ಮತ್ತು ಮಾರುತಿ ಸುಜುಕಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್