ಕ್ರಿಕೆಟ್‌ ಆಯ್ಕೆ ಸಮಿತಿಗೆ ಮಾಜಿಗಳ ರೇಸ್‌

ಅಜಿತ್‌ ಅಗರ್ಕರ್‌, ಮಣಿಂದರ್‌ ಸಿಂಗ್‌, ಚೇತನ್‌ ಶರ್ಮ, ಶಿವಸುಂದರ್‌ ದಾಸ್‌ ಅರ್ಜಿ

Team Udayavani, Nov 15, 2020, 10:11 PM IST

ಕ್ರಿಕೆಟ್‌ ಆಯ್ಕೆ ಸಮಿತಿಗೆ ಮಾಜಿಗಳ ರೇಸ್‌

ಹೊಸದಿಲ್ಲಿ: ಭಾರತೀಯ ರಾಷ್ಟ್ರೀಯ ಆಯ್ಕೆ ಸಮಿತಿಯ ಖಾಲಿ ಉಳಿದಿರುವ 3 ಸ್ಥಾನಗಳಿಗಾಗಿ ಬಿಸಿಸಿಐ ಅರ್ಜಿ ಕರೆದಿದ್ದು, ಇದಕ್ಕೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತದ ಮಾಜಿ ಕ್ರಿಕೆಟಿಗರನೇಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದು, ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಅರ್ಜಿ ಸಲ್ಲಿಸಿದ ಪ್ರಮುಖರೆಂದರೆ ಅಜಿತ್‌ ಅಗರ್ಕರ್‌, ಚೇತನ್‌ ಶರ್ಮ, ಮಣಿಂದರ್‌ ಸಿಂಗ್‌ ಮತ್ತು ಶಿವಸುಂದರ್‌ ದಾಸ್‌. ಇವರಲ್ಲಿ ಚೇತನ್‌ ಶರ್ಮ ಮತ್ತು ಮಣಿಂದರ್‌ ಇಬ್ಬರೂ ಉತ್ತರ ವಲಯದವರಾದ್ದರಿಂದ ಒಬ್ಬರಿಗಷ್ಟೇ ಅವಕಾಶ ಲಭಿಸಲಿದೆ. ಇಬ್ಬರೂ ಭಾರತದ ಪರ ಬಹಳಷ್ಟು ಪಂದ್ಯಗಳನ್ನಾಡಿದ್ದಾರೆ. ಆಯ್ಕೆ ಸಮಿತಿ ಅಧ್ಯಕ್ಷ ಸುನೀಲ್‌ ಜೋಶಿ ಅವರಿಗಿಂತ ಹೆಚ್ಚು ಟೆಸ್ಟ್‌ ಪಂದ್ಯಗಳನ್ನಾಡಿರುವ ಅನುಭವ ಇವರದಾಗಿದೆ. ಉಳಿದಂತೆ ಅಜಿತ್‌ ಅಗರ್ಕರ್‌ ಪಶ್ಚಿಮ ವಲಯ ಹಾಗೂ ದಾಸ್‌ ಪೂರ್ವ ವಲಯದ ಪ್ರತಿನಿಧಿಗಳಾಗಿದ್ದಾರೆ.

ಹ್ಯಾಟ್ರಿಕ್‌ ಹೀರೋ
ಹರ್ಯಾಣದ ಚೇತನ್‌ ಶರ್ಮ ಏಕದಿನ ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸಾಧಿಸಿದ ಭಾರತದ ಮೊದಲ ಬೌಲರ್‌ ಎಂಬ ಹೆಗ್ಗಳಿಕೆ ಹೊಂದಿದ್ದಾರೆ (1987). ಕಪಿಲ್‌, ಗಾವಸ್ಕರ್‌, ವೆಂಗ್‌ಸರ್ಕಾರ್‌ ಮೊದಲಾದವರೊಂದಿಗೆ ಕ್ರಿಕೆಟ್‌ ಆಡಿರುವ ಶರ್ಮ, ಒಟ್ಟು 88 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.

