ಏಷ್ಯನ್‌ ಅಥ್ಲೆಟಿಕ್ಸ್‌: ಸುಧಾ ಸಿಂಗ್‌ಗೆ ಚಿನ್ನ


Team Udayavani, Jul 9, 2017, 3:00 AM IST

Sudha-Singh.jpg

ಭುವನೇಶ್ವರ: ಭಾರತದ ಖ್ಯಾತ ಆ್ಯತ್ಲೀಟ್‌ ಸುಧಾ ಸಿಂಗ್‌ 3,000 ಮೀ. ಸ್ಟೀಪಲ್‌ಚೇಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. 3ನೇ ದಿನ ಭಾರತ ಒಟ್ಟಾರೆ 1 ಚಿನ್ನ, 1 ಬೆಳ್ಳಿ ಹಾಗೂ 4 ಕಂಚಿನ ಪದಕ ಗೆದ್ದುಕೊಂಡಿದೆ. ಒಟ್ಟಾರೆ 16 ಪದಕದೊಂದಿಗೆ ಪದಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.

ಉತ್ತರ ಪ್ರದೇಶದ ಓಟಗಾರ್ತಿ ಸುಧಾ ಸಿಂಗ್‌ 9 ನಿಮಿಷ 59.47 ಸೆಕೆಂಡ್ಸ್‌ಗಳಲ್ಲಿ ಗುರಿ ಮುಟ್ಟುವುದರೊಂದಿಗೆ ಚಿನ್ನದ ನಗು ಬೀರಿದರು. 2009, 2011 ಹಾಗೂ 2013ರಲ್ಲಿ ಇದೇ ಕೂಟದಲ್ಲಿ ಸುಧಾ ಸಿಂಗ್‌ ಕೇವಲ ಬೆಳ್ಳಿ ಪದಕ ಪಡೆಯಲಷ್ಟೇ ಶಕ್ತರಾಗಿದ್ದರು.  ಇದೇ ಮೊದಲ ಬಾರಿಗೆ ಏಶ್ಯನ್‌ ಕೂಟದಲ್ಲಿ ಸುಧಾ ಸಿಂಗ್‌ ಚಿನ್ನ ಗೆದ್ದಿದ್ದಾರೆ.

ರಿಯೋ ಒಲಿಂಪಿಕ್ಸ್‌ ಕೂಟದ ವೇಳೆ ಸುಧಾ ಸಿಂಗ್‌ ಜ್ವರದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡು ತವರಿಗೆ ವಾಪಸ್‌ ಆಗಿದ್ದರು. ಝೀಕಾ ವೈರಸ್‌ ತಾಗಿತ್ತು ಎನ್ನುವ ವರದಿಯೂ ಹಬ್ಬಿತ್ತು. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲ ಎನ್ನುವುದನ್ನು ಆಮೇಲಷ್ಟೇ ವೈದ್ಯರು ಸ್ಪಷ್ಟಪಡಿಸಿದ್ದರು.  ಇದಾದ 5-6 ತಿಂಗಳು ಅಭ್ಯಾಸ ಶಿಬಿರವನ್ನೂ ಕಳೆದುಕೊಂಡಿದ್ದರು. ಆದರೆ ಅದೆಲ್ಲವನ್ನು ಮರೆಸುವಂತಹ ಪ್ರದರ್ಶನ ಈಗ ನೀಡಿರುವುದು ವಿಶೇಷ. ಇದೇ ಕೂಟದಲ್ಲಿ ಲಲಿತಾ ಬಾಬರ್‌ ಸ್ಪರ್ಧಿಸಬೇಕಿತ್ತು. ಆದರೆ ಮದುವೆಯ ಹಿನ್ನಲೆಯಲ್ಲಿ ಏಷ್ಯನ್‌ ಕೂಟದಿಂದ ಬಾಬರ್‌ ಭಾಗವಹಿಸಿರಲಿಲ್ಲ. ಬಾಬರ್‌ ಭಾಗವಹಿಸಿದ್ದರೆ ಚಿನ್ನ ಗೆಲ್ಲುವ ಸಾಧ್ಯತೆ ಇತ್ತು.

ಪುರುಷರ ವಿಭಾಗದ 3 ಸಾವಿರ ಮೀ. ಸ್ಟೀಪಲ್‌ಚೇಸ್‌ನಲ್ಲಿ ನವೀನ್‌ ಕುಮಾರ್‌ ಕಂಚಿನ ಪದಕ ಗೆದ್ದರು. 400 ಮೀ. ಮಹಿಳಾ ಹರ್ಡಲ್ಸ್‌ನಲ್ಲಿ ಕಂಚು, 4/100 ಮೀ. ರಿಲೇನಲ್ಲಿ ಕಂಚು, 400 ಮೀ. ಹರ್ಡಲ್ಸ್‌ನಲ್ಲಿ ಅನು ಆರ್‌. ಬೆಳ್ಳಿ, ಮಹಿಳಾ ತ್ರಿಪಲ್‌ ಜಂಪ್‌ನಲ್ಲಿ ಕಂಚು ಹಾಗೂ ಪುರುಷರ 400 ಮೀ. ಹರ್ಡಲ್ಸ್‌ನಲ್ಲಿ ಕಂಚಿನ ಪದಕವನ್ನು ಭಾರತ ಗೆದ್ದುಕೊಂಡಿತು.

ಇಂದು ರಿಲೇನಲ್ಲಿ 2 ಪದಕ ನಿರೀಕ್ಷೆ
ಭಾರತ ಪುರುಷರ ಹಾಗೂ ಮಹಿಳೆಯರ 4/400 ಮೀ. ರಿಲೇ ತಂಡ ಚಿನ್ನದ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದೆ. ಜತೆಗೆ ಟಿಂಟು ಲುಕಾ ಕೂಡ 800 ಮೀ. ಫೈನಲ್‌ಗೇರಿದ್ದು ಪದಕ ಗೆಲುವಿನ ಭರವಸೆ ಮೂಡಿಸಿದ್ದಾರೆ.

ಇಂದು ಕೂಟಕ್ಕೆ ತೆರೆ
ಕಳೆದ 4 ದಿನಗಳಿಂದ ನಡೆಯುತ್ತಿರುವ ಏಷ್ಯನ್‌ ಅಥ್ಲೆಟಿಕ್ಸ್‌ ಕೂಟಕ್ಕೆ ಭಾನುವಾರ ಭುವನೇಶ್ವರದಲ್ಲಿ ಅದ್ಧೂರಿ ತೆರೆ ಬೀಳಲಿದೆ. ಜುಲೈ 6ರಂದು ಅಥ್ಲೆಟಿಕ್ಸ್‌ ಕೂಟ ಆರಂಭವಾಗಿತ್ತು. ಇದೀಗ ಮೂರು ದಿನಗಳಲ್ಲಿ ಪೂರೈಸಿದ್ದು ಭಾನುವಾರ ಅಂತಿಮ ದಿನವಾಗಿದೆ.
 

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.