Asia Cup 2023; ಏಕದಿನ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಗಡಿ ದಾಟಿದ ರೋಹಿತ್ ಶರ್ಮಾ


Team Udayavani, Sep 12, 2023, 3:56 PM IST

Asia Cup 2023; ಏಕದಿನ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಗಡಿ ದಾಟಿದ ರೋಹಿತ್ ಶರ್ಮಾ

ಕೊಲಂಬೊ: ಏಷ್ಯಾ ಕಪ್ 2023ರ ಕೂಟದ ಪ್ರತಿಯೊಂದು ಪಂದ್ಯದಲ್ಲೂ ಭಾರತೀಯ ಆಟಗಾರರು ದಾಖಲೆಗಳನ್ನು ಬರೆಯುತ್ತಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಸೋಮವಾರ ವಿರಾಟ್ ಕೊಹ್ಲಿ ಅವರು ಏಕದಿನ ಕ್ರಿಕೆಟ್ ನಲ್ಲಿ 13 ಸಾವಿರ ರನ್ ಗಳಿಸಿದ ಸಾಧನೆ ಮಾಡಿದ್ದರು. ಇದೀಗ ನಾಯಕ ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್ ನಲ್ಲಿ ಹತ್ತು ಸಾವಿರ ರನ್ ಗಡಿ ದಾಟಿದ ಸಾಧನೆ ಮಾಡಿದ್ದಾರೆ.

ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಗಡಿ ದಾಟಿದರು. ಕಸುನ್ ರಜಿತಾ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ರೋಹಿತ್ ಹತ್ತು ಸಾವಿರ ಏಕದಿನ ರನ್ ಕ್ಲಬ್ ಗೆ ಸೇರಿದರು.

ರೋಹಿತ್ ಶರ್ಮಾ ಅವರು ಹತ್ತು ಸಾವಿರ ರನ್ ಗಳಿಸಿದ ಭಾರತದ ಆರನೇ ಮತ್ತು ವಿಶ್ವದ 15ನೇ ಬ್ಯಾಟರ್ ಆಗಿ ಮೂಡಿಬಂದರು. ಹತ್ತು ಸಾವಿರ ಏಕದಿನ ರನ್ ಗಳಿಸಿದ 15 ಬ್ಯಾಟರ್‌ಗಳಲ್ಲಿ, ರೋಹಿತ್ ಅವರು ಸರಾಸರಿ (49.02 ಪ್ರಸ್ತುತ) ಯಲ್ಲಿ ಕೊಹ್ಲಿ (57.62) ಮತ್ತು ಧೋನಿ (50.57) ರಿಂದ ಮಾತ್ರ ಹಿಂದಿದ್ದಾರೆ.

ಅಲ್ಲದೆ ಅತೀ ಕಡಿಮೆ ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ರೋಹಿತ್ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಅತೀ ಕಡಿಮೆ ಇನ್ನಿಂಗ್ಸ್ ಗಳಲ್ಲಿ ಹತ್ತು ಸಾವಿರ ರನ್

205 – ವಿರಾಟ್ ಕೊಹ್ಲಿ

241 – ರೋಹಿತ್ ಶರ್ಮಾ

259 – ಸಚಿನ್ ತೆಂಡೂಲ್ಕರ್

263 – ಸೌರವ್ ಗಂಗೂಲಿ

266 – ರಿಕಿ ಪಾಂಟಿಂಗ್

ಏಕದಿನದಲ್ಲಿ 10,000 ರನ್ ಗಳಿಸಿದ ಭಾರತೀಯರು

18426 – ಸಚಿನ್ ತೆಂಡೂಲ್ಕರ್

13024 – ವಿರಾಟ್ ಕೊಹ್ಲಿ

11363 – ಸೌರವ್ ಗಂಗೂಲಿ

10889 – ರಾಹುಲ್ ದ್ರಾವಿಡ್

10773 – ಎಂಎಸ್ ಧೋನಿ

10001 – ರೋಹಿತ್ ಶರ್ಮಾ*

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.