ಏಶ್ಯಾಡ್‌ ದಾಖಲೆಯತ್ತ ವಿಕಾಸ್‌ ಕೃಷ್ಣನ್‌


Team Udayavani, Aug 16, 2018, 6:00 AM IST

14.jpg

ಭಾರತದ ಕುಸ್ತಿಪಟು ವಿಕಾಸ್‌ ಕೃಷ್ಣನ್‌ ಏಶ್ಯನ್‌ ಗೇಮ್ಸ್‌ನಲ್ಲಿ ಭಾಗವಹಿಸಲು ಈಗಾಗಲೇ ಜಕಾರ್ತಾಕ್ಕೆ ತೆರಳಿದ್ದು, ಪದಕ ಗೆಲ್ಲುವುದು ಮಾತ್ರವಲ್ಲದೆ ಹೊಸ ದಾಖಲೆ ಸೃಷ್ಟಿಸಲು ಸಿದ್ಧರಾಗಿದ್ದಾರೆ. 2010ರ ಏಶ್ಯಾಡ್‌ನ‌ಲ್ಲಿ ಚಿನ್ನದ ಪದಕ, 2014ರ ಏಶ್ಯಾಡ್‌ನ‌ಲ್ಲಿ ಕಂಚಿನ ಪದಕ ಗೆದ್ದಿರುವ ವಿಕಾಸ್‌ ಕೃಷ್ಣನ್‌, ಏಶ್ಯನ್‌ ಗೇಮ್ಸ್‌ನಲ್ಲಿ ಸತತ 3 ಪದಕ ಗೆದ್ದ ಭಾರತದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಹಾದಿಯಲ್ಲಿದ್ದಾರೆ. ಒಂದು ವೇಳೆ ವಿಕಾಸ್‌ ಕೃಷ್ಣನ್‌ ಅವರು ಏಶ್ಯನ್‌ ಗೇಮ್ಸ್‌ನಲ್ಲಿ ಪದಕ ಗೆದ್ದರೆ, ಹವಾ ಸಿಂಗ್‌ ಹಾಗೂ ವಿಜೇಂದರ್‌ ಸಿಂಗ್‌ ಅವರ ದಾಖಲೆಯನ್ನು ಮೀರಿ ನಿಲ್ಲಲಿದ್ದಾರೆ.

ಹವಾ ಸಿಂಗ್‌ 1966 ಹಾಗೂ 1970ರ ಏಶ್ಯನ್‌ ಗೇಮ್ಸ್‌ ಕುಸ್ತಿ ಸ್ಪರ್ಧೆಯ ಹೆವಿವೇಟ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಮಿಡ್ಲ್ವೇಟ್‌ ವಿಭಾಗದಲ್ಲಿ ವಿಜೇಂದರ್‌ ಸಿಂಗ್‌ 2006 ದೋಹಾ ಕ್ರೀಡಾಕೂಟದಲ್ಲಿ ಕಂಚಿನ ಪದಕ ಮತ್ತು 2010ರಲ್ಲಿ ಚಿನ್ನಕ್ಕೆ ಕೊರಳೊಡ್ಡಿದ್ದರು. 

“ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿರುವುದರಿಂದ ನನ್ನ ಮೇಲಿರುವ ಎಲ್ಲ ಒತ್ತಡ ನಿವಾರಣೆಯಾಗಿದೆ. ಮನಸ್ಸು ಶಾಂತಚಿತ್ತದಿಂದ ಕೂಡಿದೆ. ನನ್ನ ದೇಹವು ಆರೋಗ್ಯಕರವಾಗಿದೆ. ಕಳೆದ ತಿಂಗಳು ಜರ್ಮನಿಯಲ್ಲಿ ತರಬೇತಿಯ ವೇಳೆ ಜ್ವರದಿಂದ ಬಳಲುತ್ತಿದ್ದೆ. ಈಗ ನಾನು ನೂರು ಪ್ರತಿಶತ ಫಿಟ್‌ ಆಗಿದ್ದೇನೆ’ ಎಂದು ವಿಕಾಸ್‌ ಕೃಷ್ಣನ್‌ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಕಾಸ್‌ 2010ರಲ್ಲಿ ಲೈಟ್‌ವೇಟ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದರೆ, 2014ರಲ್ಲಿ ಮಿಡ್ಲ್ವೇಟ್‌ ವಿಭಾಗದಲ್ಲಿ ಸ್ಪರ್ಧಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದರು. ಏಶ್ಯನ್‌ ಗೇಮ್ಸ್‌ ಕುಸ್ತಿ ಸ್ಪರ್ಧೆ ಆಗಸ್ಟ್‌ 24ರಿಂದ ಆರಂಭವಾಗಲಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.