ಸೈನಾ ನೆಹ್ವಾಲ್ ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ

Team Udayavani, Jan 29, 2020, 12:30 PM IST

ನವದೆಹಲಿ: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಇಂದು ಭಾರತೀಯ ಜನತಾ ಪಕ್ಷವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹರ್ಯಾಣ ಮೂಲದ ಈ ಸ್ಟಾರ್ ಆಟಗಾರ್ತಿ ಕಮಲ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಮಾಹಿತಿಯನ್ನು ಪಕ್ಷದ ಮೂಲಗಳು ಖಚಿತಪಡಿಸಿವೆ.

ಸೈನಾ ಅವರು ಹರ್ಯಾಣ ಮೂಲದವರಾಗಿರುವುದರಿಂದ ಪಕ್ಷಕ್ಕೆ ಇವರ ಸೇರ್ಪಡೆಯಿಂದ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತನಗೆ ಲಾಭವಾಗಬಹುದು ಎಂಬ ವಿಶ್ವಾಸದಲ್ಲಿ ಬಿಜೆಪಿ ಇದೆ ಎನ್ನಲಾಗುತ್ತಿದೆ.

ಕಳೆದ ಹರ್ಯಾಣ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಪೋಗಟ್ ಸೋದರಿಯರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಮಾಜೀ ಕ್ರಿಕೆಟ್ ಆಟಗಾರ ಗೌತಮ್ ಗಂಬೀರ್ ಅವರು ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

29 ವರ್ಷದ ಸೈನಾ ನೆಹ್ವಾಲ್ ಅವರು ಇದುವರೆಗೆ 24 ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2009ರಲ್ಲಿ ವಿಶ್ವದ ದ್ವಿತೀಯ ಶ್ರೇಯಾಂಕದ ಆಟಗಾರ್ತಿಯಾಗಿದ್ದ ಈಕೆ 2015ರಲ್ಲಿ ನಂಬರ್ ವನ್ ಪಟ್ಟವನ್ನೂ ಸಹ ಅಲಂಕರಿಸಿದ್ದರು. ಸದ್ಯ ಸೈನಾ ಕಳಪೆ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