ಮಳೆ ನುಂಗಿದ 4ನೇ ಏಕದಿನ ಪಂದ್ಯ ಇಂದು

ಭಾರತ-ಶ್ರೀಲಂಕಾ 'ಎ' ಏಕದಿನ ಸರಣಿ

Team Udayavani, Jun 14, 2019, 1:15 PM IST

HUBALI-TDY-3..

ಅನ್ಮೋಲ್ಪ್ರೀತ್‌ ಸಿಂಗ್‌

ಹುಬ್ಬಳ್ಳಿ: ಭಾರತ ‘ಎ’ ಹಾಗೂ ಶ್ರೀಲಂಕಾ ‘ಎ’ ತಂಡಗಳ ಮಧ್ಯದ 5 ಪಂದ್ಯಗಳ ಏಕದಿನ ಸರಣಿಯ 4ನೇ ಕ್ರಿಕೆಟ್ ಪಂದ್ಯ ಗುರುವಾರ ಮಳೆಯಿಂದ ರದ್ದಾಗಿದ್ದು, ಶುಕ್ರವಾರ ಮತ್ತೂಮ್ಮೆ ಪಂದ್ಯ ಜರುಗಲಿದೆ. ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಗುರುವಾರದ ಪಂದ್ಯವನ್ನು ಮತ್ತೂಮ್ಮೆ ಆಡಿಸಲು ಉಭಯ ದೇಶಗಳ ಕ್ರಿಕೆಟ್ ಮಂಡಳಿಗಳು ಸಮ್ಮತಿಸಿವೆ.

ಮೂರು ಬಾರಿ ಮಳೆಯಿಂದ ಪಂದ್ಯ ಸ್ಥಗಿತಗೊಳಿಸಬೇಕಾಯಿತು. ಮಳೆಯಿಂದಾಗಿ ಪಂದ್ಯ ಮಧ್ಯಾಹ್ನ 1:15ಕ್ಕೆ ಆರಂಭಗೊಂಡಿತು. 24 ಓವರ್‌ಗಳ ಪಂದ್ಯವಾಡಿಸಲು ನಿರ್ಧರಿಸಲಾಗಿತ್ತು. ಮೊದಲು ಬ್ಯಾಟ್ ಮಾಡಿದ ಭಾರತದ 20 ಓವರ್‌ಗಳ ಆಟದ ನಂತರ ಮತ್ತೆ ಮಳೆ ಸುರಿದಿದ್ದರಿಂದ 22 ಓವರ್‌ಗೆ ಸೀಮಿತಗೊಳಿಸಲಾಯಿತು. ಭಾರತ 4 ವಿಕೆಟ್ ಕಳೆದುಕೊಂಡು 208 ರನ್‌ ದಾಖಲಿಸಿತು. ಡಕ್‌ವರ್ತ್‌ ಲೂಯಿಸ್‌ ನಿಯಮದಂತೆ ಶ್ರೀಲಂಕಾಕ್ಕೆ 22 ಓವರ್‌ಗಳಲ್ಲಿ 219 ರನ್‌ ಗುರಿ ನೀಡಲಾಯಿತು. 2ನೇ ಓವರ್‌ನಲ್ಲಿ ಶ್ರೀಲಂಕಾ ತಂಡ 1 ವಿಕೆಟ್ ನಷ್ಟಕ್ಕೆ 10 ರನ್‌ ಗಳಿಸಿದ್ದ ಸಂದರ್ಭದಲ್ಲಿ ಮತ್ತೆ ರಭಸದ ಮಳೆ ಸುರಿಯಲಾರಂಭಿಸಿತು. ಸ್ಥಿತಿಯನ್ನು ಪರಿಗಣಿಸಿ ಪಂದ್ಯವನ್ನು ರದ್ದುಪಡಿಸಲಾಯಿತು.

