ಭಾರತದ ಬಿಗಿ ಬೌಲಿಂಗ್ ಗೆ ಆಸೀಸ್ ತತ್ತರ : ಟೀಮ್ ಇಂಡಿಯಾ 53 ರನ್ ಗಳ ಮುನ್ನಡೆ


Team Udayavani, Dec 18, 2020, 4:37 PM IST

Untitled-1

ಅಡಿಲೇಡ್ :  ಭಾರತ – ಆಸ್ಟ್ರೇಲಿಯಾ ನಡುವಿನ ಮೊದಲ ಡೇ-ನೈಟ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ  ಭಾರತ ಮೇಲುಗೈ ಸಾಧಿಸಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 244 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದ್ದ ಭಾರತ, ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್ 191 ರನ್ ಗೆ

ಆಲೌಟ್ ಮಾಡಿ ಮಿಂಚಿತ್ತು.

ಆಸೀಸ್ ಪರ ಆರಂಭಿಕರಾಗಿ ಕ್ರೀಸ್ ಗಿಳಿದ ಮ್ಯಾಥ್ಯೂ ವೇಡ್ ಹಾಗೂ ಬರ್ನ್ಸ್ ಬುಮ್ರಾ ಬೌಲಿಂಗ್ ದಾಳಿಗೆ ವಿಕೆಟ್ ಒಪ್ಪಿಸಿದರು. ಇಬ್ಬರು ತಲಾ 8 ರನ್ ಪೇರಿಸಿದರು. ಮಾರ್ನಸ್ ಲಬುಶೇನ್ ಕೆಲ ಕಾಲ ಮೈದಾನದಲ್ಲಿ ನಿಂತು ತಂಡಕ್ಕೆ ಆಸರೆಯಾದರು. 47 ರನ್ ಗಳಿಸಿ ಉಮೇಶ್ ಯಾದವ್ ಎಸೆತದಲ್ಲಿ ಲಬುಶೇನ್ ವಿಕೆಟ್ ಒಪ್ಪಿಸಿದರು. ತಂಡದ ಪ್ರಮುಖ ಆಟಗಾರ ಸ್ಟೀವನ್ ಸ್ಮಿತ್ ಕೇವಲ 1 ರನ್ ಗಳಿಸಿ ಅಶ್ವಿನ್ ಗೆ ವಿಕೆಟ್ ಒಪ್ಪಿಸಿ, ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಉಳಿದಂತೆ ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್,ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಹೀಗೆ ಆಸೀಸ್ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಂತು ಬೇರೂರಲು ಭಾರತೀಯ ಬೌಲರ್ ಗಳು ಅವಕಾಶ ಮಾಡಿಕೊಡಲಿಲ್ಲ. ಅಂತಿಮ ಹಂತದಲ್ಲಿ ನಾಯಕ ಟಿಮ್ ಪೇನ್  73 ರನ್ ಗಳಿಸಿ ತಂಡವನ್ನು ಅಪಾಯದಿಂದ ಪಾರು ಮಾಡುವ ಪ್ರಯತ್ನ ಮಾಡಿದರೂ ಸಹ ಆಟಗಾರರು ನೆರವಾಗಲಿಲ್ಲ.

ಭಾರತದ ಪರ ಅಶ್ವಿನ್ 4 ವಿಕೆಟ್ ಪಡೆದರೆ, ಉಮೇಶ್ ಯಾದವ್ 3 ವಿಕೆಟ್, ಬುಮ್ರಾ 2 ವಿಕೆಟ್ ಪಡೆದು ಮಿಂಚಿದರು.

ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಭಾರತ, ಪ್ರಾರಂಭದಲ್ಲೇ ಪೃಥ್ವಿ ಶಾ ವಿಕೆಟ್ ಕಳೆದುಕೊಂಡಿತ್ತು. ಪೃಥ್ವಿ ಶಾ ಪ್ಯಾಟ್ ಕಮ್ಮಿನ್ಸ್ ಎಸೆತದಲ್ಲಿ 4 ರನ್  ಗಳಿಸಿ ಔಟ್ ಆದರು. 2ನೇ ದಿನದ ಅಂತ್ಯಕ್ಕೆ ಭಾರತ 9 ರನ್ಗೆ 1 ವಿಕೆಟ್ ಕಳೆದುಕೊಂಡು 62 ರನ್ ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.