ವೆಲ್ಲಿಂಗ್ಟನ್ ಕದನಕ್ಕೆ ಸಜ್ಜಾದ ವಿರಾಟ್ ಪಡೆ: ವಿಲಿಯಮ್ಸನ್ ಇಲ್ಲದೆ ಆಡಲಿದೆ ಕಿವೀಸ್
Team Udayavani, Jan 31, 2020, 12:02 PM IST
ವೆಲ್ಲಿಂಗ್ಟನ್: ಭಾರತ- ನ್ಯೂಜಿಲ್ಯಾಂಡ್ ಟಿ20 ಸರಣಿಯ ನಾಲ್ಕನೇ ಪಂದ್ಯ ವೆಲ್ಲಿಂಗ್ಟನ್ ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಕಿವೀಸ್ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ಮಾಡಿದೆ.
ಸರಣಿಯ ಆರಂಭದ ಮೊದಲ ಮೂರು ಪಂದ್ಯಗಳನ್ನು ಗೆದ್ದಿರುವ ವಿರಾಟ್ ಪಡೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ. ಅದೇ ರೀತಿ ಸರಣಿ ಸೋತರೂ ಮುಂದಿನೆರಡು ಪಂದ್ಯ ಗೆದ್ದು ಮಾನ ಉಳಿಸಿಕೊಳ್ಳುವ ಪ್ರಯತ್ನದಲ್ಲಿದೆ.
ಆದರೆ ಕಿವೀಸ್ ಆಘಾತ ಎದುರಿಗಿದ್ದು, ನಾಯಕ ಕೇನ್ ವಿಲಿಯಮ್ಸನ್ ಭುಜ ನೋವಿಗೆ ಒಳಗಾಗಿ ಪಂದ್ಯಕ್ಕೆ ಲಭ್ಯರಾಗಿಲ್ಲ. ಇಂದು ಅವರ ಬದಲು ಟಿಮ್ ಸೌಥಿ ನಾಯಕತ್ವ ವಹಿಸಲಿದ್ದಾರೆ.
ಭಾರತದ ತಂಡದಲ್ಲಿ ಇಂದು ಮೂರು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದ ಹೀರೋಗಳಾದ ರೋಹಿತ್ ಶರ್ಮಾ ಮತ್ತು ಮೊಹಮ್ಮದ್ ಶಮಿಗೆ ರೆಸ್ಟ್ ನೀಡಲಾಗಿದೆ. ಇದರೊಂದಿಗೆ ಆಲ್ ರೌಂಡರ್ ಜಡೇಜಾಗೆ ವಿಶ್ರಾಂತಿ ನೀಡಲಾಗಿದೆ.
ಇವರ ಬದಲಿಗೆ ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್ ಮತ್ತು ನವದೀಪ್ ಸೈನಿಗೆ ಅವಕಾಶ ನೀಡಲಾಗಿದೆ. ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.
ಭಾರತ: ಸಂಜು ಸ್ಯಾಮ್ಸನ್ , ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ಬುಮ್ರಾ, ಚಹಲ್.
ನ್ಯೂಜಿಲ್ಯಾಂಡ್: ಮಾರ್ಟಿನ್ ಗಪ್ಟಿಲ್, ಕಾಲಿನ್ ಮುನ್ರೊ, ರಾಸ್ ಟೇಲರ್, ಡ್ಯಾರಿಲ್ ಮಿಚೆಲ್, ಟಿಮ್ ಸೀಫರ್ಟ್, ಸ್ಕಾಟ್ ಕ್ಯುಗೆಲಿನ್, ಮಿಚೆಲ್ ಸ್ಯಾಂಟ್ನರ್, ಐಶ್ ಸೋಧಿ, ಹಾಮಿಶ್ ಬೆನೆಟ್, ಟಿಮ್ ಸೌಥಿ, ಟಾಮ್ ಬ್ರೂಸ್ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