ಗೋವಾ ಪರ ಆಡಲಿದ್ದಾರೆ ಅರ್ಜುನ್ ತೆಂಡುಲ್ಕರ್
Team Udayavani, Aug 12, 2022, 6:45 AM IST
ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಮುಂಬೈಯನ್ನು ತೊರೆದು ಗೋವಾ ಪರ ದೇಶಿ ಕ್ರಿಕೆಟ್ ಆಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಮುಂಬೈ ಕ್ರಿಕೆಟ್ ಮಂಡಳಿಯ ನಿರಾಕ್ಷೇಪಣಾಪತ್ರದ ನಿರೀಕ್ಷೆಯಲ್ಲಿದ್ದಾರೆ.
22 ವರ್ಷದ ಅರ್ಜುನ್ ತೆಂಡುಲ್ಕರ್ ಎಡಗೈ ಪೇಸ್ ಬೌಲರ್ ಆಗಿದ್ದು, ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಆದರೆ ಕಳೆದ ಋತುವಿನಲ್ಲಿ ಅವರಿಗೆ ಆಡುವ ಅವಕಾಶವೇ ಸಿಕ್ಕಿರಲಿಲ್ಲ. ಅವರಿನ್ನೂ ರಣಜಿ ಪಂದ್ಯವಾಡಿಲ್ಲ.
ಆದರೆ ಮುಂಬೈ ಪರ 2020-21ರಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಎರಡು ಪಂದ್ಯಗಳಲ್ಲಿ ಪಾಲ್ಗೊಂಡಿದ್ದರು. 19 ವಯೋಮಿತಿ ತಂಡದ ಪರ ಶ್ರೀಲಂಕಾ ವಿರುದ್ಧ 2 ಟೆಸ್ಟ್ ಪಂದ್ಯಗಳಲ್ಲೂ ಆಡಿದ್ದರು. ಆದರೆ ಪ್ರಸಕ್ತ ಋತುವಿನಲ್ಲಿ ಮುಂಬೈ ತಂಡದಿಂದ ಕೈಬಿಟ್ಟದ್ದು ಅರ್ಜುನ್ಗೆ ಭಾರೀ ಹಿನ್ನಡೆಯಾಗಿ ಪರಿಣಮಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