ಅಂಡರ್ 19 ವಿಶ್ವಕಪ್ ಗೆದ್ದ ತಂಡಕ್ಕೆ ಬಹುಮಾನ ಘೋಷಿಸಿದ ಬಿಸಿಸಿಐ


Team Udayavani, Feb 6, 2022, 12:52 PM IST

ಅಂಡರ್ 19 ವಿಶ್ವಕಪ್ ಗೆದ್ದ ತಂಡಕ್ಕೆ ಬಹುಮಾನ ಘೋಷಿಸಿದ ಬಿಸಿಸಿಐ

ಮುಂಬೈ: ಆ್ಯಂಟಿಗಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಭಾರತೀಯ ಅಂಡರ್ 19 ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಗದು ಬಹುಮಾನವನ್ನು ಘೋಷಿಸಿದೆ.

ಯಶ್ ಧುಲ್ ನೇತೃತ್ವದಲ್ಲಿ, ಭಾರತವು 4 ವಿಕೆಟ್ ಮತ್ತು 14 ಎಸೆತ ಬಾಕಿ ಇರುವಂತೆ 190 ರನ್ ಚೇಸ್ ಮಾಡಿ ದಾಖಲೆಯ 5 ನೇ ಬಾರಿಗೆ ಅಂಡರ್ 19 ವಿಶ್ವಕಪ್ ಚಾಂಪಿಯನ್ ಆಗಿ ಕಿರೀಟವನ್ನು ಅಲಂಕರಿಸಿತು.

ದೊಡ್ಡ ಫೈನಲ್‌ನಲ್ಲಿ ಭಾರತ ಜಯ ಸಾಧಿಸಿದ ಕೂಡಲೇ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಾಮಾಜಿಕ ಮಾಧ್ಯಮದಲ್ಲಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯ ಸದಸ್ಯರಿಗೆ ನಗದು ಬಹುಮಾನವನ್ನು ಘೋಷಿಸಿದರು. ಪ್ರತಿ ಆಟಗಾರನಿಗೆ 40 ಲಕ್ಷ ರೂ., ಸಹಾಯಕ ಸಿಬ್ಬಂದಿಗೆ 25 ಲಕ್ಷ ರೂ. ಬಹುಮಾನವನ್ನು ಅವರು ಘೋಷಿಸಿದ್ದಾರೆ.

“ಅಂಡರ್ 19 ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ಭಾರತ ತಂಡಕ್ಕೆ ಪ್ರತಿ ಆಟಗಾರನಿಗೆ 40 ಲಕ್ಷಗಳು ಮತ್ತು ಪ್ರತಿ ಸಹಾಯಕ ಸಿಬ್ಬಂದಿಗೆ 25 ಲಕ್ಷಗಳ ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗಿದೆ. ನೀವು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದೀರಿ” ಎಂದು ಜಯ್ ಶಾ ತಿಳಿಸಿದ್ದಾರೆ.

ಇಂಗ್ಲೆಂಡ್ ತಂಡ 44.5 ಓವರ್ ಗಳಲ್ಲಿ 189 ರನ್ ಗಳಿಸಿದರೆ, ಭಾರತ ಈ ಗುರಿಯನ್ನು 47.4 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ತಲುಪಿತು. ಈ ಮೂಲಕ ಮತ್ತೊಂದು ಕಪ್ ಗೆದ್ದುಕೊಂಡಿತು.

ಇದನ್ನೂ ಓದಿ:ಭಾರತ ಕಿರಿಯರ ತಂಡದ ಹಿರಿಯ ಸಾಧನೆ: ಅಂಡರ್ 19 ವಿಶ್ವಕಪ್ ಗೆದ್ದ ಯಶ್ ಧುಲ್ ಬಳಗ

ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಶೋಚನೀಯ ಆರಂಭ ಪಡೆಯಿತು. ಭಾರತದ ಬೌಲರ್ ಗಳ ದಾಳಿಗೆ ಕುಸಿದ ಆಂಗ್ಲರು, ಕೇವಲ 47 ರನ್ ಗೆ ಐದು ವಿಕೆಟ್ ಕಳೆದುಕೊಂಡಿದ್ದರು. ನಂತರ ತಂಡವನ್ನು ಆಧರಿಸಿದ ಜೇಮ್ಸ್ 95 ರನ್ ಗಳಿಸಿದರು. ಜೇಮ್ಸ್ ಸೇಲ್ಸ್ ಅಜೇಯ 34 ರನ್ ಗಳಿಸಿದರು. ಇವರಿಬ್ಬರ ನೆರವಿನಿಂದ ಇಂಗ್ಲೆಂಡ್ ತಂಡ 150 ರ ಗಡಿ ತಲುಪಿತು.

