ಮುಷ್ತಾಕ್‌ ಅಲಿ: ಸೋಲಂಕಿ ಸಾಹಸ; ಬರೋಡ ಸೆಮಿ ಪ್ರವೇಶ


Team Udayavani, Jan 28, 2021, 7:10 AM IST

Untitled-1

ಅಹ್ಮದಾಬಾದ್‌: ಅತ್ಯಂತ ರೋಚಕ ಹಣಾಹಣಿಯಲ್ಲಿ ಹರ್ಯಾಣವನ್ನು 8 ವಿಕೆಟ್‌ಗಳಿಂದ ಮಣಿಸಿದ ಆತಿಥೇಯ ಬರೋಡ “ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ’ ಟಿ20 ಪಂದ್ಯಾವಳಿಯ ಸೆಮಿಫೈನಲ್‌ಗೆ ಲಗ್ಗೆ ಇರಿಸಿದೆ.

ಬುಧವಾರ ನಡೆದ 3ನೇ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಹರ್ಯಾಣ 7 ವಿಕೆಟಿಗೆ 148 ರನ್‌ ಗಳಿಸಿತು. ಜವಾಬಿತ್ತ ಬರೋಡ ಭರ್ತಿ 20 ಓವರ್‌ಗಳಲ್ಲಿ 2 ವಿಕೆಟಿಗೆ 150 ರನ್‌ ಬಾರಿಸಿ ಅಮೋಘ ಗೆಲುವು ಒಲಿಸಿಕೊಂಡಿತು.

ವಿಕೆಟ್‌ ಉಳಿಸಿಕೊಂಡರೂ ಬರೋಡದ ರನ್‌ಗತಿ ತೀರಾ ಕಳಪೆಯಾಗಿತ್ತು. ಅಂತಿಮ ಓವರಿನಲ್ಲಿ 18 ರನ್‌, ಕೊನೆಯ 3 ಎಸೆತಗಳಲ್ಲಿ 15 ರನ್‌ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿತು. ಆದರೂ ಇದನ್ನು ಮೆಟ್ಟಿ ನಿಂತಿತು. ವಿಷ್ಣು ಸೋಲಂಕಿ ಗೆಲುವಿನ ಹೀರೋ ಆಗಿ ಮೂಡಿಬಂದರು.

ಸೋಲನ್ನು ಮೆಟ್ಟಿ ನಿಂತ ಸೋಲಂಕಿ :

ಸುಮಿತ್‌ ಕುಮಾರ್‌ ಅಂತಿಮ ಓವರ್‌ ಎಸೆಯಲು ಬಂದಾಗ ಬರೋಡ ಗೆಲುವಿಗೆ ಬರೋಬ್ಬರಿ 18 ರನ್‌ ಅಗತ್ಯವಿತ್ತು. ಮೊದಲ 3 ಎಸೆತಗಳಲ್ಲಿ ಬಂದದ್ದು 3 ಸಿಂಗಲ್ಸ್‌ ಮಾತ್ರ. ಹರ್ಯಾಣ ಗೆಲುವಿನ ಲೋಕದಲ್ಲಿ ವಿಹರಿಸುತ್ತಿತ್ತು. ಆದರೆ ವನ್‌ಡೌನ್‌ ಬ್ಯಾಟ್ಸ್‌ಮನ್‌ ವಿಷ್ಣು ಸೋಲಂಕಿ ಮಾತ್ರ ಸೋಲನ್ನು ಸಹಿಸಲು ಸಿದ್ಧರಿರಲಿಲ್ಲ. ಅಂತಿಮ 3 ಎಸೆತಗಳನ್ನು ಕ್ರಮವಾಗಿ ಸಿಕ್ಸರ್‌, ಫೋರ್‌, ಸಿಕ್ಸರ್‌ಗೆ ಬಡಿದಟ್ಟಿ ಟಿ20 ಇತಿಹಾಸದ ಅಮೋಘ ಗೆಲುವಿಗೆ ಕಾರಣರಾದರು. ಸೋಲಂಕಿ ಕೊಡುಗೆ ಅಜೇಯ 71 ರನ್‌ (46 ಎಸೆತ, 4 ಬೌಂಡರಿ, 5 ಸಿಕ್ಸರ್‌).

ತಮಿಳುನಾಡಿಗೆ ಸುಲಭ ಜಯ :

ಮಂಗಳವಾರ ರಾತ್ರಿ ನಡೆದ ದ್ವಿತೀಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ತಮಿಳುನಾಡು ತಂಡ ಹಿಮಾಚಲ ಪ್ರದೇಶವನ್ನು 5 ವಿಕೆಟ್‌ಗಳಿಂದ ಸುಲಭದಲ್ಲಿ ಮಣಿಸಿತು. ಹಿಮಾಚಲ ಪ್ರದೇಶ 9ಕ್ಕೆ 135 ರನ್‌ ಗಳಿಸಿದರೆ, ತಮಿಳುನಾಡು 17.5 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 141 ರನ್‌ ಬಾರಿಸಿ ಸೆಮಿಫೈನಲ್‌ ತಲುಪಿತು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.