ದಿಲ್ಲಿಯ ಆಫ್ಸ್ಪಿನ್ನರ್‌ ಮಣಿಂದರ್‌ 94 ಅಂತಾರಾಷ್ಟ್ರೀಯ ಪಂದ್ಯಗಳ ಅನುಭವಿ. ಬೇಡಿ ಅವರ ಸಮರ್ಥ ಉತ್ತರಾಧಿಕಾರಿ ಎಂದು ಆ ಕಾಲದಲ್ಲಿ ಗುರುತಿಸಿಕೊಂಡಿದ್ದರು.
ಇವರಿಬ್ಬರ ಅರ್ಜಿ ಬಹಳ ಮಹತ್ವದ್ದಾಗಿದ್ದು, ಉತ್ತರ ವಲಯಕ್ಕೆ ಖಂಡಿತವಾಗಿಯೂ ಗಟ್ಟಿ ಪ್ರಾತಿನಿಧ್ಯ ಲಭಿಸಿದಂತಾಗುತ್ತದೆ ಎಂದು ಬಿಸಿಸಿಐ ಮಾಜಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಳೆದ ಸಲ ಉತ್ತರ ವಲಯವನ್ನು ಪ್ರತಿನಿಧಿಸಿದ್ದ ಶರಣ್‌ದೀಪ್‌ ಸಿಂಗ್‌ ಕೇವಲ 10 ಅಂತಾರಾಷ್ಟ್ರೀಯ ಪಂದ್ಯಗಳನ್ನಷ್ಟೇ ಆಡಿದ್ದರು.

ಆಲ್‌ರೌಂಡರ್‌ ಅಜಿತ್‌ ಅಗರ್ಕರ್‌ 231 ಅಂತಾರಾಷ್ಟ್ರೀಯ ಪಂದ್ಯಗಳ ಧಾರಾಳ ಅನುಭವ ಹೊಂದಿದ್ದಾರೆ. 3 ಏಕದಿನ ವಿಶ್ವಕಪ್‌, ಒಂದು ಟಿ20 ವಿಸ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಹೆಗ್ಗಳಿಕೆ ಇವರದು.

ದಾಸ್‌-ಬೋಸ್‌ ಸ್ಪರ್ಧೆ
ಒಡಿಶಾದ ಶಿವಸುಂದರ್‌ ದಾಸ್‌ ಮಾಜಿ ಆರಂಭಿಕನಾಗಿದ್ದು, 23 ಟೆಸ್ಟ್‌ಗಳಿಂದ 1,326 ರನ್‌ ಬಾರಿಸಿದ್ದಾರೆ. ಬಂಗಾಲದ ಮಾಜಿ ಪೇಸ್‌ ಬೌಲರ್‌ ರಣದೇಬ್‌ ಬೋಸ್‌ ಕೂಡ ಅರ್ಜಿ ಸಲ್ಲಿಸಿದ್ದಾಗಿ ವರದಿಯಾಗಿದೆ. ಆಗ ದಾಸ್‌ ಮತ್ತು ಬೋಸ್‌ ನಡುವೆ ಸ್ಪರ್ಧೆ ಏರ್ಪಡುವುದು ಖಚಿತ.

ಪ್ರಸ್ತುತ ಆಯ್ಕೆ ಸಮಿತಿಯಲ್ಲಿ ದಕ್ಷಿಣ ವಲಯದ ಸುನೀಲ್‌ ಜೋಶಿ ಅವರನ್ನು ಹೊರತುಪಡಿಸಿ ಕಾರ್ಯಪ್ರವೃತ್ತರಾಗಿರುವ ಮತ್ತೋರ್ವ ಸದಸ್ಯನೆಂದರೆ ಮಧ್ಯ ವಲಯದ ಹರ್ವಿಂದರ್‌ ಸಿಂಗ್‌.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

World Giants

ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

dಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.