ಗೆದ್ದು ನಂ.1 ಸ್ಥಾನ ಮರಳಿ ಪಡೆದ ಆಸೀಸ್‌

Team Udayavani, Sep 9, 2020, 7:01 PM IST

ಗೆದ್ದು ನಂ.1 ಸ್ಥಾನ ಮರಳಿ ಪಡೆದ ಆಸೀಸ್‌

ಸೌತಾಂಪ್ಟನ್: ಇಂಗ್ಲೆಂಡ್‌ ಎದುರಿನ ಅಂತಿಮ ಟಿ20 ಪಂದ್ಯವನ್ನು 5 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯ ತನ್ನ ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿತು. ಜತೆಗೆ ನಂ.1 ಗೌರವವನ್ನೂ ಮರಳಿ ಸಂಪಾದಿಸಿತು.

ಸತತ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡ ಬಳಿಕ ಇಂಗ್ಲೆಂಡ್‌ ಟಿ20 ತಂಡ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ನೆಗೆದಿತ್ತು. ಆದರೀಗ 3ನೇ ಪಂದ್ಯವನ್ನು ಜಯಿಸುವ ಮೂಲಕ ಕಾಂಗರೂ ಪಡೆ ಮತ್ತೆ ನಂ.1 ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಯಿತು. ಸರಣಿಯನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡರಷ್ಟೇ ಇಂಗ್ಲೆಂಡ್‌ ಅಗ್ರಸ್ಥಾನದಲ್ಲಿ ಗಟ್ಟಿಯಾಗುತ್ತಿತ್ತು.

ದಡ ಸೇರಿಸಿದ ಮಾರ್ಷ್‌
ಮಂಗಳವಾರ ರಾತ್ರಿ ನಡೆದ ಮೇಲಾಟದಲ್ಲಿ ಇಂಗ್ಲೆಂಡ್‌ 6 ವಿಕೆಟಿಗೆ 145 ರನ್‌ ಗಳಿಸಿದರೆ, ಆಸ್ಟ್ರೇಲಿಯ 19.3 ಓವರ್‌ಗಳಲ್ಲಿ 5 ವಿಕೆಟಿಗೆ 146 ರನ್‌ ಬಾರಿಸಿ ಗೆದ್ದು ಬಂದಿತು. ಮಿಚೆಲ್‌ ಮಾರ್ಷ್‌ ಅಜೇಯ 39 ರನ್‌ ಬಾರಿಸಿ ತಂಡವನ್ನು ದಡ ಮುಟ್ಟಿಸಿದರು. ನಾಯಕ ಆರನ್‌ ಫಿಂಚ್‌ ಕೂಡ 39 ರನ್‌ ಹೊಡೆದರು.

ಇಂಗ್ಲೆಂಡ್‌ ತಂಡ ಸ್ಟಾರ್‌ ಆಟಗಾರ ಜಾಸ್‌ ಬಟ್ಲರ್‌ ಮತ್ತು ನಾಯಕ ಇಯಾನ್‌ ಮಾರ್ಗನ್‌ ಸೇವೆಯಿಂದ ವಂಚಿತವಾಗಿತ್ತು. ಮೊಯಿನ್‌ ಅಲಿ ತಂಡವನ್ನು ಮುನ್ನಡೆಸಿದರು. ಇನ್ನೊಂದೆಡೆ ಡೇವಿಡ್‌ ವಾರ್ನರ್‌ ಮತ್ತು ಪ್ಯಾಟ್‌ ಕಮಿನ್ಸ್‌ ಅವರಿಗೆ ಆಸ್ಟ್ರೇಲಿಯ ವಿಶ್ರಾಂತಿ ನೀಡಿತ್ತು.
ಈ ತಂಡಗಳಿನ್ನು ಶುಕ್ರವಾರದಿಂದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ಎಲ್ಲ ಪಂದ್ಯಗಳು ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫ‌ರ್ಡ್‌ ಅಂಗಳದಲ್ಲಿ ನಡೆಯಲಿವೆ.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-6 ವಿಕೆಟಿಗೆ 145 (ಬೇರ್‌ಸ್ಟೊ 55, ಡೆನ್ಲಿ ಔಟಾಗದೆ 29, ಅಲಿ 23, ಝಂಪ 34ಕ್ಕೆ 2). ಆಸ್ಟ್ರೇಲಿಯ-19.3 ಓವರ್‌ಗಳಲ್ಲಿ 5 ವಿಕೆಟಿಗೆ 146 (ಫಿಂಚ್‌ 39, ಮಾರ್ಷ್‌ ಔಟಾಗದೆ 39, ಸ್ಟೋಯನಿಸ್‌ 26, ಅಗರ್‌ ಔಟಾಗದೆ 16, ರಶೀದ್‌ 21ಕ್ಕೆ 3). ಪಂದ್ಯಶ್ರೇಷ್ಠ: ಮಿಚೆಲ್‌ ಮಾರ್ಷ್‌. ಸರಣಿಶ್ರೇಷ್ಠ: ಜಾಸ್‌ ಬಟ್ಲರ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.