ಭಾರತ ಉತ್ತಮ ಮೊತ್ತ: ಋತುರಾಜ ಗಾಯಕ್ವಾಡ್‌ (84) ಹಾಗೂ ಅನ್ಮೋಲ್ಪ್ರೀತ್‌ ಸಿಂಗ್‌ (85*) ಅರ್ಧ ಶತಕಗಳ ನೆರವಿನಿಂದ ಭಾರತ ತಂಡ ಉತ್ತಮ ಸ್ಕೋರ್‌ ದಾಖಲಿಸಿತು. ಋತುರಾಜ ಗಾಯಕ್ವಾಡ್‌ ಹಾಗೂ ಶುಭಂ ಗಿಲ್ ಇನಿಂಗ್ಸ್‌ ಆರಂಭಿಸಿದರಾದರೂ ಶುಭಂ ಗಿಲ್ (19) ನಿರ್ಗಮನದ ನಂತರ ಅನ್ಮೋಲ್ಪ್ರೀತ್‌ ಸಿಂಗ್‌ ಹಾಗೂ ಗಾಯಕ್ವಾಡ್‌ ನಿಧಾನ ಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಿದರು. 14ನೇ ಓವರ್‌ನಲ್ಲಿ ತಂಡ 100 ರನ್‌ ದಾಖಲಿಸಿತು.

18ನೇ ಓವರ್‌ನಲ್ಲಿ ತಂಡದ ಮೊತ್ತ 150 ದಾಟಿದರೆ, 19ನೇ ಓವರ್‌ನಲ್ಲಿ ಗಾಯಕ್ವಾಡ್‌-ಸಿಂಗ್‌ ಜೊತೆಯಾಟದಲ್ಲಿ 100 ರನ್‌ ಪೇರಿಸಿದರು. 20ನೇ ಓವರ್‌ನಲ್ಲಿ ತಂಡ 177 ರನ್‌ ದಾಖಲಿಸಿದ ಸಂದರ್ಭದಲ್ಲಿ ಮಳೆ ಬೀಳಲಾರಂಭವಾಯಿತು. 16 ನಿಮಿಷಗಳ ನಂತರ ಮಧ್ಯಾಹ್ನ 3 ಗಂಟೆಗೆ ಮತ್ತೆ ಆರಂಭಗೊಂಡಿದ್ದರಿಂದ ಪಂದ್ಯವನ್ನು 22 ಓವರ್‌ಗಳಿಗೆ ನಿಗದಿ ಮಾಡಲಾಯಿತು. ನಾಯಕ ಇಶಾನ್‌ ಕಿಶನ್‌ (0) ಬಂದಷ್ಟೇ ವೇಗದಲ್ಲಿ ನಿರ್ಗಮಿಸಿದರು. ಅಂತಿಮವಾಗಿ ಭಾರತ 22 ಓವರ್‌ಗಳಲ್ಲಿ 4 ವಿಕೆಟ್‌ಗೆ 208 ರನ್‌ ಗಳಿಸಿತು.

ಡಕ್‌ವರ್ತ್‌ ಲೂಯಿಸ್‌ ನಿಯಮದಂತೆ 22 ಓವರ್‌ಗಳಲ್ಲಿ 219 ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ ಮೊದಲ ಓವರ್‌ನಲ್ಲಿಯೇ ನಿರೋಶನ್‌ ಡಿಕ್ವೆಲ್ಲಾ ವಿಕೆಟ್ ಕಳೆದುಕೊಂಡಿತು. 2ನೇ ಓವರ್‌ನಲ್ಲಿ 1 ವಿಕೆಟ್ ನಷ್ಟಕ್ಕೆ 10 ರನ್‌ ಗಳಿಸಿದ್ದ ಸಂದರ್ಭದಲ್ಲಿ ಮತ್ತೆ ರಭಸದ ಮಳೆ ಸುರಿಯಲಾರಂಭಿಸಿದ ಕಾರಣ ಪಂದ್ಯ ರದ್ದುಪಡಿಸಲಾಯಿತು. ಟೆಸ್ಟ್‌ ಸರಣಿಯನ್ನು ಭಾರತ ಜಯಿಸಿದ್ದು, 5 ಪಂದ್ಯಗಳ ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಈಗಾಗಲೇ ಭಾರತ 2-1ರಿಂದ ಮುನ್ನಡೆ ಪಡೆದುಕೊಂಡಿದೆ. ಶುಕ್ರವಾರ ಹಾಗೂ ಶನಿವಾರ ಸತತ 2 ಏಕದಿನ ಪಂದ್ಯಗಳು ನಡೆಯಲಿವೆ.

•ವಿಶ್ವನಾಥ ಕೋಟಿ

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.