Asia Cup: ಬಾಬರ್,ಇಫ್ತಿಕಾರ್ ಶತಕಗಳ ಅಬ್ಬರ; ನೇಪಾಲ ಗೆಲುವಿಗೆ 343 ಗುರಿ
Team Udayavani, Aug 30, 2023, 7:04 PM IST
ಮುಲ್ತಾನ್ : ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಬುಧವಾರ ನಡೆಯುತ್ತಿರುವ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ಥಾನ ತಂಡ ನೇಪಾಲಕ್ಕೆ ಭರ್ಜರಿ ಮೊತ್ತದ ಸವಾಲು ಎದುರಿಟ್ಟಿದೆ.
ಪಾಕಿಸ್ಥಾನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 25 ರನ್ ಆಗುವಷ್ಟರಲ್ಲಿ ಮೊದಲ 2 ವಿಕೆಟ್ ಕಳೆದುಕೊಂಡಿತು. ಫಖರ್ ಜಮಾನ್ 14, ಇಮಾಮ್-ಉಲ್-ಹಕ್ 5 ರನ್ ಗಳಿಸಿದ್ದ ವೇಳೆ ರನೌಟಾದರು.
ಆಬಳಿಕ ಬಂದ ಏಕದಿನ ಕ್ರಿಕೆಟ್ ನ ನಂಬರ್ ಒನ್ ಬ್ಯಾಟ್ಸ್ ಮ್ಯಾನ್ ಬಾಬರ್ ಅಜಂ ಅಬ್ಬರಿಸಿದರು. ತಾಳ್ಮೆಯ ಆಟವಾಡಿ ಶತಕ ಪೂರ್ತಿಗೊಳಿಸಿದರು.151(131 ಎಸೆತ) ರನ್ ಗಳಿಸಿದ್ದ ವೇಳೆ ಕೊನೆಯಲ್ಲಿ ಔಟಾದರು. ಬಾಬರ್ ರೊಂದಿಗೆ ಉತ್ತಮ ಆಟವಾಡುತ್ತಿದ್ದ ಮೊಹಮ್ಮದ್ ರಿಜ್ವಾನ್ ವಿಲಕ್ಷಣ ರನೌಟ್ (ದೀಪೇಂದ್ರ ಸಿಂಗ್) ಆದರು. ಅವರು 44 ರನ್ ಗಳಿಸಿದ್ದರು. ಆಬಳಿಕ ಬಾಬರ್ ಅವರಿಗೆ ಸಾಥ್ ನೀಡಿದ ಇಫ್ತಿಕಾರ್ ಅಹ್ಮದ್ ಔಟಾಗದೆ 109 ರನ್ ಗಳಿಸಿದರು. ಸ್ಪೋಟಕ ಶತಕ ಸಿಡಿಸಿದ ಅವರು ಒಟ್ಟು 71 ಎಸೆತಗಳಲ್ಲಿ 109 ರನ್ ಗಳಿಸಿದರು. 6 ವಿಕೆಟ್ ನಷ್ಟಕ್ಕೆ 342 ರನ್ ಕಲೆಹಾಕಿ ಭರ್ಜರಿ ಮೊತ್ತವನ್ನು ನೇಪಾಲ ತಂಡದ ಮುಂದಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್