ಭಾರತದ ಪರ ಮಾರಕ ದಾಳಿ ಸಂಘಟಿಸಿದ ರಾಜ್ ಬಾವ ಐದು ವಿಕೆಟ್ ಕಿತ್ತರೆ, ರವಿ ಕುಮಾರ್ ನಾಲ್ಕು ವಿಕೆಟ್ ಕಿತ್ತರು. ಒಂದು ವಿಕೆಟ್ ಕೌಶಲ್ ತಾಂಬೆ ಪಾಲಾಯಿತು.

ಗುರಿ ಬೆನ್ನತ್ತಿದ ಭಾರತ ತಂಡ ಆರಂಭದಲ್ಲೇ ರಘುವಂಶಿ ವಿಕೆಟ್ ಕಳೆದುಕೊಂಡಿತು. ನಂತರ ಶೇಕ್ ರಶೀದ್, ನಿಶಾಂತ್ ಸಿಂಧು ಅರ್ಧಶತಕದ ನೆರವಿನಿಂದ ಗುರಿ ಬೆನ್ನತ್ತಿತು. ಇಬ್ಬರೂ ತಲಾ 50 ರನ್ ಗಳಿಸಿದರು. ಆಲ್ ರೌಂಡ್ ಪ್ರದರ್ಶನ ನೀಡಿದ ರಾಜ್ ಬಾವಾ 35 ರನ್ ಗಳಿಸಿದರು. ಕೊನೆಯಲ್ಲಿ ದಿನೇಶ್ ಬಾನಾ ಭರ್ಜರಿ ಸಿಕ್ಸರ್ ಮೂಲಕ ತಂಡಕ್ಕೆ ಜಯ ತಂದಿತ್ತರು.

ಟಾಪ್ ನ್ಯೂಸ್

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌

ಮಗಳ ಬರ್ತ್‌ಡೇಗೆ 1 ಲಕ್ಷ ಪಾನಿ ಪುರಿ ಹಂಚಿಕೆ!

ಮಗಳ ಬರ್ತ್‌ಡೇಗೆ 1 ಲಕ್ಷ ಪಾನಿ ಪುರಿ ಹಂಚಿಕೆ!

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

20–FIBA—U-18

ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ಗೆ ಸಕಲ ಸಿದ್ಧತೆ

ಇಂದಿನಿಂದ ಏಕದಿನ ಸರಣಿ: ಜಿಂಬಾಬ್ವೆ ವಿರುದ್ಧ ಜಬರ್ದಸ್ತ್ ಆಟದ ನಿರೀಕ್ಷೆ

ಇಂದಿನಿಂದ ಏಕದಿನ ಸರಣಿ: ಜಿಂಬಾಬ್ವೆ ವಿರುದ್ಧ ಜಬರ್ದಸ್ತ್ ಆಟದ ನಿರೀಕ್ಷೆ

2023-2027 ಕ್ರಿಕೆಟ್‌ ಋತು: 38 ಟೆಸ್ಟ್‌ , 39 ಏಕದಿನ ಪಂದ್ಯ ಆಡಲಿದೆ ಭಾರತ

2023-2027 ಕ್ರಿಕೆಟ್‌ ಋತು: 38 ಟೆಸ್ಟ್‌ , 39 ಏಕದಿನ ಪಂದ್ಯ ಆಡಲಿದೆ ಭಾರತ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

1re

ವಿದ್ಯಾರ್ಥಿಗಳ ಹೋರಾಟ ಯಶಸ್ವಿ: ವಾಡಿ ಇಂದಿರಾಗಾಂಧಿ ವಸತಿ ಶಾಲೆ ಸ್ಥಳಾಂತರ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

tdy-16

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.